ಬೆಂಗಳೂರು: ರಾಜ್ಯ ಸರ್ಕಾರ ಇತಿಹಾಸದಿಂದ ಪಾಠ ಕಲಿಯಬೇಕಿತ್ತು. ದುರಂತವೆಂದರೆ ಈಗ ರಾಜ್ಯ ನಾವಿಕನಿಲ್ಲದ ದೋಣಿಯಂತಾಗಿದೆ. ರಾಜ್ಯದ ಜನರನ್ನು ಆ ದೇವರೇ ಕಾಪಾಡಬೇಕು ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ರಾಜ್ಯ ಸರ್ಕಾರ ಇತಿಹಾಸದಿಂದ ಪಾಠ ಕಲಿಯಬೇಕಿತ್ತು. ಕೇವಲ 1 ವರ್ಷದ ಹಿಂದೆ ಮಳೆ ಮಾಡಿದ ಅನಾಹುತ ಸರ್ಕಾರ ನಡೆಸುವವರ ಗಮನದಲ್ಲಿರಬೇಕಿತ್ತು. ಆದರೆ ರಾಜ್ಯದ ಜನರ ದುರಾದೃಷ್ಟ,ಕೊರೊನಾ ಕಂಟಕದ ಮಧ್ಯೆಯೆ ಪ್ರವಾಹ ಜನರನ್ನು ಬೀದಿಗೆ ತಂದು ನಿಲ್ಲಿಸಿದೆ. ದುರಂತವೆಂದರೆ ಈಗ ರಾಜ್ಯ ನಾವಿಕನಿಲ್ಲದ ದೋಣಿಯಂತಾಗಿದೆ. ರಾಜ್ಯದ ಜನರನ್ನು ಆ ದೇವರೇ ಕಾಪಾಡಬೇಕು!! ಎಂದಿದ್ದಾರೆ.
ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಕೊಡಗು ಸೇರಿದಂತೆ ಕರಾವಳಿ ಹಾಗೂ ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಪ್ರವಾಹ ಉಂಟಾಗಿದೆ. ಅಲ್ಲದೇ, ಭಾರೀ ಮಳೆಯ ಪರಿಣಾಮ ಗುಡ್ಡಗಳು ಕುಸಿದಿವೆ. ಜನ ಜೀವನ ಅಸ್ತವ್ಯಸ್ತವಾಗಿದೆ. ಕೊರೊನಾದ ನಡುವೆ ಪ್ರವಾಹ ಜನರನ್ನು ಬೀದಿಗೆ ತಂದು ನಿಲ್ಲಿಸಿದೆ. ರಾಜ್ಯ ಸರ್ಕಾರವು ಪ್ರಸ್ತುತ ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…