ಬೆಂಗಳೂರು: ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಇಲ್ಲಿ ಅವಕಾಶ ಇಲ್ಲ. ಆದರೆ ಸ್ವಾತಂತ್ರ್ಯೋತ್ಸವವನ್ನು ನಾವೇ ಅದ್ಧೂರಿಯಾಗಿ ಆಚರಿಸುತ್ತೇವೆ ಎಂದು ಶಾಸಕ ಜಮೀರ್ ಅಹ್ಮದ್ ತಿಳಿಸಿದರು.
ಈದ್ಗಾ ಮೈದಾನ ಕಂದಾಯ ಇಲಾಖೆಗೆ ಸೇರಿದ ಆಸ್ತಿ ಎಂಬ ಆದೇಶ ಬೆನ್ನಲ್ಲೇ ಚಾಮರಾಜಪೇಟೆ ಈದ್ಗಾ ಮೈದಾನಕ್ಕೆ ಭಾರೀ ಭದ್ರತೆ ಕೈಗೊಳ್ಳಲಾಗಿದೆ. ಜೊತೆಗೆ ಶಾಂತಿ ಸೌಹಾರ್ದತೆ ಕಾಪಾಡಲು ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಮೈದಾನಕ್ಕೆ ಶಾಸಕ ಜಮೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಮಾತನಾಡಿದ ಅವರು, ಮೈದಾನದಲ್ಲಿ ಹೇಗೆ ಆಚರಣೆ ಮಾಡ್ಬೇಕು ಎಂಬುದರ ಬಗ್ಗೆ ಪರಿಶೀಲನೆ ನಡೆಸಲು ಬಂದಿದ್ದೇನೆ. 75ನೇ ಸ್ವಾತಂತ್ರ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಇನ್ಮುಂದೆ ಸ್ವಾತಂತ್ರ್ಯೋತ್ಸವ, ಗಣರಾಜ್ಯೋತ್ಸವ ಇಲ್ಲಿ ನಡೆಯುತ್ತದೆ. ಆದರೆ ಯಾವುದೇ ಧಾರ್ಮಿಕ ಹಬ್ಬಗಳಿಗೆ ಇಲ್ಲಿ ಅವಕಾಶವಿಲ್ಲ. ಎಷ್ಟು ಜನ ಬೇಕಾದ್ರೂ ಸೇರಲಿ ಜತೆಯಾಗಿ ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತದೆ ಎಂದು ಹೇಳಿದರು.
ಇತ್ತೀಚೆಗಷ್ಟೇ ಈದ್ಗಾ ವಿವಾದದ ಬಗ್ಗೆ ವರ್ಕ್ಫ್ ಬೋರ್ಡ್ ಸಲ್ಲಿಸಿದ್ದ ಅರ್ಜಿಯನ್ನು ಬಿಬಿಎಂಪಿ ವಜಾ ಮಾಡಿದ್ದು, ಈದ್ಗಾ ಮೈದಾನ ಕಂದಾಯ ಇಲಾಖೆ ಆಸ್ತಿ ಎಂದು ಜಂಟಿ ಆಯುಕ್ತ ಶ್ರೀನಿವಾಸ್ ಆದೇಶ ಹೊರಡಿಸಿದ್ದರು.
ತುರ್ತು ಸುದ್ದಿಗೋಷ್ಠಿ ನಡೆಸಿದ್ದ ಅವರು, ಈ ಹಿಂದೆ ಚಾಮರಾಜಪೇಟೆ ಆಟದ ಮೈದಾನವನ್ನು ವರ್ಕ್ಫ್ ಬೋರ್ಡ್ ಹೆಸರಿಗೆ ಖಾತೆ ಮಾಡುವಂತೆ ಅರ್ಜಿ ಸಲ್ಲಿಸಿದ್ದರು. ಆದರೆ ಇದೀಗ ಈ ಅರ್ಜಿಯನ್ನು ವಜಾಗೊಳಿಸಿದ್ದು, ಬಿಬಿಎಂಪಿ ದಾಖಲೆಗಳಲ್ಲಿ ಈ ಆಸ್ತಿಯನ್ನು ಕರ್ನಾಟಕ ಸರ್ಕಾರದ ಕಂದಾಯ ಇಲಾಖೆ ಆಸ್ತಿಯೆಂದು ನಮೂದಿಸಲು ಸೂಚನೆ ನೀಡಿತ್ತು. ವರ್ಕ್ಫ್ ಬೋರ್ಡ್ ಆಸ್ತಿಯ ಬಗ್ಗೆ ಹಕ್ಕು ಸ್ಥಾಪಿಸಬೇಕಿದ್ದಲ್ಲಿ ಕಂದಾಯ ಇಲಾಖೆ ಬಳಿ ವ್ಯವಹರಿಸಬೇಕು ಎಂದು ತಿಳಿಸಿದ್ದರು.
ನನ್ನ ಅಮೃತ ಮಹೋತ್ಸವದಲ್ಲಿ ಸೇರಿದ್ದ ಜನಸ್ತೋಮ ನೋಡಿ ಬಿಜೆಪಿಯವರಿಗೆ ಭಯ ಬಂದಿದೆ : ಸಿದ್ದರಾಮಯ್ಯ – Vishwanews24
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…