Featured

ಇರಾನ್-ಇಸ್ರೇಲ್ ಯುದ್ಧ ಎಫೆಕ್ಟ್ : ರಾಜ್ಯದ ವಿವಿಧೆಡೆ LPG ವ್ಯತ್ಯಯ, ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ – vishwanews24

ಇರಾನ್-ಇಸ್ರೇಲ್ ಯುದ್ಧ ಎಫೆಕ್ಟ್ : ರಾಜ್ಯದ ವಿವಿಧೆಡೆ LPG ವ್ಯತ್ಯಯ, ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

ಬೆಂಗಳೂರು: ಇರಾನ್-ಇಸ್ರೇಲ್ ಮಧ್ಯೆ ನಡೆಯುತ್ತಿರುವ ಯುದ್ಧದ ಎಫೆಕ್ಟ್ ಭಾರತದ ಮೇಲೆ ಭಾರೀ ಪರಿಣಾಮ ಬೀರಿದೆ. ರಾಜ್ಯದ ವಿವಿಧೆಡೆ ಹೋಟೆಲ್‌ಗಳಿಗೆ ಎಲ್‌ಪಿಜಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಸಿಲಿಂಡರ್ ಜೊತೆ ಅಡುಗೆ ಎಣ್ಣೆಗೂ ಅಭಾವ ಸೃಷ್ಟಿಯಾಗಿದ್ದು, ಹೋಟೆಲ್ ಮಾಲೀಕರು ಹೈರಾಣಾಗಿದ್ದಾರೆ.

ಇಸ್ರೇಲ್-ಇರಾನ್  ಯುದ್ದದ ಎಫೆಕ್ಟ್ನಿಂದಾಗಿ ಕರ್ನಾಟಕದಲ್ಲಿ ಸಿಲಿಂಡರ್ ಸಮಸ್ಯೆ ಮಿತಿ ಮೀರಿದೆ. ರಾಜ್ಯದ ರಾಮನಗರ, ಮೈಸೂರು, ಚಿಕ್ಕಬಳ್ಳಾಪುರ, ಧಾರವಾಡ, ಗದಗ ಸೇರಿದಂತೆ ರಾಜ್ಯದ ಹಲವೆಡೆ ಎಲ್‌ಪಿಜಿ ಪೂರೈಕೆಯಲ್ಲಿ ಭಾರಿ ವ್ಯತ್ಯಯ ಉಂಟಾಗಿದೆ.

ರಾಮನಗರದಲ್ಲೂ ಹೋಟೆಲ್ ಉದ್ಯಮಕ್ಕೆ ಕಮರ್ಷಿಯಲ್ ಸಿಲಿಂಡರ್ ಪೂರೈಕೆ ವಿಳಂಬವಾಗ್ತಿದ್ದು, ಸಮರ್ಪಕವಾಗಿ ಎಲ್‌ಪಿಜಿ ಪೂರೈಕೆ ಆಗದಿದ್ರೆ ಇನ್ನೆರಡು ಮೂರು ದಿನಗಳಲ್ಲಿ ಹೋಟೆಲ್ ಸ್ಥಗಿತಗೊಳ್ಳುವ ಆತಂಕ ಶುರುವಾಗಿದೆ. ಸಿಲಿಂಡರ್ ಜೊತೆಗೆ ಅಡುಗೆ ಎಣ್ಣೆ ಬೆಲೆಯಲ್ಲೂ ಏರಿಕೆಯಾಗಿದ್ದು, ಹೋಟೆಲ್ ಮಾಲೀಕರು ಹೈರಾಣಾಗಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಈ ಬಗ್ಗೆ ಗಮನಹರಿಸುವಂತೆ ಹೋಟೆಲ್ ಮಾಲೀಕರ ಮನವಿ ಮಾಡಿದ್ದಾರೆ.

ಇದನ್ನೂ ಓದಿ:

ಇನ್ನು, ಸಾಂಸ್ಕೃತಿಕ ರಾಜಧಾನಿ ಮೈಸೂರಲ್ಲೂ ಪರಿಸ್ಥಿತಿ ಭಿನ್ನವಾಗಿಲ್ಲ. ಬಹಳಷ್ಟು ಹೋಟೆಲ್‌ಗಳು ವಾಣಿಜ್ಯ ಸಿಲಿಂಡರ್‌ಗಳು ಸಿಗದೆ ಅರ್ಧಕ್ಕೆ ವ್ಯಾಪಾರ ನಿಲ್ಲಿಸುವ ಪರಿಸ್ಥಿತಿ ಬಂದಿದೆ. ಇನ್ನೊಂದು ವಾರ ಇದೇ ಪರಿಸ್ಥಿತಿ ಮುಂದುವರಿದರೆ ಮೈಸೂರಿನಲ್ಲಿ ಶೇ.70ರಷ್ಟು ಹೋಟೆಲ್‌ಗಳು ತಾತ್ಕಾಲಿಕವಾಗಿ ಮುಚ್ಚಲಿವೆ.

ಚಿಕ್ಕಬಳ್ಳಾಪುರದಲ್ಲೂ ಎಲ್‌ಪಿಜಿ ವಾಣಿಜ್ಯ ಬಳಕೆಯ ಸಿಲಿಂಡರ್ ಸಪ್ಲೈ ಬಂದ್ ಆಗಿದ್ದು, ಹೋಟೆಲ್ ಮಾಲೀಕರು ಆತಂಕಕ್ಕೆ ಒಳಗಾಗಿದ್ದಾರೆ. ಚಿಕ್ಕಬಳ್ಳಾಪುರಕ್ಕೆ ಬೆಂಗಳೂರಿನಿಂದಲೇ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಸಪ್ಲೈ ಆಗುತ್ತಿದ್ದು, ಈಗ ಸ್ಟಾಕ್ ಇಲ್ಲ ಎಂದು ಡಿಸ್ಟ್ರಿಬ್ಯೂಟರ್ಸ್ ಹೇಳ್ತಿದ್ರೆ, ಇದರಿಂದ ಸಹಜವಾಗಿ ಉಳಿದಿರೋ ಸಿಲಿಂಡರ್‌ಗಳ ಮೂಲಕ ಇತಿಮಿತಿಯಲ್ಲಿ ಗ್ಯಾಸ್ ಬಳಕೆ ಮಾಡುವಂತಾಗಿದ್ದು, ನಾಳೆ ಗ್ಯಾಸ್ ಸಪ್ಲೈ ಆಗದಿದ್ರೆ, ಹೋಟೆಲ್ ಬಂದ್ ಮಾಡುವ ಪರಿಸ್ಥಿತಿ ಎದುರಾಗಿದೆ.

ಹುಬ್ಬಳ್ಳಿ ಧಾರವಾಡ ನಗರದಲ್ಲಿ ಕೂಡಾ ಸಿಲಿಂಡರ್ ಸಿಕ್ತಿಲ್ಲ. ಕಮರ್ಷಿಯಲ್ ಸಿಲಿಂಡರ್ ಅಭಾವ ಸೃಷ್ಟಿ ಹಿನ್ನೆಲೆ ಧಾರವಾಡ ಹೋಟೆಲ್ ಮಾಲೀಕರ ಸಂಘದ ಮಹೇಶ ಶೆಟ್ಟಿ ಮಾತನಾಡಿದ್ದಾರೆ. ಎರಡು ಸಿಲಿಂಡರ್ ಕೇಳಿದರೆ ಒಂದನ್ನ ಕೊಡಲಾಗುತ್ತಿದೆ. ಐಒಸಿಯವರು ಟೋಟಲ್ ಸಿಲಿಂಡರ್ ಬಂದ್ ಮಾಡಿದ್ದಾರೆ. ಬಿಪಿಸಿಎಸ್ ಮತ್ತು ಹೆಚ್‌ಪಿಯವರು ಸಭೆ ಕರೆದಿದ್ದಾರೆ. ನಮ್ಮ ಹೋಟೆಲ್ ಉದ್ಯಮ ಸಿಲಿಂಡರ್ ಮೇಲೆ ಅವಲಂಬಿಸಿದೆ. ಸಿಲಿಂಡರ್ ಸಿಗದೇ ಇದ್ದಲ್ಲಿ ಹೋಟೆಲ್ ಉದ್ಯಮ ಸಂಪೂರ್ಣ ಬಂದ್ ಆಗಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:

ಈ ಮಧ್ಯೆ, ಯುದ್ಧದ ಎಫೆಕ್ಟ್ ಗದಗ ಜಿಲ್ಲೆಯ ಹೋಟೆಲ್‌ಗಳಿಗೂ ತಟ್ಟಿದ್ದು, ಕಮರ್ಷಿಯಲ್ ಸಿಲಿಂಡರ್ ಸಪ್ಲೈ ಬಂದ್ ಆಗಿದೆ. ಕಮರ್ಷಿಯಲ್ ಗ್ಯಾಸ್ ಸಿಲಿಂಡರ್‌ಗಾಗಿ ಹೋಟೆಲ್‌ನವರು ಪರದಾಡುವ ಪರಸ್ಥಿತಿ ಎದುರಾಗಿದೆ. ಸಿಲಿಂಡರ್ ಸಿಗದಕ್ಕೆ ಹೋಟೆಲ್ ಬಂದ್ ಆಗುವ ಆತಂಕ ಎದುರಾಗಿದೆ. ಹಾಗಾಗಿ ಸಿಲಿಂಡರ್ ಸಿಗುವವರೆಗೆ ಬಂದ್ ಮಾಡುವುದು ಅನಿವಾರ್ಯ. ಹೋಟೆಲ್ ಬಂದ್ ಆದ್ರೆ, ಸಾರ್ವಜನಿಕರು, ಮಾಲೀಕರು, ಸಿಬ್ಬಂದಿ ಸೇರಿದಂತೆ ಅನೇಕರಿಗೆ ತೊಂದರೆ ಆಗುತ್ತೆ. ಆದ್ದರಿಂದ ಕಮರ್ಷಿಯಲ್ ಸಿಲಿಂಡರ್ ಸಪ್ಲೈ ಮಾಡುವಂತೆ ಹೋಟೆಲ್ ಮಾಲೀಕರು ಒತ್ತಾಯಿಸಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago