ಬೆಂಗಳೂರು: ಈವೆಂಟ್ ಮ್ಯಾನೇಜ್ಮೆಂಟ್ ಹೆಸರಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ದಂಪತಿಯನ್ನು ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಪ್ರಕಾಶ್, ಪಾರಿಜಾತ ದಂಪತಿ ಪಟ್ಟೆಗಾರಪಾಳ್ಯ ನಿವಾಸಿಗಳು. ಇವರು ರಾಕೇಶ್, ಪೂಜಾ ಎಂದು ಹೆಸರು ಬದಲಿಸಿಕೊಂಡು ದಂಧೆ ನಡೆಸ್ತಿದ್ರು. ಸದ್ಯ ಇಬ್ಬರನ್ನೂ ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.
ಆರೋಪಿಗಳು, ಉದ್ಯೋಗ ಕೊಡಿಸುವ ನೆಪದಲ್ಲಿ ಬಡ ಹೆಣ್ಣುಮಕ್ಕಳನ್ನೇ ಟಾರ್ಗೆಟ್ ಮಾಡುತ್ತಿದ್ದರು. ಉತ್ತರ ಕರ್ನಾಟಕ ಭಾಗದ ಬಡ ಹೆಣ್ಣುಮಕ್ಕಳನ್ನು ಬೆಂಗಳೂರಿಗೆ ಕರೆದುಕೊಂಡು ಬಂದು ಕೆಲಸ ಕೊಡಿಸದೇ ಹಣದ ಆಮಿಷ ತೋರಿಸ್ತಿದ್ರು. ಬಳಿಕ ವೇಶ್ಯಾವಾಟಿಕೆ ಅಡ್ಡೆಗೆ ದೂಡುತ್ತಿದ್ದರು. ಆರೋಪಿ ಪ್ರಕಾಶ್, ಪಾರಿಜಾತ ದಂಪತಿ ಕರ್ನಾಟಕದ ಹೆಣ್ಣುಮಕ್ಕಳನ್ನು ಕರೆದೊಯ್ದು ತಮಿಳುನಾಡು, ಪಾಂಡಿಚೇರಿ ರೆಸಾರ್ಟ್ಗಳಲ್ಲಿ ದಂಧೆ ನಡೆಸ್ತಿದ್ದರು. ಮದುವೆ ಈವೆಂಟ್ ಮ್ಯಾನೇಜ್ಮೆಂಟ್ ಹೆಸರಿನಲ್ಲಿ ಪ್ರತಿ ವಾರಕ್ಕೊಮ್ಮೆ ಬೆಂಗಳೂರಿನಿಂದ ತಮಿಳುನಾಡಿಗೆ ಕರೆದೊಯ್ದು ದಂಧೆ ನಡೆಸುತ್ತಿದ್ದರು.
ಹೊರ ರಾಜ್ಯದ ಶ್ರೀಮಂತರು, ಉದ್ಯಮಿಗಳು, ರೆಸಾರ್ಟ್ಗಳಿಗೆ ಭೇಟಿ ನೀಡ್ತಿದ್ದವರ ಬಳಿ ಈ ಅಮಾಯಕ ಹೆಣ್ಣುಮಕ್ಕಳನ್ನು ದೂಡುತ್ತಿದ್ದರು. ಅಷ್ಟೇ ಅಲ್ಲದೆ ಐಷಾರಾಮಿ ವೇಶ್ಯಾವಾಟಿಕೆ ಪಾರ್ಟಿಯಲ್ಲಿ ಈ ದಂಪತಿ ಮದ್ಯ ಒದಗಿಸುತ್ತಿದ್ದರು. ಪಾರ್ಟಿಗೆ ಬರುವ ಒಬ್ಬರಿಗೆ ತಲಾ 25,000 ದಿಂದ 50 ಸಾವಿರದವರೆಗೂ ನಿಗದಿ ಮಾಡಲಾಗುತ್ತಿತ್ತು. ಬೆಂಗಳೂರಿನಿಂದ ಯುವತಿಯರನ್ನು ಕರೆದೊಯ್ಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಸಿಸಿಬಿ ದಾಳಿ ನಡೆಸಿದ್ದು ಸದ್ಯ ನಾಲ್ವರು ಯುವತಿಯರ ರಕ್ಷಣೆ ಮಾಡಲಾಗಿದೆ. ಹಾಗೂ ಆರೋಪಿ ದಂಪತಿಯನ್ನು ಬಂಧಿಸಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…