ಗಾಝಾ: ಇಸ್ರೇಲ್ ಹಾಗೂ ಹಮಾಸ್ ನಡುವಿನ 48 ದಿನಗಳ ಸಂಘರ್ಷದಲ್ಲಿ ಮೊದಲ ಬಾರಿಗೆ ಶುಕ್ರವಾರ ಕದನ ವಿರಾಮವನ್ನು ಉಭಯ ಬಣಗಳು ಘೋಷಿಸಿದ್ದು, 24 ಮಂದಿ ಒತ್ತೆಯಾಳುಗಳನ್ನು ಹಮಾಸ್ ಬಿಡುಗಡೆ ಮಾಡಿದೆ. ಇದಕ್ಕೆ ಪ್ರತಿಯಾಗಿ ಇಸ್ರೇಲ್, 39 ಮಂದಿ ಫೆಲಸ್ತೀನ್ ಪ್ರಜೆಗಳನ್ನು ಬಂಧಮುಕ್ತಗೊಳಿಸಿದೆ.
ಕತಾರ್ ಮಧ್ಯಸ್ಥಿಕೆಯ ಈ ಕದನ ವಿರಾಮ ಜಾರಿಯ ಬೆನ್ನಲ್ಲೇ ಇಸ್ರೇಲ್ ಹಾಗೂ ಹಮಾಸ್, “ಯುದ್ಧ ಕೊನೆಗಳ್ಳುವುದು ಇನ್ನೂ ಬಹುದೂರ ಇದೆ” ಎಂದು ಹೇಳಿವೆ.
ಉಭಯ ಬಣಗಳು ಅಪ್ರಚೋದಿತ ಗುಂಡಿನ ದಾಳಿ ಮತ್ತು ಇತರ ಉಲ್ಲಂಘನೆಯ ಬಗ್ಗೆ ಪರಸ್ಪರ ಆರೋಪ ಮಾಡಿಕೊಂಡಿದ್ದರೂ, ಶುಕ್ರವಾರ ಯಾವುದೇ ಪ್ರಮುಖ ಬಾಂಬ್ ದಾಳಿ ಅಥವಾ ರಾಕೆಟ್ ದಾಳಿ ನಡೆದಿಲ್ಲ. ಇಸ್ರೇಲ್ ಮಾಧ್ಯಮಗಳ ಪ್ರಕಾರ 13 ಮಂದಿ ಇಸ್ರೇಲಿ ಒತ್ತೆಯಾಳುಗಳನ್ನು ಮತ್ತು 12 ಮಂದಿ ಥಾಯ್ಲೆಂಡ್ ಒತ್ತೆಯಾಳುಗಳನ್ನು ಹಮಾಸ್ ಬಿಡುಗಡೆ ಮಾಡಿದೆ.
ಕದನ ವಿರಾಮ ಘೋಷಣೆಯ ಸಂದರ್ಭದಲ್ಲೇ ಉಭಯ ಬಣಗಳು ಪರಸ್ಪರ ಎಚ್ಚರಿಕೆ ನೀಡಿದ್ದು, “ಮುಂದಿನ ದಿನಗಳು ಸಂಕೀರ್ಣ. ಎಲ್ಲವೂ ಮುಗಿಯುವವರೆಗೂ ಯಾವುದೂ ಮುಗಿದಂತಲ್ಲ” ಎಂದು ಇಸ್ರೇಲ್ ರಕ್ಷಣಾ ಪಡೆಗಳ ವಕ್ತಾರರು ಒತ್ತೆಯಾಳು ಒಪ್ಪಂದದ ಬಗ್ಗೆ ಹೇಳಿಕೆ ನೀಡಿದ್ದಾರೆ.
ಯುದ್ಧದ ಎಲ್ಲ ಗುರಿಗಳನ್ನು ಸಾಧಿಸಲು ದೇಶ ಬದ್ಧ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸ್ಪಷ್ಟಪಡಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…