Featured

ಈಗ ನಾನೇ ಮುಖ್ಯಮಂತ್ರಿ, ಮುಂದೆಯೂ ನಾನೇ ಇರ್ತೀನಿ : ಸಿದ್ದರಾಮಯ್ಯ – vishwanews24

ಎರಡೂವರೆ ವರ್ಷ ಸಿಎಂ ಅಂತ ಹೇಳೇ ಇಲ್ಲ, ಆ ತೀರ್ಮಾನ ಆಗಿಲ್ಲ ..

ಈಗಲೂ ನಾನೇ ಮುಖ್ಯಮಂತ್ರಿ, ಹೈಕಮಾಂಡ್ ಹೇಳೋವರೆಗೂ ನಾನೇ ಮುಖ್ಯಮಂತ್ರಿ ..

ನನಗೆ ದೈಹಿಕ ನಿಶ್ಯಕ್ತಿ ಇರಬಹುದು, ರಾಜಕೀಯ ನಿಶ್ಯಕ್ತಿ ಇಲ್ಲ ..

ಅಧಿವೇಶನದಲ್ಲಿ ಕಾಂಗ್ರೆಸ್ ಕುರ್ಚಿ ಕದನಕ್ಕೆ ಸಿಎಂ ಕ್ಲ್ಯಾರಿಟಿ

ಬೆಳಗಾವಿ: ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯುತ್ತಿದ್ದ ವೇಳೆ ಕಾಂಗ್ರೆಸ್ ಕುರ್ಚಿ ಕದನದ ಸ್ವಾರಸ್ಯಕರ ಚರ್ಚೆ ನಡೆದಿದೆ.

ಇನ್ನೂ ಅಧಿವೇಶನದ ಕಡೇ ದಿನ ಸಿಎಂ ಸಿದ್ದರಾಮಯ್ಯ  ಕುರ್ಚಿ ಕದನಕ್ಕೆ ಕ್ಲ್ಯಾರಿಟಿ ಕೊಟ್ಟಿದ್ದಾರೆ. ಎರಡೂವರೆ ವರ್ಷ ಸಿಎಂ ಅಂತಾ ತೀರ್ಮಾನ ಆಗಿಲ್ಲ ಎನ್ನುವ ಮೂಲಕ ಫುಲ್ ಟರ್ಮ್ ಸಿಎಂ ಬ್ರಹ್ಮಾಸ್ತ್ರಾ ಪ್ರಯೋಗಿಸಿದ್ದಾರೆ.

ವಿಧಾನಸಭೆಯಲ್ಲಿ ಉತ್ತರ ಕರ್ನಾಟಕದ ಚರ್ಚೆಗೆ ಉತ್ತರ ಕೊಡುವ ವೇಳೆ, ಬಿಜೆಪಿ ಸದಸ್ಯರ ಕಾಲೆಳೆಯುವ ಮಾತುಗಳನ್ನೇ ಮೆಟ್ಟಿಲುಗಳನ್ನಾಡಿ ಮಾಡಿಕೊಂಡ ಸಿಎಂ, ಪಕ್ಷದೊಳಗಿನ ವಿರೋಧಿಗಳಿಗೂ ಗುನ್ನಾ ಹೊಡೆದಿದ್ದಾರೆ. ಎರಡೂವರೆ ವರ್ಷ ಸಿಎಂ ಅಂತ ತೀರ್ಮಾನ ಆಗಿಲ್ಲ. ಶಾಸಕರು 5 ವರ್ಷಕ್ಕೆ ಸಿಎಂ ಆಯ್ಕೆ ಮಾಡಿದ್ದಾರೆ. ನಾನು ಐದು ವರ್ಷಕ್ಕೆ ಸಿಎಂ ಆಗಿ ಆಯ್ಕೆ ಆಗಿದ್ದೇನೆ ಅಂತ ವಿಪಕ್ಷ ನಾಯಕ ಅಶೋಕ್‌ಗೆ ತಿರುಗೇಟು ಕೊಟ್ಟಿದ್ದಾರೆ.

ಎರಡೂವರೆ ವರ್ಷಕ್ಕೆ ಅಂತ ಹೇಳೇ ಇಲ್ಲ, ಆ ತೀರ್ಮಾನ ಆಗಿಲ್ಲ. ಈಗ ನಾನೇ ಮುಖ್ಯಮಂತ್ರಿ, ಮುಂದೆಯೂ ನಾನೇ ಇರ್ತೀನಿ. ಈಗ ನಾನು ಸಿಎಂ ಆಗಿದ್ದೇನೆ, ನನ್ನ ಪ್ರಕಾರ ಹೈಕಮಾಂಡ್ ನನ್ನ ಪರವೇ ಇದೆ. ಈಗಲೂ ನಾನೇ ಮುಖ್ಯಮಂತ್ರಿ, ಹೈಕಮಾಂಡ್ ಹೇಳೋವರೆಗೂ ನಾನೇ ಮುಖ್ಯಮಂತ್ರಿ. ನನಗೆ ದೈಹಿಕ ನಿಶ್ಯಕ್ತಿ ಇರಬಹುದು, ರಾಜಕೀಯ ನಿಶ್ಯಕ್ತಿ ಇಲ್ಲ, ಈಗಲೂ ಇಲ್ಲ, ಮುಂದೆಯೂ ಇಲ್ಲ, ಹಿಂದೆಯೂ ಇರಲಿಲ್ಲ. ಜನರ ಆಶೀರ್ವಾದ ಇದ್ದರೆ ಮಾತ್ರ ಅಧಿಕಾರ, ನಾನು ಹಣೆಬರಹದಲ್ಲಿ ನಂಬಿಕೆ ಇಟ್ಟಿಲ್ಲ ಎಂದರಲ್ಲದೇ ನಮಗೆ ಯಾರೂ ನಿರ್ದೇಶನ ಕೊಡೋರು ಇಲ್ಲ, ನಮಗೆ ನಾವೇ ನಿರ್ದೇಶಕರು, ನಾವೇ ಪ್ರೊಡ್ಯೂಸರ್, ನಾವೇ ಆ್ಯಕ್ಟರ್‌ಗಳು ಅಂತ ಅಧಿಕಾರ ಹಂಚಿಕೆ ಮಾತುಕತೆಗೆ ಬ್ರೇಕ್‌ ಹಾಕಿದ್ದಾರೆ.
Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 hours ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 hours ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 hours ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

5 hours ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

5 hours ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

5 hours ago