ಮಂಗಳೂರು : ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳೂರು ಮತ್ತು ಗಲ್ಫ್ ರಾಷ್ಟ್ರಗಳ ನಡುವಿನ ವಿಮಾನ ಸಂಚಾರವನ್ನು ಮಾರ್ಚ್ 4ರವರೆಗೆ ರದ್ದುಗೊಳಿಸಲಾಗಿದೆ.
ಮಾರ್ಚ್ 3 ರಂದು ಮಂಗಳೂರು-ದೋಹಾ (IX 821), ದೋಹಾ-ಮಂಗಳೂರು (IX 822), ಮಂಗಳೂರು-ದುಬೈ (IX 813), ಮಂಗಳೂರು-ಕುವೈತ್ (IX 851), ಮಂಗಳೂರು-ದಮ್ಮಾಮ್ (IX 847), ಮತ್ತು ಮಂಗಳೂರು-ಅಬುಧಾಬಿ ವಿಮಾನಗಳನ್ನು ರದ್ದುಗೊಳಿಸಲಾಗಿದೆ.
ಅದೇ ರೀತಿ, ಮಾರ್ಚ್ 4 ರಂದು ದುಬೈ-ಮಂಗಳೂರು (IX 814), ಕುವೈತ್-ಮಂಗಳೂರು (IX 852), ದಮ್ಮಾಮ್-ಮಂಗಳೂರು (IX 848), ಮತ್ತು ಅಬುಧಾಬಿ-ಮಂಗಳೂರು (IX 816) ವಿಮಾನಗಳನ್ನು ರದ್ದುಗೊಳಿಸಲಾಗಿದೆ ಎಂದುವಿಮಾನ ನಿಲ್ದಾಣದ ವಕ್ತಾರರು ತಿಳಿಸಿದ್ದಾರೆ.
ಇಸ್ರೇಲ್-ಇರಾನ್ ನಡುವಿನ ಉದ್ವಿಗ್ನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ. ಗಲ್ಫ್ ರಾಷ್ಟ್ರಗಳಿಗೆ ಪ್ರಯಾಣಿಸಲು ಯೋಜಿಸಿದ್ದ ಪ್ರಯಾಣಿಕರು ಹೆಚ್ಚಿನ ಮಾಹಿತಿಗಾಗಿ ಆಯಾ ವಿಮಾನಯಾನ ಸಂಸ್ಥೆಗಳನ್ನು ಸಂಪರ್ಕಿಸಲು ಸೂಚಿಸಲಾಗಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…