ಶ್ರೀಹರಿಕೋಟ: ಭೂಮಿ ಪರಿವೀಕ್ಷಣಾ ಇಒಎಸ್-08 ಉಪಗ್ರಹವನ್ನು ಇಸ್ರೋ ಶುಕ್ರವಾರ ಯಶಸ್ವಿಯಾಗಿ ಉಡಾವಣೆ ಮಾಡಿದೆ. ಉಪಗ್ರಹವು ಉದ್ದೇಶಿತ ಕಕ್ಷೆ ಸೇರಿದೆ.
ಇಲ್ಲಿನ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿರುವ ಉಡ್ಡಯನ ಕೇಂದ್ರದಿಂದ ಚೆನ್ನೈನಿಂದ ಪೂರ್ವಕ್ಕೆ 135 ಕಿ.ಮೀ ದೂರದಲ್ಲಿ 9:17 ಕ್ಕೆ ಉಪಗ್ರಹ ಉಡಾವಣೆ ಮಾಡಲಾಯಿತು. ಭೂಮಿಯ ವೀಕ್ಷಣಾ ಉಪಗ್ರಹ EOS-08 ಹೊತ್ತಿದ್ದ ಕಿರು ಉಪಗ್ರಹ ಉಡಾವಣಾ ವಾಹನ-D3 ನಭಕ್ಕೆ ಚಿಮ್ಮಿತು.
SSLV-D3-EOS-08 ಮಿಷನ್‌ನ ಉದ್ದೇಶ ಮೈಕ್ರೋಸ್ಯಾಟಲೈಟ್ ವಿನ್ಯಾಸಗೊಳಿಸುವುದು ಮತ್ತು ಅಭಿವೃದ್ಧಿಪಡಿಸುವುದಾಗಿದೆ. ಜೊತೆಗೆ ಭವಿಷ್ಯ ಉಪಗ್ರಹಗಳ ಕಾರ್ಯಾಚರಣೆ ಗಮನದಲ್ಲಿಟ್ಟುಕೊಂಡು ಅಭಿವೃದ್ಧಿಪಡಿಸಲಾಗಿದೆ ಎಂದು ಬೆಂಗಳೂರು ಪ್ರಧಾನ ಕಚೇರಿಯ ರಾಷ್ಟ್ರೀಯ ಬಾಹ್ಯಾಕಾಶ ಸಂಸ್ಥೆ ತಿಳಿಸಿದೆ.
EOS-08 ಉಪಗ್ರಹ ಎಲೆಕ್ಟ್ರೋ ಆಪ್ಟಿಕಲ್ ಇನ್‌ಫ್ರಾರೆಡ್ ಪೇಲೋಡ್ (EOIR), ಗ್ಲೋಬಲ್ ನ್ಯಾವಿಗೇಶನ್ ಸ್ಯಾಟಲೈಟ್ ಸಿಸ್ಟಮ್-ರಿಫ್ಲೆಕ್ಟೋಮೆಟ್ರಿ ಪೇಲೋಡ್ (GNSS-R) ಮತ್ತು SiC UV ಡೋಸಿಮೀಟರ್ ಎಂಬ ಮೂರು ಪೇಲೋಡ್‌ಗಳನ್ನು ಹೊಂದಿದೆ.
EOIR ಪೇಲೋಡ್: ಮಿಡ್-ವೇವ್ IR (MIR) ಮತ್ತು ಲಾಂಗ್-ವೇವ್ IR (LWIR) ಬ್ಯಾಂಡ್‌ಗಳಲ್ಲಿ, ಉಪಗ್ರಹ ಆಧಾರಿತ ಕಣ್ಗಾವಲು, ವಿಪತ್ತು ಮೇಲ್ವಿಚಾರಣೆ, ಪರಿಸರ ಮೇಲ್ವಿಚಾರಣೆಗಾಗಿ ದಿನವಿಡೀ ಚಿತ್ರಗಳನ್ನು ಸೆರೆಹಿಡಿಯಲು ವಿನ್ಯಾಸಗೊಳಿಸಲಾಗಿದೆ. ಜ್ವಾಲಾಮುಖಿ ಕಾರ್ಯಾಚರಣೆ ಪತ್ತೆ, ಕೈಗಾರಿಕಾ ಮತ್ತು ವಿದ್ಯುತ್ ಸ್ಥಾವರ ವಿಪತ್ತು ಮೇಲ್ವಿಚಾರಣೆ ಸಹ ಮಾಡಲಿದೆ.
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್.ಎಂ.ಬಿ. ಆರಾಧ್ಯ…