ಕಾಪು : ಪಾಂಗಾಳ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಈಚರ್ ಟೆಂಪೊ ಮತ್ತು ಟ್ಯಾಂಕರ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಟ್ಯಾಂಕರ್ ಚಾಲಕ ಸೇರಿದಂತೆ ಮೂವರು ಗಾಯಗೊಂಡ ಬಗ್ಗೆ ವರದಿಯಾಗಿದೆ.
ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಈಚರ್ ಟೆಂಪೊಗೆ ಹಿಂದಿನಿಂದ ಬಂದ ಟ್ಯಾಂಕರ್ ಢಿಕ್ಕಿ ಹೊಡೆದಿದೆ. ಇದರಿಂದ ಚಾಲಕನ ನಿಯಂತ್ರಣ ತಪ್ಪಿದ ಈಚರ್ ಹೆದ್ದಾರಿಯ ಡಿವೈಡರ್ ಉರುಳಿ ಬಿತ್ತೆನ್ನಲಾಗಿದೆ. ಅಪಘಾತದ ತೀವ್ರತೆಗೆ ಟ್ಯಾಂಕರ್‌ನ ಮುಂಭಾಗ ಜಖಂಗೊಂಡಿದ್ದು, ಚಾಲಕನ ಕಾಲು ಸಿಲುಕಿಕೊಂಡಿತ್ತು. ಸ್ಥಳೀಯರು ಚಾಲಕನನ್ನು ರಕ್ಷಿಸಲು ಹರಸಾಹಸಪಟ್ಟರು.
ಅದೇ ರೀತಿ ಈಚರ್‌ನಲ್ಲಿದ್ದವರಿಗೆ ಗಾಯಗಳಾಗಿರುವ ಬಗ್ಗೆ ತಿಳಿದುಬಂದಿದೆ. ಸ್ಥಳಕ್ಕೆ ಕಾಪು ಪೊಲೀಸರು ಆಗಮಿಸಿದ್ದು, ಕ್ರೇನ್ ಮೂಲಕ ಅಪಘಾತಕ್ಕೀಡಾದ ವಾಹನ ಗಳನ್ನು ತೆರವುಗೊಳಿಸುವ ಕಾರ್ಯ ಮಾಡುತ್ತಿದ್ದಾರೆ. ವಾಹನ ಸಂಚಾರದಲ್ಲ ವ್ಯತ್ಯಯ ಉಂಟಾಗಿದ್ದು, ಇನ್ನಷ್ಟೆ ಹೆಚ್ಚಿನ ಮಾಹಿತಿ ಗಳು ತಿಳಿದು ಬರಬೇಕಾಗಿವೆ.
ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…
ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…
ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…
ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ , ಪುತ್ರ ನಾಪತ್ತೆ ; ಪ್ರಕರಣ ದಾಖಲು…
ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…