Featured

ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ :  ಶಿವಮೊಗ್ಗದಲ್ಲಿ 144 ಸೆಕ್ಷನ್​ ಜಾರಿ – Vishwanews24

ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ :  ಶಿವಮೊಗ್ಗದಲ್ಲಿ 144 ಸೆಕ್ಷನ್​ ಜಾರಿ

ಶಿವಮೊಗ್ಗ:ಈದ್ ಮಿಲಾದ್ ಮೆರವಣಿಗೆ ವೇಳೆ ಕಿಡಿಗೇಡಿಗಳು ನಿನ್ನೆ ಸಂಜೆ ಕಲ್ಲು ತೂರಿದ್ದು ಪರಿಸ್ಥಿತಿ ಉದ್ವಿಗ್ನವಾಗಿದೆ. ಶಾಂತಿನಗರದ ರಾಗಿಗುಡ್ಡ ಪ್ರದೇಶದಲ್ಲಿ ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಪೊಲೀಸರು ಮುಂಜಾಗ್ರತಾ ಕ್ರಮವಾಗಿ 144 ಸೆಕ್ಷನ್​ ಜಾರಿ ಮಾಡಿದ್ದಾರೆ.

ಈದ್​ ಮಿಲಾದ್​ ಅಂಗವಾಗಿ ಬೃಹತ್​ ಮಟ್ಟದಲ್ಲಿ ಮೆರವಣಿಗೆಯನ್ನು ಆಯೋಜನೆ ಮಾಡಲಾಗಿತ್ತು. ಮೆರವಣಿಗೆ ರಾಗಿಗುಡ್ಡ ತಲುಪಿದ ವೇಳೆ ಕಟೌಟ್​ ವಿಚಾರವಾಗಿ ಹಿಂದೂ ಹಾಗೂ ಮುಸ್ಲಿಂ ಸಮುದಾಯದವರ ನಡುವೆ ಮಾತಿನ ಚಕಮಕಿ ಉಂಟಾಗಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಘರ್ಷಣೆಯಾಗಿದೆ.

ಈ ವೇಳೆ ಕೆಲ ವ್ಯಕ್ತಿಗಳು ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಿದ್ದು, ಎರಡು ಕೋಮಿನ ಯುವಕರ ಗುಂಪಿನಿಂದ ಕಲ್ಲು ತೂರಾಟ ನಡೆದ ಪರಿಣಾಮ 7ಕ್ಕೂ ಹೆಚ್ಚು ಕಾರುಗಳು ಹಾಗೂ ಮನೆಯ ಕಿಟಕಿ ಗಾಜುಗಳು ಜಖಂಗೊಂಡಿವೆ. ಕೆಲವರಿಗೆ ಗಂಭೀರ ಗಾಯಗಳು ಆಗಿವೆ. ಘಟನೆಯಲ್ಲಿ 35ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆಯಲಾಗಿದ್ದು, ಮತ್ತಷ್ಟು ಜನರನ್ನು ಬಂಧಿಸಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗಲಾಟೆ ಬಳಿಕ ಶಾಂತಿನಗರದ ರಾಗಿಗುಡ್ಡ ಪ್ರದೇಶದಲ್ಲಿ ಸೆಕ್ಷನ್ 144 ಜಾರಿ ಮಾಡಿರುವ ಹಿನ್ನಲೆ ಪರಿಸ್ಥಿತಿ ಹತೋಟಿಯಲ್ಲಿದೆ. ಶಾಂತಿನಾಗರದಲ್ಲಿ ಪೊಲೀಸ್ ಹದ್ದಿನ ಕಣ್ಣಿಟ್ಟಿದೆ. ಶಿವಮೊಗ್ಗದ ಪ್ರಮುಖ ರಸ್ತೆಗಳಿಗೆ ಬ್ಯಾರಿಕೇಡ್ ಹಾಕಿ ರಸ್ತೆ ಬ್ಲಾಕ್‌ ಮಾಡಲಾಗಿದೆ. ಅಲ್ಲದೇ ಮುಂಜಾಗ್ರತಾ ಕ್ರಮವಾಗಿ ಅಂಗಡಿ ಮುಂಗಟ್ಟು ಮುಚ್ಚಿಸಿದ್ದಾರೆ. ಇನ್ನು ಮನೆಯಿಂದ ಹೊರಬಂದವರನ್ನು ವಾಪಸ್ ಕಳುಹಿಸಲಾಗುತ್ತಿದೆ.

ಮುಂಜಾಗ್ರತಾ ಕ್ರಮವಾಗಿ ಶಾಂತಿನಗರ ಮುಖ್ಯ ರಸ್ತೆಯ ಮೂಲಕ ರಾಗಿ ಗುಡ್ಡಕ್ಕೆ ಸಂಪರ್ಕಿಸುವ ರಸ್ತೆಯಲ್ಲಿ ತಪಾಸಣೆ ಮಾಡಲಾಗುತ್ತಿದೆ. ಶಾಂತಿ ನಗರಕ್ಕೆ ಪ್ರವೇಶಿಸುವ ಮತ್ತು ಹೊರ ಬರುವ ವಾಹನಗಳ ತಡೆದು ಪೊಲೀಸರು ತಪಾಸಣೆ ಮಾಡಿ ಕಳುಹಿಸುತ್ತಿದ್ದಾರೆ. ಅನುಮಾನಾಸ್ಪದವಾಗಿ ತಿರುಗಿದವರ ಬೈಕ್ ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದು, ಬಿಗಿ ಬಂದೋಬಸ್ತ್​ನಿಂದಾಗಿ ಇದೀಗ ಶಿವಮೊಗ್ಗ ಸಂಪೂರ್ಣ ಹತೋಟಿಗೆ ಬಂದಿದೆ.

Vishwa News 24

Recent Posts

ಆಟೋ ಎಲ್‌ಪಿಜಿ ದರ 10 ರೂ. ಇಳಿಕೆ – vishwanews24

ಆಟೋ ಚಾಲಕರಿಗೆ ಸಿಹಿ ಸುದ್ದಿ: ಎಲ್‌ಪಿಜಿ ದರ 10 ರೂ. ಇಳಿಕೆ ಬೆಂಗಳೂರು: ನಿರಂತರ ಎಲ್‌ಪಿಜಿ  ದರ ಏರಿಕೆಯಿಂದ ಕಂಗಾಲಾಗಿದ್ದ ಆಟೋ…

2 minutes ago

ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ – ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ – vishwanews24

ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ - ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ ಬೆಂಗಳೂರು:…

11 minutes ago

ಉಡುಪಿ:  ಪ್ರಮೋದ್ ಮಧ್ವರಾಜ್ ಅವರ ಮಾಜಿ ಆಪ್ತ ಸಹಾಯಕ ಗೋವಾದಲ್ಲಿ ಶವವಾಗಿ ಪತ್ತೆ! vishwanews24

ಉಡುಪಿ:  ಪ್ರಮೋದ್ ಮಧ್ವರಾಜ್ ಅವರ ಮಾಜಿ ಆಪ್ತ ಸಹಾಯಕ ಗೋವಾದಲ್ಲಿ ಶವವಾಗಿ ಪತ್ತೆ! ಉಡುಪಿ: ಮಾಜಿ ಸಚಿವ ಮತ್ತು ಬಿಜೆಪಿ…

17 minutes ago

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ –  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ – vishwanews24

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ -  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…

1 hour ago

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ – vishwanews24

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…

2 hours ago

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

22 hours ago