ಉಡುಪಿ: ಯುದ್ಧಗ್ರಸ್ತ ಇಸ್ರೇಲ್ನಲ್ಲಿ ಅಪಾಯಕ್ಕೆ ಸಿಲುಕಿರುವ ಬಗ್ಗೆ, ಸಮಸ್ಯೆ ಎದುರಿಸುತ್ತಿರುವ ಉಡುಪಿ ಜಿಲ್ಲೆಯ ನಾಗರಿಕರ ಕುರಿತಂತೆ ಇದುವರೆಗೆ ಯಾವುದೇ ಅಧಿಕೃತ ಮಾಹಿತಿ ಜಿಲ್ಲಾಡಳಿತಕ್ಕೆ ಬಂದಿಲ್ಲ ಎಂದು ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ತಿಳಿಸಿದ್ದಾರೆ.
ಯಾವುದೇ ಮಾಹಿತಿ ಬಂದರೆ ಸರಕಾರದ ನಿರ್ದೇಶನದಂತೆ ಜಿಲ್ಲಾಡಳಿತ ತಕ್ಷಣ ಕ್ರಮಕೈಗೊಳ್ಳುತ್ತದೆ ಎಂದ ಅವರು, ಇಸ್ರೇಲ್ನಲ್ಲಿ ಸ್ಥಳೀಯರ್ಯಾದರೂ ಇದ್ದರೆ ಇಸ್ರೇಲ್ನಲ್ಲಿ ಭಾರತೀಯ ರಾಯಭಾರ ಕಚೇರಿಯನ್ನು ಸಂಪರ್ಕಿಸ ಬಹುದು. ಅವರ ಕುಟುಂಬದವರೂಈ ಜಿಲ್ಲಾಡಳಿತಕ್ಕೆ ಅಲ್ಲಿನ ಪರಿಸ್ಥಿತಿಯ ಬಗ್ಗೆ ತಿಳಿಸಬಹುದು ಎಂದರು.
ಮಾಹಿತಿ ನೀಡಿ: ಪ್ರಸ್ತುತ ಪರಿಸ್ಥಿತಿಗೆ ಸಂಬಂಧಿಸಿದಂತೆ, ಇಸ್ರೇಲ್ ದೇಶದಲ್ಲಿ ವ್ಯಾಪಾರ, ಶಿಕ್ಷಣ, ಉದ್ಯೋಗ ಹಾಗೂ ಇತರೆ ಉದ್ದೇಶಗಳಿಗೆ ಹೋಗಿರುವ ಅಥವಾ ವಾಸವಾಗಿರುವ ಉಡುಪಿ ಜಿಲ್ಲೆಗೆ ಸಂಬಂಧಪಟ್ಟ ನಾಗರಿಕರಿದ್ದಲ್ಲಿ ಅವರ ಬಗ್ಗೆ ಮಾಹಿತಿಯನ್ನು ಮಣಿಪಾಲದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ತೆರೆದಿರುವ ಕಂಟ್ರೋಲ್ ರೂಂ ಸಂಖ್ಯೆ:1077 ಹಾಗೂ 0820-2574802 ಅಥವಾ ರಾಜ್ಯ ಸರಕಾರದ ತುರ್ತು ಸಂಖ್ಯೆ: 080- 22340676, 080-22253707ಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಗಳೂರು: ಇಸ್ರೇಲ್ ದೇಶದ ಈಗಿನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಇಸ್ರೇಲ್ ಗೆ ವ್ಯಾಪಾರ, ಶಿಕ್ಷಣ, ಉದ್ಯೋಗ ಹಾಗೂ ಇತರ ಉದ್ದೇಶಗಳಿಗೆ ಹೋಗಿರುವ ಮತ್ತು ವಾಸವಾಗಿರುವ ದಕ್ಷಿಣ ಕನ್ನಡ ಜಿಲ್ಲೆಯವರು (ಭಾರತದ ಪ್ರಜೆ) ತಮ್ಮ ಮಾಹಿತಿಯನ್ನು ದ.ಕ.ಜಿಲ್ಲಾಧಿಕಾರಿಯವರ ಕಚೇರಿ ಮಂಗಳೂರಿನಲ್ಲಿ ತೆರೆದಿರುವ ಕಂಟ್ರೋಲ್ ರೂಂ, ಸಂಖ್ಯೆ: 1077/ 0824-2442590 ದೂರವಾಣಿ ಸಂಖ್ಯೆಗೆ ಕರೆ ಮಾಡಿ ಕೂಡಲೇ ವಿವರ ನೀಡುವಂತೆ ಕೋರಲಾಗಿದೆ. ಅಥವಾ ರಾಜ್ಯ ಸರಕಾರದ ತುರ್ತು ಸಂಖ್ಯೆ 080-22340676, 080-22253707 ಮಾಹಿತಿ ನೀಡುವಂತೆ ದ.ಕ.ಜಿಲ್ಲಾ ಪ್ರಭಾರ ಜಿಲ್ಲಾಧಿಕಾರಿ ಡಾ.ಆನಂದ ಕೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…