ಇಲ್ಲೇ ಇದ್ದು ದೇಶ ಒಡೆಯುವ ಬದಲು, ಪಾಕಿಸ್ತಾನಕ್ಕೆ ಹೋಗಿ ನಮ್ಮ ದೇಶದ ವಿರುದ್ದ ಹೋರಾಟ ಮಾಡಲಿ : ಸೆಂಥಿಲ್ ವಿರುದ್ಧ ಅನಂತ ಕುಮಾರ್ ಹೆಗಡೆ -Vishwanews24
ಬೆಂಗಳೂರು:ಭಾರತೀಯ ಆಡಳಿತ ಸೇವೆಗೆ ರಾಜೀನಾಮೆ ನೀಡಿ ಹೊರ ಬಂದಿರುವ ದಕ್ಷಿಣ ಕನ್ನಡದ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ವಿರುದ್ಧ ಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜೀನಾಮೆ ನೀಡಿದ ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು, ಭಾರತದಲ್ಲಿರುವ ಬದಲು ಪಾಕಿಸ್ತಾನಕ್ಕೆ ವಲಸೆ ಹೋಗುವುದೇ ಸೂಕ್ತ, ಇಲ್ಲೇ ಇದ್ದು ದೇಶ ಒಡೆಯುವ ಬದಲು, ಪಾಕಿಸ್ತಾನಕ್ಕೆ ಹೋಗಿ ನಮ್ಮ ದೇಶದ ವಿರುದ್ದ ಹೋರಾಟ ಮಾಡಲಿ ಎಂದು ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ಟ್ವೀಟ್ ಮಾಡುವ ಮೂಲಕ ಗುಡುಗಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ’ಈತ ಮಾಡಬೇಕಾದ ಮೊದಲ ಕೆಲಸವೆಂದರೆ ಕೂಡಲೇ ತನ್ನ ನಿಲುವನ್ನು ಬೆಂಬಲಿಸಿದವರೊಂದಿಗೆ ಪಾಕಿಸ್ತಾನಕ್ಕೆ ವಲಸೆ ಹೋಗುವುದು! ಇದು ಪ್ರಾಯೋಗಿಕವಾಗಿಯು ಸುಲಭ ಮತ್ತು ಅಂತಿಮ ಪರಿಹಾರ ಕೂಡ. ಇಲ್ಲೇ ಇದ್ದು ದೇಶ ಒಡೆಯುವ ಬದಲು, ಅಲ್ಲಿಗೆ ಹೋಗಿ ನಮ್ಮ ದೇಶ ಮತ್ತು ನಮ್ಮ ಸರ್ಕಾರದ ವಿರುದ್ಧ ನೇರ ಹೋರಾಟ ಮಾಡುವುದು ಒಳಿತು! ಇದರಲ್ಲಾದರು ನಿಯತ್ತು ತೋರಿಸಲಿ’’ಎಂದು ವಾಗ್ದಾಳಿ ನಡೆಸಿದ್ದಾರೆ.
ಈತ ಮಾಡಬೇಕಾದ ಮೊದಲ ಕೆಲಸವೆಂದರೆ ಕೂಡಲೇ ತನ್ನ ನಿಲುವನ್ನು ಬೆಂಬಲಿಸಿದವರೊಂದಿಗೆ ಪಾಕಿಸ್ತಾನಕ್ಕೆ ವಲಸೆ ಹೋಗುವುದು! ಇದು ಪ್ರಾಯೋಗಿಕವಾಗಿಯು ಸುಲಭ ಮತ್ತು ಅಂತಿಮ ಪರಿಹಾರ ಕೂಡ. ಇಲ್ಲೇ ಇದ್ದು ದೇಶ ಒಡೆಯುವ ಬದಲು, ಅಲ್ಲಿಗೆ ಹೋಗಿ ನಮ್ಮ ದೇಶ ಮತ್ತು ನಮ್ಮ ಸರ್ಕಾರದ ವಿರುದ್ಧ ನೇರ ಹೋರಾಟ ಮಾಡುವುದು ಒಳಿತು! ಇದರಲ್ಲಾದರು ನೀಯತ್ತು ತೋರಿಸಲಿ. pic.twitter.com/unYJBBaKyz
— Anantkumar Hegde (@AnantkumarH) September 8, 2019
ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ತಮ್ಮ ಹುದ್ದೆಗೆ ಶುಕ್ರವಾರ ದಿಢೀರ್ ರಾಜಿನಾಮೆ ಸಲ್ಲಿಸಿದ್ದರು. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಕೆಲವು ಒತ್ತಡಗಳಿಂದ ರಾಜಿಯಾಗಿ ಕೆಲಸ ಮಾಡಬೇಕಾದ ಇಂಥಹ ಪರಿಸ್ಥಿತಿಯಲ್ಲಿ ಸಾರ್ವಜನಿಕ ಸೇವೆಯಲ್ಲಿ ನಾನು ಮುಂದುವರಿಯುವುದು ಸಮಂಜಸವಲ್ಲ ಎಂದು ಅನಿಸಿದ್ದರಿಂದ ನಾನು ರಾಜೀನಾಮೆ ನೀಡುತ್ತಿರುವೆ ಎಂದು ಸಸಿಕಾಂತ್ ಸೆಂಥಿಲ್ ಬರೆದುಕೊಂಡಿದ್ದಾರೆ. ಈ ಬಗ್ಗೆ ಸಾಕಷ್ಟು ಜಿಲ್ಲೆಯಲ್ಲಿ ಸಾಕಷ್ಟು ಪರ ವಿರೋಧ ವ್ಯಕ್ತವಾಗಿತ್ತು. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಬಿಜಿಪಿ ಸಂಸದ ಟ್ವೀಟ್ ಮಾಡುವ ಮೂಲಕ ಕಿಡಿಕಾರಿದ್ದಾರೆ.
