Featured

ಇಸ್ರೇಲ್‌ನಲ್ಲಿರುವ ಕರಾವಳಿಗರಿಗೆ ಸಹಾಯ ಹಸ್ತ ನೀಡಲು ದ.ಕ-ಉಡುಪಿ ಜಿಲ್ಲೆಯಲ್ಲಿ ಕಂಟ್ರೋಲ್‌ ರೂಂ – Vishwanews24

ಇಸ್ರೇಲ್‌ನಲ್ಲಿರುವ ಕರಾವಳಿಗರಿಗೆ ಸಹಾಯ ಹಸ್ತ ನೀಡಲು ದ.ಕ-ಉಡುಪಿ ಜಿಲ್ಲೆಯಲ್ಲಿ ಕಂಟ್ರೋಲ್‌ ರೂಂ

ಉಡುಪಿ: ಯುದ್ಧಗ್ರಸ್ತ ಇಸ್ರೇಲ್‌ನಲ್ಲಿ ಅಪಾಯಕ್ಕೆ ಸಿಲುಕಿರುವ ಬಗ್ಗೆ, ಸಮಸ್ಯೆ ಎದುರಿಸುತ್ತಿರುವ ಉಡುಪಿ ಜಿಲ್ಲೆಯ ನಾಗರಿಕರ ಕುರಿತಂತೆ ಇದುವರೆಗೆ ಯಾವುದೇ ಅಧಿಕೃತ ಮಾಹಿತಿ ಜಿಲ್ಲಾಡಳಿತಕ್ಕೆ ಬಂದಿಲ್ಲ ಎಂದು ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ತಿಳಿಸಿದ್ದಾರೆ.

ಯಾವುದೇ ಮಾಹಿತಿ ಬಂದರೆ ಸರಕಾರದ ನಿರ್ದೇಶನದಂತೆ ಜಿಲ್ಲಾಡಳಿತ ತಕ್ಷಣ ಕ್ರಮಕೈಗೊಳ್ಳುತ್ತದೆ ಎಂದ ಅವರು, ಇಸ್ರೇಲ್‌ನಲ್ಲಿ ಸ್ಥಳೀಯರ್ಯಾದರೂ ಇದ್ದರೆ ಇಸ್ರೇಲ್‌ನಲ್ಲಿ ಭಾರತೀಯ ರಾಯಭಾರ ಕಚೇರಿಯನ್ನು ಸಂಪರ್ಕಿಸ ಬಹುದು. ಅವರ ಕುಟುಂಬದವರೂಈ ಜಿಲ್ಲಾಡಳಿತಕ್ಕೆ ಅಲ್ಲಿನ ಪರಿಸ್ಥಿತಿಯ ಬಗ್ಗೆ ತಿಳಿಸಬಹುದು ಎಂದರು.

ಮಾಹಿತಿ ನೀಡಿ: ಪ್ರಸ್ತುತ ಪರಿಸ್ಥಿತಿಗೆ ಸಂಬಂಧಿಸಿದಂತೆ, ಇಸ್ರೇಲ್ ದೇಶದಲ್ಲಿ ವ್ಯಾಪಾರ, ಶಿಕ್ಷಣ, ಉದ್ಯೋಗ ಹಾಗೂ ಇತರೆ ಉದ್ದೇಶಗಳಿಗೆ ಹೋಗಿರುವ ಅಥವಾ ವಾಸವಾಗಿರುವ ಉಡುಪಿ ಜಿಲ್ಲೆಗೆ ಸಂಬಂಧಪಟ್ಟ ನಾಗರಿಕರಿದ್ದಲ್ಲಿ ಅವರ ಬಗ್ಗೆ ಮಾಹಿತಿಯನ್ನು ಮಣಿಪಾಲದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ತೆರೆದಿರುವ ಕಂಟ್ರೋಲ್ ರೂಂ ಸಂಖ್ಯೆ:1077 ಹಾಗೂ 0820-2574802 ಅಥವಾ ರಾಜ್ಯ ಸರಕಾರದ ತುರ್ತು ಸಂಖ್ಯೆ: 080- 22340676, 080-22253707ಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಂಗಳೂರು: ಇಸ್ರೇಲ್ ದೇಶದ ಈಗಿನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಇಸ್ರೇಲ್ ಗೆ ವ್ಯಾಪಾರ, ಶಿಕ್ಷಣ, ಉದ್ಯೋಗ ಹಾಗೂ ಇತರ ಉದ್ದೇಶಗಳಿಗೆ ಹೋಗಿರುವ ಮತ್ತು ವಾಸವಾಗಿರುವ ದಕ್ಷಿಣ ಕನ್ನಡ ಜಿಲ್ಲೆಯವರು (ಭಾರತದ ಪ್ರಜೆ) ತಮ್ಮ ಮಾಹಿತಿಯನ್ನು ದ.ಕ.ಜಿಲ್ಲಾಧಿಕಾರಿಯವರ ಕಚೇರಿ ಮಂಗಳೂರಿನಲ್ಲಿ ತೆರೆದಿರುವ ಕಂಟ್ರೋಲ್ ರೂಂ, ಸಂಖ್ಯೆ: 1077/ 0824-2442590 ದೂರವಾಣಿ ಸಂಖ್ಯೆಗೆ ಕರೆ ಮಾಡಿ ಕೂಡಲೇ ವಿವರ ನೀಡುವಂತೆ ಕೋರಲಾಗಿದೆ. ಅಥವಾ ರಾಜ್ಯ ಸರಕಾರದ ತುರ್ತು ಸಂಖ್ಯೆ 080-22340676, 080-22253707 ಮಾಹಿತಿ ನೀಡುವಂತೆ ದ.ಕ.ಜಿಲ್ಲಾ ಪ್ರಭಾರ ಜಿಲ್ಲಾಧಿಕಾರಿ ಡಾ.ಆನಂದ ಕೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

1 day ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

1 day ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

1 day ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

1 day ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

1 day ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

1 day ago