Featured

ಈಗ ನೀವು ಕಾಶ್ಮೀರದ ಬೆಳ್ಳಗಿನ ಯುವತಿಯರನ್ನು ಮದುವೆಯಾಗಬಹುದು : ಬಿಜೆಪಿ ಶಾಸಕ ವಿಕ್ರಮ್ ಸೈನಿ -Vishwanews24

ಮುಜಾಫರ್‌ನಗರ: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷಾಧಿಕಾರವನ್ನು ರದ್ದು ಮಾಡಿದ್ದರಿಂದ ಈಗ ನೀವು ಕಾಶ್ಮೀರದ ಬೆಳ್ಳಗಿನ ಯುವತಿಯರನ್ನು ಮದುವೆಯಾಗಬಹುದು ಎಂದು  ಬಿಜೆಪಿ ಶಾಸಕ ವಿಕ್ರಮ್ ಸೈನಿ, ಹೇಳಿದ್ದಾರೆ.

ಉತ್ತರ ಪ್ರದೇಶದ ಬಿಜೆಪಿ ಶಾಸಕರಾಗಿದ್ದಾರೆ ವಿಕ್ರಮ್ ಸೈನಿ. ಸಂವಿಧಾನದ 370ನೇ ವಿಧಿ ರದ್ದು ಪಡಿಸಿರುವ ನಿರ್ಧಾರವನ್ನು ಸ್ವಾಗತಿ ಮುಜಾಫರ್‌ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸೈನಿ,  ಕಾಶ್ಮೀರದ ಬಗ್ಗೆ ಕೇಂದ್ರ ಸರ್ಕಾರ ತೆಗೆದುಕೊಂಡ ಈ ನಿರ್ಧಾರದಿಂದಾಗಿ ಬಿಜೆಪಿ ಕಾರ್ಯಕರ್ತರು ಅಲ್ಲಿಗೆ ಹೋಗಿ ಅಲ್ಲಿ ಜಮೀನು ಖರೀದಿಸಬಹುದು. ಅಲ್ಲಿಯವರನ್ನು ಮದುವೆಯಾಗಬಹುದು ಎಂದಿದ್ದಾರೆ.

ನಮ್ಮ ಕಾರ್ಯಕರ್ತರು ತುಂಬಾ ಉತ್ಸುಕರಾಗಿದ್ದಾರೆ. ಮದುವೆಯಾಗದ ಯುವಕರು ಅಲ್ಲಿಗೆ ಹೋಗಿ ಮದುವೆಯಾಗಬಹುದು. ಅಲ್ಲಿ ಈಗ ಯಾವುದೇ ಸಮಸ್ಯೆಗಳಿಲ್ಲ. ಈ ಹಿಂದೆ ಅಲ್ಲಿ ಮಹಿಳೆಯರ ಮೇಲೆ ತುಂಬಾ ದಬ್ಬಾಳಿಕೆ ನಡೆಯುತ್ತಿತ್ತು. ಕಾಶ್ಮೀರದ ಮಹಿಳೆಯೊಬ್ಬರು ಉತ್ತರ ಪ್ರದೇಶದ ಯುವಕನನ್ನು ಮದುವೆಯಾದರೆ ಆಕೆಯ ಪೌರತ್ವ ರದ್ದು ಆಗುತ್ತಿತ್ತು. ಭಾರತ ಮತ್ತು ಕಾಶ್ಮೀರದಲ್ಲಿ ಬೇರೆ ಬೇರೆ ಪೌರತ್ವ ಇದೆ ಎಂದು ಸೈನಿ ಹೇಳುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ಮುಸ್ಲಿಂ ಕಾರ್ಯಕರ್ತರು ಸಂಭ್ರಮಿಸಬೇಕು. ಬೆಳ್ಳಗಿರುವ ಕಾಶ್ಮೀರದ ಯುವತಿಯರನ್ನು ಅವರು ಮದುವೆಯಾಗಬಹುದು. ಅಲ್ಲಿಯೂ ಸಂಭ್ರಮಾಚರಣೆ ಮಾಡಬೇಕು. ಹಿಂದೂ ಆಗಲೀ, ಮುಸ್ಲಿಂ ಆಗಲೀ ಎಲ್ಲರೂ ಸಂಭ್ರಮಿಸಬೇಕು. ಇಡೀ ದೇಶವೇ ಸಂಭ್ರಮಿಸಬೇಕಾದ ವಿಷಯ ಇದು ಎಂದು ಸೈನಿ  ಹೇಳಿದ್ದಾರೆ.

 

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

1 day ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

1 day ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

1 day ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

1 day ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

2 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

2 days ago