Featured

ಈಶ್ವರಪ್ಪ ಅವರು ತಮ್ಮ ಮೇಲಿನ ಆರೋಪದಿಂದ ಮುಕ್ತರಾಗಲಿದ್ದಾರೆ ಎಂಬ ನಂಬಿಕೆ‌ ಇದೆ : ಸಿಎಂ ಬೊಮ್ಮಾಯಿ – VIshwanews24

ಈಶ್ವರಪ್ಪ ಅವರು ಸ್ವಯಂ ಪ್ರೇರಣೆಯಿಂದ ರಾಜೀನಾಮೆ ಕೊಡಲು‌ ನಿರ್ಧರಿಸಿದ್ದಾರೆಯೇ ಹೊರತು, ಯಾವುದೇ ಒತ್ತಡದಿಂದಲ್ಲ..

ಅಗತ್ಯವಿದ್ದರಷ್ಟೇ ಈಶ್ವರಪ್ಪ‌ ಬಂಧನ..

ಕಾಂಗ್ರೆಸ್ ನವರು ತನಿಖಾಧಿಕಾರಿ ಆಥವಾ ಜಡ್ಜ್ ಆಗುವ ಅವಶ್ಯಕತೆ ಇಲ್ಲ..

ಹುಬ್ಬಳ್ಳಿ: ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆಗೆ ಸಂಬಂಧಿಸಿದಂತೆ, ಸಚಿವ ಕೆ.ಎಸ್. ಈಶ್ವರಪ್ಪ ಅವರು ಸ್ವಯಂ ಪ್ರೇರಣೆಯಿಂದ ರಾಜೀನಾಮೆ ಕೊಡಲು‌ ನಿರ್ಧರಿಸಿದ್ದಾರೆಯೇ ಹೊರತು, ಯಾವುದೇ ಒತ್ತಡದಿಂದಲ್ಲ. ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಅಗತ್ಯವಿದ್ದರಷ್ಟೇ ಈಶ್ವರಪ್ಪ ಅವರನ್ನು ಬಂಧಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

ನಗರದ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಬೆಳಿಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ  ಈಶ್ವರಪ್ಪ ಅವರೊಂದಿಗೆ ಮಾತನಾಡಿದ್ದೇನೆ. ತಾವು ನಿರಪರಾಧಿಯಾಗಿದ್ದು, ಆದಷ್ಟು ಬೇಗನೆ ತನಿಖೆ ಮಾಡಿದರೆ ಆರೋಪದಿಂದ ಮುಕ್ತನಾಗುತ್ತೇನೆ ಎಂದಿದ್ದಾರೆ. ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಿದಾಗ ಸತ್ಯಾಂಶ ಹೊರಬರಲಿದೆ ಎಂದರು.

ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿದ್ದ ಜಾರ್ಜ್ ವಿರುದ್ಧವೂ ಪೊಲೀಸ್ ಅಧಿಕಾರಿ ಆರೋಪ ಆತ್ಮಹತ್ಯೆ ಮಾಡಿಕೊಂಡಿದ್ದರು. ಆಗ ರಾಜ್ಯದ ಪೊಲೀಸರಾಗಲಿ ಅಥವಾ ಸಿಬಿಐನವರಾಗಲಿ ಜಾರ್ಜ್ ಅವರನ್ನು ಬಂಧಿಸಿರಲಿಲ್ಲ. ತನಿಖೆ ಆಧರಿಸಿ, ಈಶ್ವರಪ್ಪ ಅವರನ್ನು ಬಂಧಿಸಬೇಕೇ ಬೇಡವೇ ಎಂಬುದನ್ನು ಪೊಲೀಸರು ನಿರ್ಧರಿಸಲಿದ್ದಾರೆ. ಈ ವಿಷಯದಲ್ಲಿ ಕಾಂಗ್ರೆಸ್ ನವರು ತನಿಖಾಧಿಕಾರಿ ಆಥವಾ ಜಡ್ಜ್ ಆಗುವ ಅವಶ್ಯಕತೆ ಇಲ್ಲ. ತನಿಖೆಗೆ ಮುಕ್ತ ಅವಕಾಶ ನೀಡಬೇಕು ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ವರ್ಕ್ ಆರ್ಡರ್ ಇಲ್ಲದೆ ಸಂತೋಷ ಅವರು ಕಾಮಗಾರಿ ಮಾಡಿದ್ದಾರೆ‌‌. ಇವೆಲ್ಲವನ್ನೂ ನೋಡಿದಾಗ, ತನಿಖೆಯಿಂದ ಅಸಲಿ‌ ಸತ್ಯ ಹೊರಬರಲಿದೆ. ಪ್ರಕರಣದಲ್ಲಿ ಯಾರಿಗೆ ಹಿನ್ನಡೆ ಅಥವಾ ಮುನ್ನಡೆ ಎಂಬುದು ಮುಂದೆ ಗೊತ್ತಾಗಲಿದೆ. ಈಶ್ವರಪ್ಪ ಅವರು ತಮ್ಮ ಮೇಲಿನ ಆರೋಪದಿಂದ ಮುಕ್ತರಾಗಲಿದ್ದಾರೆ ಎಂಬ ನಂಬಿಕೆ‌ ಇದೆ ಎಂದು ಹೇಳಿದರು.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

3 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

5 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

5 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

6 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

6 hours ago