Featured

ಇ-ಶ್ರಮ್‌ ಯೋಜನೆ : ಯಾರು ಅರ್ಹರು? ನೋಂದಣಿ ಹೇಗೆ ? ಓದಿ ಈ ವರದಿ – Vishwanews24

ಇ-ಶ್ರಮ್‌ ಯೋಜನೆ : ಯಾರು ಅರ್ಹರು? ನೋಂದಣಿ ಹೇಗೆ ? ಓದಿ ಈ ವರದಿ – Vishwanews24

ಉಡುಪಿ : ಕೇಂದ್ರ ಸರಕಾರದ ಇ-ಶ್ರಮ್‌ ಪೋರ್ಟಲ್‌ನಲ್ಲಿ ಜಿಲ್ಲೆಯ 1,05,439 ಅಸಂಘಟಿತ ಕಾರ್ಮಿಕರು ನೋಂದಣಿ ಮಾಡಿಕೊಂಡಿದ್ದಾರೆ. ರಾಜ್ಯ ಸೇವಾ ಕೇಂದ್ರದಲ್ಲಿ 16, ಸಾಮಾನ್ಯ ಸೇವಾ ಕೇಂದ್ರದಲ್ಲಿ ಸಿಎಸ್‌ಸಿ 62,913, ಸ್ವಯಂ ನೋಂದಣಿ 42,510 ಆಗಿದೆ.

ಅಸಂಘಟಿತ ವಲಯದ ಕಾರ್ಮಿಕರ ಎಲ್ಲ ಮಾಹಿತಿ, ಡೇಟಾವನ್ನು ಟ್ರ್ಯಾಕ್‌ ಮಾಡಲು ಮತ್ತು ಸಂಗ್ರಹಿಸಲು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಈ ಪೋರ್ಟಲ್‌ ಆರಂಭಸಿದೆ.

ಅಸಂಘಟಿತ ವಲಯದ ಕಟ್ಟಡ ಕಾರ್ಮಿಕರು, ವಲಸೆ ಕಾರ್ಮಿಕರು, ಬೀದಿ ವ್ಯಾಪಾರಿಗಳು, ಮನೆ ಕೆಲಸ ಗಾರರು, ಕೃಷಿ ಕಾರ್ಮಿಕರು ಸೇರಿ ವಿವಿಧ ವಲಯ ದಲ್ಲಿರುವ ಅಸಂಘಟಿತ ಕಾರ್ಮಿಕರು ಇ-ಶ್ರಮ್‌ ವೆಬ್‌ಸೈಟ್‌ನಲ್ಲಿ ನೋಂದಣಿ ಮಾಡಿಕೊಳ್ಳುತ್ತಿದ್ದಾರೆ.

ನೋಂದಣಿಯಾದ ಅನಂತರ ಸರಕಾರದಿಂದ ಇ-ಶ್ರಮ್‌ ಕಾರ್ಡ್‌ ನೀಡಲಾಗುತ್ತದೆ. ಕಾರ್ಮಿಕನು ಸರಕಾರದ ಯೋಜನೆಗಳ ಪ್ರಯೋಜನವನ್ನು ನೇರವಾಗಿ ಪಡೆಯಲು ಸಾಧ್ಯವಾಗುತ್ತದೆ.

ಮಾನದಂಡ ಹಾಗೂ ದಾಖಲೆ

ಇ-ಶ್ರಮ್‌ ಕಾರ್ಡ್‌ ನೋಂದಣಿ ಮಾಡಿಸಿ ಕೊಳ್ಳುವವರ ವಯೋಮಿತಿ 16-59 ವರ್ಷಗಳ ನಡುವೆ ಇರಬೇಕು. ಇಪಿಎಫ್‌ಒ ಅಥವಾ ಇಎಸ್‌ಐಸಿ ಸದಸ್ಯರಾಗಿರಬಾರದು. ಆದಾಯ ತೆರಿಗೆ ಪಾವತಿಸುವವರಾಗಿರಬಾರದು. ಅಸಂಘಟಿತ ವಲಯದಲ್ಲಿ ಕೆಲಸ ಮಾಡುತ್ತಿರಬೇಕು. ಇಂತಹ ವರು ಆಧಾರ್‌ ಕಾರ್ಡ್‌, ಬ್ಯಾಂಕ್‌ ಪಾಸ್‌ ಪುಸ್ತಕ, ವಿದ್ಯುತ್‌ ಬಿಲ./ಪಡಿತರ ಚೀಟಿ, ಮೊಬೈಲ್‌ ಸಂಖ್ಯೆಯನ್ನು ನೀಡಬೇಕು.

ಯಾರು ಅರ್ಹರು?
ಸಣ್ಣ ಮತ್ತು ಅತಿ ಸಣ್ಣ ರೈತರು, ಕೃಷಿ ಕಾರ್ಮಿಕರು, ಬೆಳೆಗಾರು, ಮೀನುಗಾರರು, ಪಶು ಸಂಗೋಪನೆಯಲ್ಲಿ ತೊಡಗಿರುವವರು, ಬೀಡಿಕಟ್ಟುವವರು, ಲೇಬಲ್‌ ಮತ್ತು ಪ್ಯಾಕಿಂಗ್‌, ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರು, ಚರ್ಮದ ಕೆಲಸಗಾರರು, ನೇಕಾರರು, ಬಡಗಿ, ಇಟ್ಟಿಗೆ ಹಾಗೂ ಕಲ್ಲು ಕ್ವಾರಿಗಳಲ್ಲಿ ಕೆಲಸ ಮಾಡುವವರು, ಗರಗಸದ ಕಾರ್ಖಾನೆಯಲ್ಲಿ ಕೆಲಸ ಮಾಡುವವರು, ಶುಶ್ರೂಷಕಿಯರು, ಗೃಹ ಕಾರ್ಮಿಕರು, ûೌರಿಕರು, ತರಕಾರಿ ಮತ್ತು ಹಣ್ಣು ಮಾರಾಟಗಾರರು, ಸುದ್ದಿ ಪತ್ರಿಕೆ ಮಾರಾಟಗಾರರು, ಆಟೋ ಚಾಲಕರು, ರೇಷ್ಮೆ ಕೃಷಿ ಕಾರ್ಮಿಕರು, ಗೃಹ ಸೇವಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ವಲಸೆ ಕಾರ್ಮಿಕರು.

ನೋಂದಣಿ ಹೇಗೆ?
ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಇ-ಶ್ರಮ್‌ ಪೋರ್ಟಲ್‌ಗೆ ಅರ್ಜಿ ಸಲ್ಲಿಸುವವರಿಗೆ ವಿಶಿಷ್ಟ ಗುರುತು ಸಂಖ್ಯೆ ಕಾರ್ಡ್‌ ಒದಗಿಸುತ್ತದೆ. ಇ-ಶ್ರಮ್‌ ಪೋರ್ಟಲ್‌ ನೋಂದಣಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸಮೀ ಪದ ಸಾಮಾನ್ಯ ಸೇವಾ ಕೇಂದ್ರದಲ್ಲಿ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆಧಾರ್‌ ಕಾರ್ಡ್‌ಗೆ ಲಿಂಕ್‌ ಮಾಡಿದ ಮೊ. ಸಂಖ್ಯೆಯನ್ನು ಬಳಸಿಕೊಂಡು ಇ ಶ್ರಮ್‌ ಪೋರ್ಟಲ್‌ನಲ್ಲಿ ಸ್ವಯಂ ನೋಂದಣಿ ಮಾಡಿಕೊಳ್ಳಬಹುದು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago