ಟೆಹರಾನ್: ದಕ್ಷಿಣ ಇರಾನ್‌ನ ಪ್ರಮುಖ ಶಿಯಾ ಮುಸ್ಲಿಂ ಮಸೀದಿ ಮೇಲೆ ಬುಧವಾರ ಉಗ್ರರು ಭೀಕರು ದಾಳಿ ನಡೆಸಿದ ಪರಿಣಾಮ ಕನಿಷ್ಠ 15 ಜನರು ಸಾವನ್ನಪ್ಪಿ, ೪೦ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ನಡೆದಿದೆ.
ಶಿರಾಜ್ ನಗರದ ಶಾ ಚೆರಾಗ್ ನಲ್ಲಿ ಸಂಜೆಯ ಪ್ರಾರ್ಥನೆಯ ಸಮಯದಲ್ಲಿ ನುಗ್ಗಿದ ಶಸ್ತ್ರಸಜ್ಜಿತ ಭಯೋತ್ಪಾದಕರು ಮನಬಂದಂತೆ ಗುಂಡು ಹಾರಿಸಿದ್ದಾರೆ.
ಇರಾನಿನ ಮಾಧ್ಯಮಗಳು ಮಸೀದಿಯೊಳಗೆ ರಕ್ತಸಿಕ್ತ ದೇಹಗಳನ್ನು ಬಟ್ಟೆಯಿಂದ ಮುಚ್ಚಿರುವುದನ್ನು ತೋರಿಸುವ ಚಿತ್ರಗಳನ್ನು ಮತ್ತು ವೀಡಿಯೊ ತುಣುಕನ್ನು ಪ್ರಕಟಿಸಿವೆ. ದಾಳಿಯ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಗುಂಪು ಹೊತ್ತುಕೊಂಡಿದೆ.
ಕೆಲವು ಸ್ಥಳೀಯ ಮಾಧ್ಯಮಗಳು ಮೂವರು ದಾಳಿಕೋರರು ಭಾಗಿಯಾಗಿದ್ದಾರೆ ಎಂದು ವರದಿ ಮಾಡಿದೆ.
ಸ್ಥಳೀಯ ಪೊಲೀಶ್ ಮುಖ್ಯಸ್ಥ ಕಜೆಮ್ ಮೌಸವಿ ರಾಜ್ಯ ದೂರದರ್ಶನಕ್ಕೆ “ಈ ದಾಳಿಯಲ್ಲಿ ಒಬ್ಬ ಭಯೋತ್ಪಾದಕ ಮಾತ್ರ ಭಾಗಿಯಾಗಿದ್ದಾನೆ” ಎಂದು ಹೇಳಿದ್ದಾರೆ
ಶಾ ಚೆರಾಗ್ ಸಮಾಧಿಯು ಎಂಟನೇ ಶಿಯಾ ಇಮಾಮ್ ಇಮಾಮ್ ರೆಜಾ ಅವರ ಸಹೋದರ ಅಹ್ಮದ್ ಅವರ ಸಮಾಧಿಗೆ ನೆಲೆಯಾಗಿದೆ ಮತ್ತು ಇದನ್ನು ದಕ್ಷಿಣ ಇರಾನ್‌ನ ಅತ್ಯಂತ ಪವಿತ್ರ ಸ್ಥಳವೆಂದು ಪರಿಗಣಿಸಲಾಗಿದೆ.
ಮಂಗಳೂರು : ಫೂಡ್ ಪಾಯ್ಸನ್ – ಒಂದೇ ಕುಟುಂಬದ ನಾಲ್ವರು ಅಸ್ವಸ್ಥ – Vishwanews24
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…