ಈಗ ರಾಜ್ಯ ನಾವಿಕನಿಲ್ಲದ ದೋಣಿಯಂತಾಗಿದೆ, ರಾಜ್ಯದ ಜನರನ್ನು ಆ ದೇವರೇ ಕಾಪಾಡಬೇಕು : ದಿನೇಶ್ ಗುಂಡೂರಾವ್ -Vishwanews24

ಬೆಂಗಳೂರು: ರಾಜ್ಯ ಸರ್ಕಾರ ಇತಿಹಾಸದಿಂದ ಪಾಠ ಕಲಿಯಬೇಕಿತ್ತು. ದುರಂತವೆಂದರೆ ಈಗ ರಾಜ್ಯ ನಾವಿಕನಿಲ್ಲದ ದೋಣಿಯಂತಾಗಿದೆ. ರಾಜ್ಯದ ಜನರನ್ನು ಆ ದೇವರೇ ಕಾಪಾಡಬೇಕು ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

 

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ರಾಜ್ಯ ಸರ್ಕಾರ ಇತಿಹಾಸದಿಂದ ಪಾಠ ಕಲಿಯಬೇಕಿತ್ತು. ಕೇವಲ 1 ವರ್ಷದ ಹಿಂದೆ ಮಳೆ ಮಾಡಿದ ಅನಾಹುತ ಸರ್ಕಾರ ನಡೆಸುವವರ ಗಮನದಲ್ಲಿರಬೇಕಿತ್ತು. ಆದರೆ ರಾಜ್ಯದ ಜನರ ದುರಾದೃಷ್ಟ,ಕೊರೊನಾ ಕಂಟಕದ ಮಧ್ಯೆಯೆ ಪ್ರವಾಹ ಜನರನ್ನು ಬೀದಿಗೆ ತಂದು ನಿಲ್ಲಿಸಿದೆ. ದುರಂತವೆಂದರೆ ಈಗ ರಾಜ್ಯ ನಾವಿಕನಿಲ್ಲದ ದೋಣಿಯಂತಾಗಿದೆ. ರಾಜ್ಯದ ಜನರನ್ನು ಆ ದೇವರೇ ಕಾಪಾಡಬೇಕು!! ಎಂದಿದ್ದಾರೆ.

ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಕೊಡಗು ಸೇರಿದಂತೆ ಕರಾವಳಿ ಹಾಗೂ ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಪ್ರವಾಹ ಉಂಟಾಗಿದೆ. ಅಲ್ಲದೇ, ಭಾರೀ ಮಳೆಯ ಪರಿಣಾಮ ಗುಡ್ಡಗಳು ಕುಸಿದಿವೆ. ಜನ ಜೀವನ ಅಸ್ತವ್ಯಸ್ತವಾಗಿದೆ. ಕೊರೊನಾದ ನಡುವೆ ಪ್ರವಾಹ ಜನರನ್ನು ಬೀದಿಗೆ ತಂದು ನಿಲ್ಲಿಸಿದೆ. ರಾಜ್ಯ ಸರ್ಕಾರವು ಪ್ರಸ್ತುತ ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ

Vishwa News 24

Recent Posts

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

2 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

3 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

3 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

3 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

3 hours ago

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

4 hours ago