ಅಯೋಧ್ಯೆ: ರಾಮರಾಜ್ಯದ ಪರಿಕಲ್ಪನೆಯಲ್ಲಿ ನಿಸ್ಪೃಹವಾಗಿ ದೇಶದ ಒಳಿತಿನ ಕಾಯಕಕ್ಕೆ ತಮ್ಮನ್ನು ಅರ್ಪಿಸಿಕೊಂಡ ಉಡುಪಿಯ ಮತ್ತಿಬ್ಬರು ಸಾಮಾಜಿಕ ಧುರೀಣರಿಗೆ ಮಂಗಳವಾರ ಅಯೋಧ್ಯೆಯಲ್ಲಿ ಮಂಡಲೋತ್ಸವ ಪುರಸ್ಕಾರದೊಂದಿಗೆ ರಾಮನ ಪ್ರಸಾದವಿತ್ತು ಅಭಿನಂದಿಸಲಾಗಿದೆ.
ನದಿ ಸಮುದ್ರಗಳಲ್ಲಿ ನೀರಿನಸೆಳೆತಕ್ಕೆ ಸಿಲುಕಿ ಪ್ರಾಣೋತ್ಕ್ರಮಣ ಸ್ಥಿತಿಯಲ್ಲಿದ್ದ ಸುಮಾರು ಒಂದು ಸಾವಿರದಕ್ಕೂ ಹೆಚ್ಚು ಜನರನ್ನು ಪ್ರಾಣಾಪಾಯದಿಂದ ಪಾರುಮಾಡಿದ ಜೀವರಕ್ಷಕ ಉಡುಪಿ ಮಲ್ಪೆಯ ಈಶ್ವರ್ ಹಾಗೂ ಶ್ರೀಕೃಷ್ಣಾಷ್ಟಮೀ, ಗಣೇಶಚತುರ್ಥೀ ಮೊದಲಾದ ಪರ್ವಸಂದರ್ಭಗಳಲ್ಲಿ ಆಕರ್ಷಕ ವೇಷ ತೊಟ್ಟು ಉತ್ಸವದ ವೈಭವಕ್ಕೆ ಮೆರುಗುತುಂಬಿ ಅದರಲ್ಲಿ ಸಂಗ್ರಹವಾದ ಸುಮಾರು ಒಂದೂವರೆ ಕೋಟಿಗೂ ಮಿಗಿಲಾದ ಮೊತ್ತವನ್ನು ಬಡಬಗ್ಗರ ಚಿಕಿತ್ಸೆಗೆ ವೆಚ್ಚಮಾಡಿ ದೀನಬಂಧು ರವಿ ಕಟಪಾಡಿಯವರಿಗೆ ಶ್ರೀರಾಮದೇವರಿಗೆ ನಡೆಸಲಾದ ಕಲಶಾಭಿಷೇಕದಲ್ಲಿ ತಲಾ ಒಂದು ಕೆ ಜಿ ತೂಕದ ಹಾಗೂ ತಲಾ 1ಲಕ್ಷ ರೂ ಮೌಲ್ಯದ ರಜತಕಲಶವನ್ನು ಶ್ರೀರಾಮನ ಅನುಗ್ರಹ ಪ್ರಸಾದರೂಪದಲ್ಲಿ ನೀಡಿ ಅಭಿನಂದಿಸಲಾಯಿತು .
ಶ್ರೀ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ತಮ್ಮ ನೇತೃತ್ವದಲ್ಲಿ ಅಯೋಧ್ಯೆ ರಾಮಮಂದಿರದಲ್ಲಿ ಸ್ವತಃ ಮುತುವರ್ಜಿ ವಹಿಸಿ ಈ ಇಬ್ಬರನ್ನು ವಿಮಾನದ ಮೂಲಕ ಶ್ರೀ ಮಠದ ವೆಚ್ಚದಲ್ಲೇ ಅಯೋಧ್ಯೆಗೆ ಕರೆಸಿ ಈ ವಿಶೇಷ ಪುರಸ್ಕಾರ ನೀಡಿದ್ದಾರೆ.
ಅಲ್ಲದೇ ಸಂಜೆ ನಡೆದ ಪಲ್ಲಕ್ಕಿ ಉತ್ಸವದಲ್ಲೂ ಇಬ್ಬರಿಗೂ ಶ್ರೀರಾಮದೇವರ ಪ್ರಸಾದ ನೀಡಿ ಇಬ್ಬರೂ ನಡೆಸಿದ ಲೋಕೋತ್ತರ ಕಾರ್ಯವನ್ನು ಮನಸಾ ಕೊಂಡಾಡಿದರು .
ಈ ಸಂದರ್ಭ ಮಾಜಿ ಶಾಸಕ ಕೆ ರಘುಪತಿ ಭಟ್ , ಶ್ರೀಗಳ ಆಪ್ತರಾದ ವಿಷ್ಣು ಆಚಾರ್ಯ, ಕೃಷ್ಣ ಭಟ್ ಶ್ರೀನಿವಾಸ ಪ್ರಸಾದ್ ಮೈಸೂರು, ವಾಸುದೇವ ಭಟ್ ಪೆರಂಪಳ್ಳಿ, ಮಾಜಿ ನಗರಸಭಾ ಸದಸ್ಯ ಮಹೇಶ್ ಠಾಕೂರ್, ಸುವರ್ಧನ್ ನಾಯಕ್ ಉಪಸ್ಥಿತರಿದ್ದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…