ಬೆಂಗಳೂರು: ಚಾಮರಾಜಪೇಟೆ ಶಾಸಕ ಜಮೀರ್ ವಿರುದ್ಧ ಹಿಂದೂ ಸಂಘಟನೆಗಳು ಕಿಡಿಕಾರಿದ್ದು ನಾವು ಗಣೇಶೋತ್ಸವ ಆಚರಿಸುತ್ತೇವೆ. ತಾಕತ್ತಿದ್ದರೆ ತಡೆಯಿರಿ ಎಂದು ಸವಾಲು ಹಾಕಿವೆ.
ಸೋಮವಾರ ಮಾಧ್ಯಮಗಳ ಜೊತೆ ಮಾತನಾಡಿದ್ದ ಜಮೀರ್, ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅವಕಾಶ ಇಲ್ಲ. ಆದರೆ ಸ್ವಾತಂತ್ರ್ಯೋತ್ಸವವನ್ನು ನಾವೇ ಅದ್ಧೂರಿಯಾಗಿ ಆಚರಿಸುತ್ತೇವೆ ಎಂದು ಹೇಳಿದ್ದರು.
ಜಮೀರ್ ಅವರಿಂದ ಈ ಹೇಳಿಕೆ ಪ್ರಕಟವಾದ ಬೆನ್ನಲ್ಲೇ ಶ್ರೀರಾಮ ಸೇನೆ, ಅದು ಈದ್ಗಾ ಮೈದಾನವಲ್ಲ. ಅಲ್ಲಿರುವುದು ಬಿಬಿಎಂಪಿ ಆಟದ ಮೈದಾನ. ಗಣೇಶೋತ್ಸವವನ್ನು ಅಲ್ಲೇ ಮಾಡುತ್ತೇವೆ. ತಾಕತ್ತಿದ್ದರೆ ತಡೀರಿ ಎಂದು ಪೋಸ್ಟರ್ ಹಾಕಿದೆ. ಜಮೀರ್ ಹೇಳಿಕೆ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಈಗ ಈ ವಿಚಾರದ ಬಗ್ಗೆ ಬಿಸಿಬಿಸಿ ಚರ್ಚೆಯಾಗುತ್ತಿದೆ.
ಪ್ರಸ್ತುತ ಈದ್ಗಾ ಮೈದಾನದಲ್ಲಿ ವರ್ಷಕ್ಕೆ ಎರಡು ಬಾರಿ ಮುಸ್ಲಿಮರಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶವಿದೆ. ಮುಸ್ಲಿಂ ಸಮುದಾಯದ ರಂಜಾನ್, ಬಕ್ರೀದ್ ಆಚರಣೆ ಹೊರತುಪಡಿಸಿ ಯಾವುದೇ ಧಾರ್ಮಿಕ ಆಚರಣೆಗಳಿಗೂ ಪೊಲೀಸರಿಂದ ಅವಕಾಶವಿಲ್ಲ. ಆರ್ಎಸ್ಎಸ್ ಪಥ ಸಂಚಲನ, ಧಾರ್ಮಿಕ ಆಚರಣೆಗಳು, ಇತರೆ ಕಾರ್ಯಕ್ರಮ ಮಾಡಲು ಮುಂದಾದಾಗ ಪೊಲೀಸರು ಅವಕಾಶ ಕೊಟ್ಟಿರಲಿಲ್ಲ.
ಉಡುಪಿ ಜಿಲ್ಲಾ ರಜತ ಮಹೋತ್ಸವ ; ಸಾರ್ವಜನಿಕರಿಂದ ಲಾಂಛನ ವಿನ್ಯಾಸಕ್ಕಾಗಿ ಕರೆ – Vishwanews24
ಈದ್ಗಾ ಮೈದಾನ ಯಾರ ಆಸ್ತಿ ಎಂಬ ವಿಚಾರದ ಚರ್ಚೆ ಮುನ್ನೆಲೆಗೆ ಬಂದ ಬೆನ್ನಲ್ಲೇ ಕಳೆದ ತಿಂಗಳು ಬಿಬಿಎಂಪಿ ಈದ್ಗಾ ಮೈದಾನ ನಿಮ್ಮ ಆಸ್ತಿ ಎಂದು ಸಾಬೀತು ಪಡಿಸಲು ದಾಖಲೆ ನೀಡುವಂತೆ ವಕ್ಫ್ ಬೋರ್ಡ್ಗೆ ಸೂಚಿಸಿತ್ತು. ಆದರೆ ವಕ್ಫ್ ಬೋರ್ಡ್ ಕಡೆಯಿಂದ ಸರಿಯಾದ ದಾಖಲೆಗಳು ಸಲ್ಲಿಕೆಯಾಗಿರಲಿಲ್ಲ. ಹೀಗಾಗಿ ಈದ್ಗಾ ಮೈದಾನ ಕಂದಾಯ ಇಲಾಖೆ ಆಸ್ತಿ ಎಂದು ಜಂಟಿ ಆಯುಕ್ತ ಶ್ರೀನಿವಾಸ್ ಆದೇಶ ಹೊರಡಿಸಿದ್ದರು.
ಬಿಬಿಎಂಪಿಯಿ ಈ ಮಹತ್ವದ ನಿರ್ಧಾರ ಪ್ರಕಟಿಸಿದ ಬೆನ್ನಲ್ಲೇ ಹಿಂದೂ ಸಂಘಟನೆಗಳು ಮುಸ್ಲಿಮರಿಗೆ ಮಾತ್ರ ಪ್ರಾರ್ಥನೆಗೆ ಅವಕಾಶ ಯಾಕೆ ಈ ಜಾಗದಲ್ಲಿ ಅವಕಾಶ ಹಿಂದೂಗಳಿಗೆ ಕೊಡಿ, ನಾವು ಗಣೇಶೋತ್ಸವ ಆಚರಿಸುತ್ತೇವೆ ಎಂದು ವಾದವನ್ನು ಮುಂದಿಟ್ಟಿವೆ.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…