ಹಿಜಾಬ್ ಧರಿಸುವುದು ಇಸ್ಲಾಂ ಧರ್ಮದ ಅತ್ಯಗತ್ಯ ಧಾರ್ಮಿಕ ಆಚರಣೆ ಎಂದು ಸಾಬೀತುಪಡಿಸಲು ಸಾಧ್ಯವಾಗಿಲ್ಲ ಎಂದು ನ್ಯಾಯಾಲಯ ಈ ಸಂದರ್ಭದಲ್ಲಿ ಅಭಿಪ್ರಾಯಪಟ್ಟಿದೆ.
ಪ್ರಯಾಗ್‌ರಾಜ್‌ನ ಶಾಲೆಯೊಂದರ 11ನೇ ತರಗತಿ ವಿದ್ಯಾರ್ಥಿನಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜೆ.ಜೆ. ಮುನಿ ಮತ್ತು ನ್ಯಾಯಮೂರ್ತಿ ಇಂದ್ರಜೀತ್ ಶುಕ್ಲಾ ಅವರನ್ನೊಳಗೊಂಡ ವಿಭಾಗೀಯ ಪೀಠವು, ಹಿಜಾಬ್ ಧರಿಸುವುದನ್ನು ಸಂವಿಧಾನದ ವಿಧಿ 25 ರ ಅಡಿಯಲ್ಲಿ ರಕ್ಷಿಸಲ್ಪಟ್ಟ ಅತ್ಯಗತ್ಯ ಧಾರ್ಮಿಕ ಆಚರಣೆ ಎಂದು ಪರಿಗಣಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
ತಾನು ಧರಿಸುವ ಹಿಜಾಬ್ ತನ್ನ ಧಾರ್ಮಿಕ ಆಚರಣೆಯ ಭಾಗವಾಗಿದೆ, ಹೀಗಾಗಿ ಶಾಲಾ ಸಮವಸ್ತ್ರದ ಜೊತೆಗೆ ಅದನ್ನು ಧರಿಸಲು ಅನುಮತಿ ನೀಡಬೇಕು ಎಂದು ವಿದ್ಯಾರ್ಥಿನಿ ನ್ಯಾಯಾಲಯದಲ್ಲಿ ವಾದಿಸಿದ್ದರು. ಆದರೆ, ಧಾರ್ಮಿಕ ಸ್ವಾತಂತ್ರ್ಯದ ಹಕ್ಕನ್ನು ಪಡೆಯಲು ಕೇವಲ ಧಾರ್ಮಿಕ ಆಚರಣೆಯನ್ನು ಮುಂದಿಡುವುದು ಸಾಕಾಗುವುದಿಲ್ಲ ಎಂದು ಹೇಳಿದ ಹೈಕೋರ್ಟ್, ವಿದ್ಯಾರ್ಥಿನಿಯ ವಾದವನ್ನು ಪುರಸ್ಕರಿಸಲು ನಿರಾಕರಿಸಿದೆ.
ಶಿರೋವಸ್ತ್ರ ಧರಿಸುವುದು ಇಸ್ಲಾಂನಲ್ಲಿ ಕಡ್ಡಾಯ ಆಚರಣೆಯಾಗಿದೆ ಮತ್ತು ಅದನ್ನು ಮಾಡದಿದ್ದರೆ ವ್ಯಕ್ತಿಯ ಧಾರ್ಮಿಕ ನಂಬಿಕೆಗೆ ಧಕ್ಕೆಯಾಗುತ್ತದೆ ಎಂಬುದನ್ನು ಸಾಬೀತುಪಡಿಸಲು ಅಗತ್ಯವಾದ ಧಾರ್ಮಿಕ ಅಥವಾ ಕಾನೂನಾತ್ಮಕ ಆಧಾರಗಳನ್ನು ಅರ್ಜಿದಾರರು ನ್ಯಾಯಾಲಯದ ಮುಂದೆ ಮಂಡಿಸಿಲ್ಲ ಎಂದು ಪೀಠ ಗಮನಿಸಿದೆ.
“ಸಂವಿಧಾನದ 25 ನೇ ವಿಧಿಯನ್ನು ಆಧರಿಸಿ ಮಾಡುವ ವಾದವನ್ನು ಕೇವಲ ಹೇಳಿಕೆಯ ಆಧಾರದ ಮೇಲೆ ಸ್ವೀಕರಿಸಲು ಸಾಧ್ಯವಿಲ್ಲ ಅದಕ್ಕೆ ಸೂಕ್ತವಾದ ಆಧಾರ ಹಾಗೂ ಕಾನೂನಾತ್ಮಕ ತಳಹದಿ ಇರಬೇಕು. ವಿದ್ಯಾರ್ಥಿನಿ ಆರನೇ ತರಗತಿಯಿಂದಲೂ ಹಿಜಾಬ್ ಧರಿಸುತ್ತಿದ್ದರು ಎಂಬುದನ್ನು ಬಿಟ್ಟರೆ, ಈ ಬಗ್ಗೆ ಯಾವುದೇ ಬಲವಾದ ವಾಸ್ತವಾಂಶಗಳನ್ನು ಅರ್ಜಿಯಲ್ಲಿ ಉಲ್ಲೇಖಿಸಿಲ್ಲ, ಎಂದು ಪೀಠ ಉಲ್ಲೇಖಿಸಿದೆ.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…