ಇಸ್ಲಾಂ ಧರ್ಮ ಮತ್ತು ಮುಸ್ಲಿಮರ ವಿರುದ್ಧ ಹೇಳಿಕೆ: ಶೋಭಾ ಕರಾಂದ್ಲಜೆ ರಾಜೀನಾಮೆಗೆ ಆಗ್ರಹ – ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಠರಾವು ಮಂಡನೆ: vishwanews24

ಇಸ್ಲಾಂ ಧರ್ಮ ಮತ್ತು ಮುಸ್ಲಿಮರ ವಿರುದ್ಧ ಹೇಳಿಕೆ: ಶೋಭಾ ಕರಾಂದ್ಲಜೆ ರಾಜೀನಾಮೆಗೆ ಆಗ್ರಹ – ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಠರಾವು ಮಂಡನೆ

ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭೆ ಸಂಸದೆ ಶೋಭಾ ಕರಂದ್ಲಾಜೆ ಇಸ್ಲಾಂ ಧರ್ಮ ಮತ್ತು ಮುಸ್ಲಿಮರ ವಿರುದ್ಧ ತಮ್ಮ ಸ್ಥಾನದ ಘನತೆಗೆ ತೀವ್ರ ಧಕ್ಕೆಯುಂಟು ಮಾಡುವ ಅತ್ಯಂತ ಬೇಜವಾಬ್ದಾರಿಯುತ ಹೇಳಿಕೆಗಳನ್ನು ಇತ್ತೀಚಿಗೆ ನಿರಂತರವಾಗಿ ನೀಡುತ್ತಿದ್ದಾರೆ. ಇವರು ಕೂಡಲೇ ತಮ್ಮ ಹೇಳಿಕೆ ಗಳನ್ನು ಹಿಂಪಡೆದು ಮುಸ್ಲಿಂ ಸಮುದಾಯದ ಕ್ಷಮೆ ಯಾಚಿಸಬೇಕು ಹಾಗೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂಬ ಠರಾವನ್ನು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಮಂಡಿಸಿದೆ.

ಒಕ್ಕೂಟದ ವತಿಯಿಂದ ಇಂದು ನೇಜಾರು ಜಾಮೀಯ ಮಸೀದಿಯಲ್ಲಿ ನಡೆದ ಸಮುದಾಯಿಕ ಪ್ರತಿನಿಧಿಗಳ ಸಮಾಲೋಚನಾ ಸಭೆಯಲ್ಲಿ ತೆಗೆದು ಕೊಂಡ ನಿರ್ಣಯದಂತೆ ಈ ಠರಾವು ಮಂಡಿಸಲಾಯಿತು. ಉಡುಪಿ ಜಿಲ್ಲೆಯಲ್ಲಿ ಸಂಭವಿಸುತ್ತಿರುವ ಕೊರೋನ ಸ್ಫೋಟದಿಂದ ಜನ ಸಾಮಾನ್ಯರು ತೀವ್ರ ಸಂಕಷ್ಟದಲ್ಲಿದ್ದು, ಇಂತಹ ಸಂದರ್ಭದಲ್ಲಿ ಸಂಸದರಾಗಿ ಶೋಭಾ, ಹೇಗೆ ಸ್ಪಂದಿಸಿದ್ದಾರೆ ಎಂಬುದು ಇಡೀ ರಾಜ್ಯಕ್ಕೆ ಗೊತ್ತಿದೆ. ಜನಪ್ರತಿ ನಿಧಿಯಾಗಿ ತಮ್ಮ ಘೋರ ವೈಫಲ್ಯವನ್ನು ಮುಚ್ಚಿಹಾಕಲು ಶೋಭಾ ಕರಂದ್ಲಾಜೆ, ಇಸ್ಲಾಂ ಧರ್ಮ ಮತ್ತು ಮುಸ್ಲಿಮರ ವಿರುದ್ಧ ಆಧಾರರಹಿತ, ಅವಹೇಳನಕಾರಿ, ಕೀಳು ಮಟ್ಟದ ಹೇಳಿಕೆಯನ್ನು ನೀಡುತ್ತಿದ್ದಾರೆ.

ಶುಕ್ರವಾರ ಮತ್ತೆ ಉಡುಪಿಯಲ್ಲಿ ತಬ್ಲೀಗಿಗಳು ಕೊರೋನ ಹರಡುತ್ತಿದ್ದಾರೆ ಎಂದು ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದಾರೆ. ಇದು ಅತ್ಯಂತ ಬೇಜವಾ ಬ್ದಾರಿಯುತ, ಸುಳ್ಳು ಹಾಗೂ ಪ್ರಚೋದನಕಾರಿ ಹೇಳಿಕೆಯಾಗಿದೆ. ಕೊರೋನ ವನ್ನು ಇಡೀ ದೇಶಕ್ಕೆ ತಬ್ಲೀಗಿಗಳೇ ಹರಡಿದ್ದಾರೆ ಎಂದು ಶೋಭಾ, ಅವರ ಪಕ್ಷದ ಮುಖಂಡರು, ಸಂಘಪರಿವಾರ ಹಾಗು ಅದನ್ನು ಬೆಂಬಲಿಸುವ ಕೆಲವು ಮಾಧ್ಯಮಗಳು ಮಾಡಿರುವ ಅಪಪ್ರಚಾರ ಎಷ್ಟು ಪೊಳ್ಳು ಎಂಬುದು ಇಡೀ ದೇಶದೆದುರು ಸಾಬೀತಾಗಿದೆ. ತಬ್ಲೀಗಿಗಳ ವಿರುದ್ಧ ಇವರು ಹರಡಿದ ಬಹುತೇಕ ಎಲ್ಲ ವದಂತಿಗಳು ಹಸಿ ಸುಳ್ಳುಗಳು ಎಂದು ಆಧಾರಸಹಿತ ಬೆಳಕಿಗೆ ಬಂದಿವೆ.

ಲಾಕ್‌ಡೌನ್ ಉಲ್ಲಂಘನೆ ಯನ್ನು ಧರ್ಮ, ಜಾತಿ ಎಂಬ ಭೇದವಿಲ್ಲದೆ ದೇಶ, ರಾಜ್ಯದ ವಿವಿಧೆಡೆ ಎಲ್ಲರೂ ಬೇರೆ ಬೇರೆ ರೀತಿಯಲ್ಲಿ ಮಾಡಿದ್ದಾರೆ. ಎಲ್ಲ ಧರ್ಮಗಳ ಧಾರ್ಮಿಕ ಸ್ಥಳಗಳಲ್ಲೂ ಲಾಕ್‌ಡೌನ್ ಉಲ್ಲಂಘಿಸಿ ಪೂಜಾ ಕಾರ್ಯಕ್ರಮಗಳು, ಜಾತ್ರೆಗಳು ಇತ್ಯಾದಿ ನಡೆದ ವರದಿಗಳು ಹಲವು ಬಂದಿವೆ. ಸ್ವತಃ ಶೋಭಾ ಅವರ ಪಕ್ಷದ ಹಿರಿಯ ಮುಖಂಡರು, ಕೆಲವು ರಾಜ್ಯಗಳ ಮುಖ್ಯಮಂತ್ರಿಗಳು, ಸಚಿವರು, ಶಾಸಕರು ಲಾಕ್‌ಡೌನ್ ಉಲ್ಲಂಘಿಸಿದ ವರದಿಗಳನ್ನು ನಾವೆಲ್ಲರೂ ನೋಡಿದ್ದೇವೆ. ಇನ್ನು ರಾಜ್ಯದೆಲ್ಲೆಡೆ ಮುಸ್ಲಿಮರು ಲಾಕ್‌ಡೌನ್ ನಿಯಮಗಳನ್ನು ಪಾಲಿಸಿ ಸರಕಾರಕ್ಕೆ ಪೂರ್ಣ ಸಹಕಾರ ನೀಡಿದ್ದಾರೆ.

ತಮಗೆ ಅತ್ಯಂತ ಮುಖ್ಯವಾದ ಸಾಮೂಹಿಕ ನಮಾಜ್, ಜುಮಾ ನಮಾಜ್ಗಳನ್ನೇ ಕಳೆದ ಸುಮಾರು ಮೂರು ತಿಂಗಳಿಂದ ಬಿಟ್ಟು ಸಹಕರಿಸಿದ್ದಾರೆ. ರಮಝಾನ್‌ನಲ್ಲೂ, ಕೊನೆಗೆ ಈದ್ ದಿನವೂ ಮಸೀದಿಗೆ ಹೋಗದೆ ಮನೆಯಲ್ಲೇ ನಮಾಜ್ ಮಾಡಿದ್ದಾರೆ. ಈದ್ ದಿನವೂ ಲಾಕ್ಡೌನ್ ಮಾಡಿದ್ದಕ್ಕೆ ಅದಕ್ಕೂ ಸಹಕರಿಸಿದ್ದಾರೆ. ಜೊತೆಗೆ ಸಂಕಷ್ಟ ದಲ್ಲಿದ್ದ ಸರ್ವಧರ್ಮೀಯರಿಗೆ ಊಟ, ತಿಂಡಿ, ಆಹಾರ ಸಾಮಾಗ್ರಿ ವಿತರಿಸಿ ಮಾನವೀಯತೆ ಮೆರೆದಿದ್ದಾರೆ. ಆದರೆ ಇದ್ಯಾವುದನ್ನೂ ಗಣನೆಗೆ ತೆಗೆದುಕೊಳ್ಳದೆ, ಮುಸ್ಲಿಂ ಸಮುದಾಯದ ವಿರುದ್ಧ ಇತರ ಧರ್ಮೀಯರನ್ನು ಎತ್ತಿ ಕಟ್ಟುವ ಪ್ರಯತ್ನ ಮಾಡುತ್ತಿರುವ ಸಂಸದರ ಈ ಅಪಾಯಕಾರಿ ಧೋರಣೆ ಹಾಗು ಅವರು ನೀಡುತ್ತಿರುವ ಬೇಜವಾಬ್ದಾರಿಯುತ ಹೇಳಿಕೆಗಳನ್ನು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ತೀವ್ರವಾಗಿ ಖಂಡಿಸುತ್ತದೆ.

ಜನಪ್ರತಿನಿಧಿಯಾಗಿ ಪಾಲಿಸಬೇಕಾದ ರಾಜಧರ್ಮ ವನ್ನು ಶೋಭಾ ಅವರು ಮರೆತುಬಿಟ್ಟಿದ್ದಾರೆ. ಅಭಿವೃದ್ಧಿ ಕೆಲಸಗಳ ಮೂಲಕ ಮನ್ನಣೆ ಗಳಿಸುವುದು ಏನೆಂದು ಅವರಿಗೆ ಗೊತ್ತೇ ಇಲ್ಲ. ಅವರ ರಾಜಕೀಯ ನಿಂತಿರುವುದೇ ಜನರ ನಡುವೆ ದ್ವೇಷ ಹರಡುವುದರ ಮೇಲೆ. ಯಾವುದೇ ವಿಷಯದಲ್ಲಿ ಧರ್ಮದ್ವೇಷ ಎಳೆದು ತಂದು ಸಮಾಜದಲ್ಲಿ ಅಶಾಂತಿ ಸ್ರಷ್ಟಿಸಿ ಲಾಭ ಮಾಡಿಕೊಳ್ಳುವುದು ಅವರ ಚಾಳಿ. ಇಂತಹ ಪ್ರಯತ್ನದಲ್ಲಿ ಅವರು ಹಸಿ ಸುಳ್ಳು ಹೇಳಿ ಹಲವು ಬಾರಿ ನಗೆಪಾಟಲಿಗೀಡಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸರಣಿ ಸುಳ್ಳುಗಳ ಮೂಲಕ ಗಲಭೆ ಹರಡಲು ಕಾರಣರಾದ ಕುಖ್ಯಾತಿ ಅವರಿಗಿದೆ. ಕೇಂದ್ರ ಗ್ರಹ ಸಚಿವರಿಗೇ ಸುಳ್ಳು ಮಾಹಿತಿ ನೀಡಿದ ಸಂಸದೆ ಎಂಬ ದಾಖಲೆ ಅವರದ್ದು ಎಂದು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಮಂಡಿಸಿರುವ ಠರಾವಿನಲ್ಲಿ ತಿಳಿಸಲಾಗಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago