ಲಕ್ನೋ: ಮುಸ್ಲಿಂ ಯುವಕನೊಬ್ಬ ತನ್ನ 19 ವರ್ಷದ ಹಿಂದೂ ಗೆಳತಿ ಮತಾಂತರಗೊಳ್ಳಲು ನಿರಾಕರಿಸಿದ್ದರಿಂದ ಆಕೆಯನ್ನು ಕಟ್ಟಡದ 4ನೇ ಮಹಡಿಯಿಂದ ಎಸೆದು ಕೊಂದಿರುವ ಘಟನೆ ಉತ್ತರಪ್ರದೇಶದ ಲಕ್ನೋದಲ್ಲಿ ನಡೆದಿದೆ.
ಆರೋಪಿ ಸೂಫಿಯಾನ್ ಹಾಗೂ ನಿಧಿ ಗುಪ್ತ (19) ದುಬಗ್ಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲೇ ವಾಸಿಸುತ್ತಿದ್ದರು. ನಿಧಿ ಬ್ಯೂಟಿಷಿಯನ್ ತರಬೇತಿ ಪಡೆದಿದ್ದಳು. ಕಳೆದ ಎರಡು ತಿಂಗಳಿನಿಂದ ಇಬ್ಬರು ಸಂಬಂಧ ಹೊಂದಿದ್ದರು. ಇದನ್ನೂ ಓದಿ: ಮೋಸ ಹೋಗುವ ಸಂಭವ..▶️ ನೋಡಿ ಇಂದಿನ ದಿನ ಭವಿಷ್ಯ -Vishwanews24
ಸೂಫಿಯಾನ್ ನಿಧಿಗೆ ಮೊಬೈಲ್ ಸಹ ಕೊಡಿಸಿದ್ದ. ಕರೆ ಮಾಡಿದಾಗೆಲ್ಲಾ, ಸಂದೇಶಗಳನ್ನು ಕಳಿಸುವಾಗ ಆಕೆಯನ್ನು ಇಸ್ಲಾಂಗೆ ಮತಾಂತರವಾಗುವಂತೆ ಬ್ರೈನ್‌ವಾಶ್ ಮಾಡುತ್ತಿದ್ದ. ಈ ವಿಷಯ ತಿಳಿದ ನಿಧಿ ಪೋಷಕರು ಸೂಫಿಯಾನ್ ಮತ್ತು ಅವನ ಕುಟುಂಬಕ್ಕೆ ಬೆದರಿಕೆ ಹಾಕಿದ್ದರು. ಬಲವಂತವಾಗಿ ಮತಾಂತಗೊಳಿಸಲು ಪ್ರಯತ್ನಿಸುತ್ತಿದ್ದರಿಂದ ನಿಧಿಯನ್ನು ಅಜ್ಜಿ ಮನೆಗೆ ಕಳುಹಿಸಿದ್ದರು. ಇದರಿಂದ ಕೆಲ ದಿನಗಳಿಂದ ಸೂಫಿಯಾನ್‌ನೊಂದಿಗೆ ಮಾತನಾಡುವುದು ನಿಂತಿತ್ತು. ಆದಾಗ್ಯೂ ಸೂಫಿಯಾನ್ ದುರ್ವರ್ತನೆಯಿಂದ ಪೋಷಕರು ದೂರು ನೀಡಿದ್ದರು. ಬಳಿಕ ರಾಜಿ ಮಾಡಿಕೊಳ್ಳಲಾಗಿತ್ತು. ಆದರೆ ಭಾನುವಾರ ನಿಧಿ ತನ್ನ ಮನೆಯ ನಾಲ್ಕನೇ ಮಹಡಿಗೆ ಬಂದಾಗ ಬಾಲ್ಕನಿಯಿಂದ ಎಸೆದಿದ್ದಾನೆ ಎಂದು ಕುಟುಂಬಸ್ಥರು ದೂರಿನಲ್ಲಿ ತಿಳಿಸಿದ್ದಾರೆ.
ಬಳಿಕ ರಕ್ತದ ಮಡುವಿನಲ್ಲಿದ್ದ ನಿಧಿಯನ್ನು ಇಲ್ಲಿನ ಕಿಂಗ್‌ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ ಗಂಭೀರ ಗಾಯಗೊಂಡಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೇ ಆಕೆ ಸಾವನ್ನಪ್ಪಿದ್ದಾಳೆ.
ಇದನ್ನೂ ಓದಿ : ಮೋಸ ಹೋಗುವ ಸಂಭವ..▶️ ನೋಡಿ ಇಂದಿನ ದಿನ ಭವಿಷ್ಯ -Vishwanews24
ಲಕ್ನೋ ಪೊಲೀಸರುಕೊಲೆ ಮತ್ತು ಬಲವಂತದ ಮತಾಂತರಕ್ಕೆ ಸಂಬಂಧಿಸಿದಂತೆ ಐಪಿಸಿಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಭಾನುವಾರದಿಂದ ಸುಫಿಯಾನ್ ಮತ್ತು ಕುಟುಂಬ ಪರಾರಿಯಾಗಿದೆ. ಕುಟುಂಬವನ್ನು ಪತ್ತೆಹಚ್ಚಲು ಪೊಲೀಸರು ಬಲೆ ಬೀಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…