ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ನೇರ ಹೊಣೆಗಾರರಾಗಿರುವ ಕೆ.ಎಸ್ ಈಶ್ವರಪ್ಪ ಅವರು ಕಡೆಗೂ ತಮ್ಮ ತಪ್ಪಿನ ಅರಿವಾಗಿ ಇಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ಪ್ರತಿಭಟನೆಗೆ ಸಂದ ಜಯ ಎಂಬುದಾಗಿ ಶಾಸಕ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.
ಈ ಕುರಿತು ಸರಣಿ ಟ್ವಿಟ್ ಮಾಡಿರುವ ಅವರು, ಕೆ.ಎಸ್ ಈಶ್ವರಪ್ಪ ಅವರಿಂದ ಕೇವಲ ರಾಜೀನಾಮೆ ಪಡೆದರೆ ಸಾಲದು. ಅವರ ಮೇಲೆ ಭ್ರಷ್ಟಾಚಾರ & ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಪ್ರಕರಣ ದಾಖಲಿಸಿ ಕೂಡಲೇ ಬಂಧಿಸಿ, ಜೈಲಿಗೆ ಕಳುಹಿಸಬೇಕು ಎಂದು ಒತ್ತಾಯಿಸಿದ್ದಾರೆ.
ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಪ್ರಕರಣದ ನ್ಯಾಯಾಂಗ ತನಿಖೆ ನಡೆಸಲು ಮಾನ್ಯ ಮುಖ್ಯಮಂತ್ರಿಗಳು ಆದೇಶಿಸಬೇಕು ಮತ್ತು ಮೃತ ಸಂತೋಷ್ ಪಾಟೀಲ್ ಕುಟುಂಬಕ್ಕೆ ರಾಜ್ಯ ಸರ್ಕಾರ ರೂ. 1 ಕೋಟಿ ಪರಿಹಾರ ನೀಡಬೇಕೆಂದು ಆಗ್ರಹಿಸಿದ್ದಾರೆ.
ರಾಜ್ಯ ಸರ್ಕಾರದ ವಿರುದ್ಧ ಗುತ್ತಿಗೆದಾರರಾದ ಮೃತ ಸಂತೋಷ್ ಪಾಟೀಲ್ ಮಾಡಿರುವ ಶೇಕಡ 40% ಕಮಿಷನ್ ಭ್ರಷ್ಟಾಚಾರ ಆರೋಪದ ಕುರಿತು ರಾಜ್ಯಪಾಲರು ಮತ್ತು ಕೇಂದ್ರ ಸರ್ಕಾರ ತನಿಖೆಗೆ ಆದೇಶಿಸಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…