Featured

ಈದುಲ್ ಫಿತ್ರ್ : ಕಾಪು ಮುಸ್ಲಿಮ್ ಒಕ್ಕೂಟದಿಂದ ಸೌಹಾರ್ದತೆಯ ಸಂದೇಶದೊಂದಿಗೆ ಸಿಹಿ ತಿಂಡಿ ಹಂಚಿಕೆ – Vishwanews24

ಈದುಲ್ ಫಿತ್ರ್ : ಕಾಪು ಮುಸ್ಲಿಮ್ ಒಕ್ಕೂಟದಿಂದ ಸೌಹಾರ್ದತೆಯ ಸಂದೇಶದೊಂದಿಗೆ ಸಿಹಿ ತಿಂಡಿ ಹಂಚಿಕೆ – Vishwanews24

ಕಾಪು : ಈದುಲ್ ಫಿತ್ರ್ ಹಬ್ಬದ ನಮಾಜ್ ನಿರ್ವಹಿಸಿ, ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಕಾಪು ತಂಡವು ಕಾಪು ತಾಲೂಕು ಅಧ್ಯಕ್ಷ ಜನಾಬ್ ಶಬೀಹ್ ಅಹಮದ್ ಕಾಝೀ ಯವರ ನೇತೃತ್ವದಲ್ಲಿ ಕಾಪುವಿನ ವ್ರತ್ತ ನಿರೀಕ್ಷಕ ಕಚೇರಿಯಿಂದ ಕಾಪು ಪೊಲೀಸ್ ಠಾಣೆ ತನಕದ ಹಿಂದೂ ಸಹೋದರರ ವ್ಯಾಪಾರ ಮಳಿಗೆಗಳಿಗೆ ಭೇಟಿ ನೀಡಿ ಸೌಹಾರ್ದತೆಯ ಸಂದೇಶದೊಂದಿಗೆ ಸಿಹಿ ತಿಂಡಿಯನ್ನು ಹಂಚಿ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.

ಈ ಸಂದರ್ಭದಲ್ಲಿ ವ್ರತ್ತ ನಿರೀಕ್ಷಕ ಅಧಿಕಾರಿ ಪ್ರಕಾಶ್ ರವರು ಹಾಗೂ ಠಾಣಾಧಿಕಾರಿ ರಾಘವೇಂದ್ರರವರು ಇಂತಹ ಕಾರ್ಯಕ್ರಮದಿಂದ ಸಮಾಜದಲ್ಲಿ ಪ್ರೀತಿ, ಪ್ರೇಮ, ಸಹೋದರತ್ವ ಗಟ್ಟಿಗೊಳ್ಳುತ್ತದೆ ಎಂದರು. ಹಿಂದೂ, ಮುಸ್ಲಿಮರು ಈ ದೇಶದಲ್ಲಿ ಹಿಂದಿನಿಂದಲೂ ಅನೋನ್ಯತೆಯಿಂದ ಇದ್ದು, ಮುಂದಿನ ದಿನಗಳಲ್ಲೂ ನಮ್ಮ, ನಿಮ್ಮ ಸಂಬಂಧ ಹೀಗೆಯೇ ಇರಲಿ ಎಂದು ಉದ್ಯಮಿ ಹರೀಶ್ ನಾಯಕ್ ರವರು ಹೇಳಿದರು. ಒಕ್ಕೂಟದ ಈ ಕಾರ್ಯಕ್ರಮವು ಜನರಲ್ಲಿ ತುಂಬಾ ಪ್ರಭಾವ ಬೀರಿದ್ದು, ತಂಡದಲ್ಲಿ ಜಿಲ್ಲಾ ಉಪಾಧ್ಯಕ್ಷ ಅನ್ವರ್ ಅಲಿ ಕಾಪು, ಪದಾಧಿಕಾರಿಗಳದ ಮುಹಮ್ಮದ್ ಇಕ್ಬಾಲ್ ಸಾಹೇಬ್ ಮಜೂರು, ನಸೀರ್ ಅಹಮದ್, ಮುಸ್ತಾಕ್ ಇಬ್ರಾಹೀಮ್ ಉಪಸ್ಥಿತರಿದ್ದರು.

Vishwa News 24

Recent Posts

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ – vishwanews24

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…

6 minutes ago

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ – vishwanews24

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…

36 minutes ago

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – vishwanews24

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…

45 minutes ago

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ – vishwanews24

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…

1 hour ago

ಹಿಂದಿ ಕಿರುತೆರೆ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…

1 hour ago

ಅಯ್ಯಪ್ಪ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್.ಡಿ. ಕುಮಾರಸ್ವಾಮಿ- vishwanews24

ಅಯ್ಯಪ್ಪ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್.ಡಿ. ಕುಮಾರಸ್ವಾಮಿ ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಶಬರಿಮಲೆ  ಯಾತ್ರೆ ಕೈಗೊಂಡಿದ್ದಾರೆ.…

2 hours ago