ಬೆಂಗಳೂರು:ಕಾಂಗ್ರೆಸ್, ಜೆಡಿಎಸ್ ಸಮ್ಮಿಶ್ರ ಸರಕಾರ ಪತನಕ್ಕೆ ರೇವಣ್ಣ, ಕುಮಾರಸ್ವಾಮಿ ಕಾರಣ ಎಂದು ಎಲ್ಲರು ಆರೋಪಿಸಿದ್ದಾರೆ. ಮೈತ್ರಿ ಸರಕಾರ ಪತನಕ್ಕೆ ದಳಪತಿಗಳೇ ಕಾರಣ ವಿನಃ, ನಾವಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಇವರ ಏಕಪಕ್ಷೀಯ ನಿರ್ಧಾರ, ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಇರುವುದು ಸರಕಾರ ಪತನಕ್ಕೆ ಕಾರಣವಾಯಿತು. ನಮ್ಮ ಸರಕಾರ ಉಳಿಯಬೇಕು ಎಂದು ಎಲ್ಲಾ ರೀತಿಯ ಪ್ರಯತ್ನ ಮಾಡಿದ್ದೇವೆ. ಇವರ ಉದ್ದೇಶ ನನಗೆ ಗೊತ್ತಿಲ್ಲ. ನನ್ನ ಮೇಲೆ ಆರೋಪ ಮಾಡಿ ಯಾವ ಪಕ್ಷವನ್ನು ಖುಷಿಪಡಿಸಲು ಹೊರಟಿದ್ದಾರೋ ಎಂದು ವಾಗ್ದಾಳಿ ನಡೆಸಿದರು.
ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕನಾಗಬೇಕೆಂಬ ಇಚ್ಛೆಯಿಂದ ಯಡಿಯೂರಪ್ಪ ಜೊತೆ ಕೈಜೋಡಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಈ ದೇಶದ ರಾಜಕೀಯದ ಇತಿಹಾಸದಲ್ಲಿ ವಿರೋಧ ಪಕ್ಷದ ನಾಯಕನಾಗಲು ಸರಕಾರ ಬೀಳಿಸಿದ ಚರಿತ್ರೆ ಇಲ್ಲ ಎಂದು ತಿರುಗೇಟು ನೀಡಿದರು.
ಜಾಹಿರಾತು
ನಾವು ಐದಾರು ಸಮನ್ವಯ ಸಮಿತಿ ಸಭೆಗಳನ್ನು ಮಾಡಿದ್ದೇವು. ಆದರೆ ಅದನ್ನು ಕುಮಾರಸ್ವಾಮಿ ಜಾರಿಗೊಳಿಸಿಲ್ಲ. ಸಮನ್ವಯ ಸಮಿತಿ ನಿರ್ಧಾರ ಜಾರಿಗೊಳಿಸದೇ ಇದ್ದದ್ದು ಅವರ ತಪ್ಪು. ನಾನು ಸರಕಾರ ಬೀಳಿಸುವ ನೀಚ ರಾಜಕಾರಣ ಮಾಡಲ್ಲ. ದೇವೇಗೌಡರು ಬೇರೆ ಸರಕಾರ ಉರುಳಿಸೋದು ಅವರ ಹುಟ್ಟುಗುಣ. ಧರಂ ಸಿಂಗ್ ಗೆ ಬೆಂಬಲ ಕೊಟ್ಟರು, ನಂತರ ಸರಕಾರ ಬೀಳಿಸಿದವರು ಯಾರು? ಬೊಮ್ಮಾಯಿ ಸರಕಾರ ಬೀಳಿಸಿದವರು ಯಾರು? ಇವತ್ತು ಏನಾದರು ಬಿಜೆಪಿ ಅಧಿಕಾರಕ್ಕೆ ಬರಲು ದೇವೇಗೌಡರು ಮತ್ತು ಕುಮಾರಸ್ವಾಮಿ ಕಾರಣ ಎಂದು ನೇರವಾಗಿ ವಾಗ್ದಾಳಿ ನಡೆಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…