Featured

ಇಸ್ಲಾಂಗೆ ಮತಾಂತರವಾಗಲು ನಿರಾಕರಿಸಿದ ಗೆಳತಿಯನ್ನು 4ನೇ ಮಹಡಿಯಿಂದ ಎಸೆದು ಕೊಂದ – Vishwanews24

ಇಸ್ಲಾಂಗೆ ಮತಾಂತರವಾಗಲು ನಿರಾಕರಿಸಿದ ಗೆಳತಿಯನ್ನು 4ನೇ ಮಹಡಿಯಿಂದ ಎಸೆದು ಕೊಂದ ಮುಸ್ಲಿಂ  ಯುವಕ

ಲಕ್ನೋ: ಮುಸ್ಲಿಂ  ಯುವಕನೊಬ್ಬ ತನ್ನ 19 ವರ್ಷದ ಹಿಂದೂ ಗೆಳತಿ ಮತಾಂತರಗೊಳ್ಳಲು ನಿರಾಕರಿಸಿದ್ದರಿಂದ ಆಕೆಯನ್ನು ಕಟ್ಟಡದ 4ನೇ ಮಹಡಿಯಿಂದ ಎಸೆದು ಕೊಂದಿರುವ ಘಟನೆ ಉತ್ತರಪ್ರದೇಶದ ಲಕ್ನೋದಲ್ಲಿ ನಡೆದಿದೆ.

ಆರೋಪಿ ಸೂಫಿಯಾನ್ ಹಾಗೂ ನಿಧಿ ಗುಪ್ತ (19) ದುಬಗ್ಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲೇ ವಾಸಿಸುತ್ತಿದ್ದರು. ನಿಧಿ ಬ್ಯೂಟಿಷಿಯನ್  ತರಬೇತಿ ಪಡೆದಿದ್ದಳು. ಕಳೆದ ಎರಡು ತಿಂಗಳಿನಿಂದ ಇಬ್ಬರು ಸಂಬಂಧ ಹೊಂದಿದ್ದರು. ಇದನ್ನೂ ಓದಿ:  ಮೋಸ ಹೋಗುವ ಸಂಭವ..▶️ ನೋಡಿ ಇಂದಿನ ದಿನ ಭವಿಷ್ಯ -Vishwanews24

ಸೂಫಿಯಾನ್ ನಿಧಿಗೆ ಮೊಬೈಲ್ ಸಹ ಕೊಡಿಸಿದ್ದ. ಕರೆ ಮಾಡಿದಾಗೆಲ್ಲಾ, ಸಂದೇಶಗಳನ್ನು ಕಳಿಸುವಾಗ ಆಕೆಯನ್ನು ಇಸ್ಲಾಂಗೆ ಮತಾಂತರವಾಗುವಂತೆ ಬ್ರೈನ್‌ವಾಶ್ ಮಾಡುತ್ತಿದ್ದ. ಈ ವಿಷಯ ತಿಳಿದ ನಿಧಿ ಪೋಷಕರು ಸೂಫಿಯಾನ್ ಮತ್ತು ಅವನ ಕುಟುಂಬಕ್ಕೆ ಬೆದರಿಕೆ ಹಾಕಿದ್ದರು. ಬಲವಂತವಾಗಿ ಮತಾಂತಗೊಳಿಸಲು ಪ್ರಯತ್ನಿಸುತ್ತಿದ್ದರಿಂದ ನಿಧಿಯನ್ನು ಅಜ್ಜಿ ಮನೆಗೆ ಕಳುಹಿಸಿದ್ದರು. ಇದರಿಂದ ಕೆಲ ದಿನಗಳಿಂದ ಸೂಫಿಯಾನ್‌ನೊಂದಿಗೆ ಮಾತನಾಡುವುದು ನಿಂತಿತ್ತು. ಆದಾಗ್ಯೂ ಸೂಫಿಯಾನ್ ದುರ್ವರ್ತನೆಯಿಂದ ಪೋಷಕರು ದೂರು ನೀಡಿದ್ದರು. ಬಳಿಕ ರಾಜಿ ಮಾಡಿಕೊಳ್ಳಲಾಗಿತ್ತು. ಆದರೆ ಭಾನುವಾರ ನಿಧಿ ತನ್ನ ಮನೆಯ ನಾಲ್ಕನೇ ಮಹಡಿಗೆ ಬಂದಾಗ ಬಾಲ್ಕನಿಯಿಂದ ಎಸೆದಿದ್ದಾನೆ ಎಂದು ಕುಟುಂಬಸ್ಥರು ದೂರಿನಲ್ಲಿ ತಿಳಿಸಿದ್ದಾರೆ.

ಬಳಿಕ ರಕ್ತದ ಮಡುವಿನಲ್ಲಿದ್ದ ನಿಧಿಯನ್ನು ಇಲ್ಲಿನ ಕಿಂಗ್‌ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ ಗಂಭೀರ ಗಾಯಗೊಂಡಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೇ ಆಕೆ ಸಾವನ್ನಪ್ಪಿದ್ದಾಳೆ.

ಇದನ್ನೂ ಓದಿ : ಮೋಸ ಹೋಗುವ ಸಂಭವ..▶️ ನೋಡಿ ಇಂದಿನ ದಿನ ಭವಿಷ್ಯ -Vishwanews24

ಲಕ್ನೋ ಪೊಲೀಸರುಕೊಲೆ ಮತ್ತು ಬಲವಂತದ ಮತಾಂತರಕ್ಕೆ ಸಂಬಂಧಿಸಿದಂತೆ ಐಪಿಸಿಯ  ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್  ದಾಖಲಿಸಿದ್ದಾರೆ. ಭಾನುವಾರದಿಂದ ಸುಫಿಯಾನ್ ಮತ್ತು ಕುಟುಂಬ ಪರಾರಿಯಾಗಿದೆ. ಕುಟುಂಬವನ್ನು ಪತ್ತೆಹಚ್ಚಲು ಪೊಲೀಸರು ಬಲೆ ಬೀಸಿದ್ದಾರೆ.

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

1 day ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

1 day ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

1 day ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

1 day ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

1 day ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

1 day ago