ಬೆಂಗಳೂರು : ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧ ತೀವ್ರಗೊಂಡಿರುವ ಹಿನ್ನೆಲೆ ಅಂತಾರಾಷ್ಟ್ರೀಯ ವಿಮಾನ ಸಂಚಾರದ ಮೇಲೆ ಪರಿಣಾಮ ಬೀರುತ್ತಿದೆ. ಇದರ ಪರಿಣಾಮವಾಗಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾರ್ಚ್ 9 ರಂದೂ ಸಹ ಹಲವು ವಿಮಾನಗಳ ಹಾರಾಟ ರದ್ದುಗೊಂಡಿದೆ. ಅರಬ್ ರಾಷ್ಟ್ರಗಳಿಗೆ ತೆರಳಬೇಕಿದ್ದ ಮತ್ತು ಅಲ್ಲಿಂದ ಆಗಮಿಸಬೇಕಿದ್ದ ಒಟ್ಟು 21 ವಿಮಾನಗಳ ಹಾರಾಟವನ್ನು ರದ್ದುಪಡಿಸಲಾಗಿದೆ. ಪ್ರಯಾಣಿಕರ ಸುರಕ್ಷತೆ ಹಾಗೂ ವಾಯುಪ್ರದೇಶದ ಅನಿಶ್ಚಿತತೆ ಹಿನ್ನೆಲೆಯಲ್ಲಿ ಏರ್‌ಲೈನ್ ಕಂಪನಿಗಳು ಈ ನಿರ್ಧಾರ ಕೈಗೊಂಡಿವೆ.
ಅಧಿಕೃತ ಮಾಹಿತಿ ಪ್ರಕಾರ, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿವಿಧ ಅರಬ್ ರಾಷ್ಟ್ರಗಳಿಗೆ ತೆರಳಬೇಕಿದ್ದ 11 ವಿಮಾನಗಳ ಹಾರಾಟ ರದ್ದಾಗಿದೆ. ಅದೇ ರೀತಿ ವಿದೇಶಗಳಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಬೇಕಿದ್ದ 10 ವಿಮಾನಗಳೂ ರದ್ದುಗೊಂಡಿವೆ.
ಇದನ್ನೂ ಓದಿ:
ಒಟ್ಟು 21 ವಿಮಾನಗಳ ಹಾರಾಟ ರದ್ದಾದ ಕಾರಣ, ಪ್ರಯಾಣಿಕರಿಗೆ ಸಾಕಷ್ಟು ತೊಂದರೆ ಉಂಟಾಗಿದೆ. ವಿಮಾನ ರದ್ದಾದ ಬಗ್ಗೆ ಸಂಬಂಧಿತ ಏರ್‌ಲೈನ್ ಸಂಸ್ಥೆಗಳು ಪ್ರಯಾಣಿಕರಿಗೆ ಮುಂಚಿತವಾಗಿ ಮಾಹಿತಿ ನೀಡಿರುವುದಾಗಿ ತಿಳಿದುಬಂದಿದೆ.
ಇರಾನ್–ಇಸ್ರೇಲ್ ನಡುವಿನ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿರುವುದರಿಂದ ಮುಂದಿನ ದಿನಗಳಲ್ಲಿಯೂ ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಮಧ್ಯಪ್ರಾಚ್ಯ ದೇಶಗಳತ್ತ ಪ್ರಯಾಣಿಸುವವರು ತಮ್ಮ ವಿಮಾನಗಳ ಸ್ಥಿತಿಯನ್ನು ಮುಂಚಿತವಾಗಿ ಪರಿಶೀಲಿಸಿಕೊಳ್ಳುವಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.
ಹೆಚ್ಚುತ್ತಿರುವ ಇರಾನ್-ಇಸ್ರೇಲ್ ಸಂಘರ್ಷ ಮತ್ತು ಪಶ್ಚಿಮ ಏಷ್ಯಾದಲ್ಲಿ ವಾಯು ಮಾರ್ಗಗಳ ಮುಚ್ಚುವಿಕೆಯಿಂದಾಗಿ ಕಳೆದ ವಾರದಿಂದ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ವಿಮಾನ ಕಾರ್ಯಾಚರಣೆಗಳು ತೀವ್ರವಾಗಿ ಅಸ್ತವ್ಯಸ್ತಗೊಂಡಿವೆ. ಮಾರ್ಚ್ 1 ರಿಂದ ಮಾರ್ಚ್ 9 ರ ನಡುವೆ, ಬೆಂಗಳೂರು ವಿಮಾನ ನಿಲ್ದಾಣದಲ್ಲಿ 200 ಕ್ಕೂ ಹೆಚ್ಚು ಅಂತರರಾಷ್ಟ್ರೀಯ ವಿಮಾನಗಳನ್ನು ರದ್ದುಪಡಿಸಲಾಗಿದೆ. ವಾರದ ಆರಂಭದಲ್ಲಿ ಅತ್ಯಂತ ಗಮನಾರ್ಹ ಅಡಚಣೆಗಳು ಸಂಭವಿಸಿದ್ದವು. ಮಾರ್ಚ್ 2 ರಂದು 72 ವಿಮಾನ ಹಾರಾಟ ಸ್ಥಗಿತ ಮತ್ತು ಮಾರ್ಚ್ 4 ರಂದು 34 ವಿಮಾನ ಹಾರಾಟ ಸ್ಥಗಿತಗೊಳಿಸಲಾಗಿತ್ತು.
ಇದನ್ನೂ ಓದಿ:
ವಿಮಾನಯಾನ ಸಂಸ್ಥೆಗಳು ಸೀಮಿತವಾಗಿ ಕಾರ್ಯಾಚರಣೆಗಳನ್ನು ಪುನರಾರಂಭಿಸಲು ಪ್ರಯತ್ನಿಸಿದ್ದರೂ, ಮಾರ್ಚ್ 9 ರಂದು ಮತ್ತೆ 21 ವಿಮಾನಗಳನ್ನು ರದ್ದುಪಡಿಸಲಾಗಿದೆ. ಇದು ಸಾವಿರಾರು ಪ್ರಯಾಣಿಕರನ್ನು ಸಂಕಷ್ಟಕ್ಕೆ ಸಿಲುಕಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…