Featured

ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು – vishwanews24

ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು

ಉಡುಪಿ: ಮುಂಬರುವ ಗುಡ್‌ಫ್ರೈಡೇ ಹಾಗೂ ಈಸ್ಟರ್ ಪ್ರಯುಕ್ತ ಜನರ ವಿಶೇಷ ಒತ್ತಡವನ್ನು ನಿಭಾಯಿ ಸಲು ಕೊಂಕಣ ರೈಲ್ವೆಯು ನೈರುತ್ಯ ರೈಲ್ವೆಯ ಸಹಯೋಗದೊಂದಿಗೆ ಯಶವಂತಪುರ- ಮಡಗಾಂವ್ ಹಾಗೂ ಬೆಂಗಳೂರು ಕಂಟೋನ್ಮೆಂಟ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ಓಡಿಸಲು ನಿರ್ಧರಿಸಿದೆ.

ರೈಲು ನಂ.06271 ಯಶವಂತಪುರ- ಮಡಗಾಂವ್ ಜಂಕ್ಷನ್ ಎಕ್ಸ್‌ಪ್ರೆಸ್ ವಿಶೇಷ ರೈಲು ಎಪ್ರಿಲ್ 2ರಂದು ಗುರುವಾರ ಮಧ್ಯರಾತ್ರಿ 11:55ಕ್ಕೆ ಯಶವಂತಪುರ ನಿಲ್ದಾಣದಿಂದ ಪ್ರಯಾಣ ಆರಂಭಿಸಲಿದ್ದು, ಮರುದಿನ (ಶುಕ್ರವಾರ) ಸಂಜೆ 5:30ಕ್ಕೆ ಮಡಗಾಂವ್ ತಲುಪಲಿದೆ.

ಇದನ್ನೂ ಓದಿ : ಉಡುಪಿ: ಏ.1ರಂದು ಪಿಂಕ್​ ಸೂಪರ್​ ಮೂನ್​ ವೀಕ್ಷಣೆಗೆ ಅವಕಾಶ – vishwanews24 

ಈ ರೈಲಿಗೆ ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು, ಬಂಟ್ವಾಳ, ಸುರತ್ಕಲ್, ಮೂಲ್ಕಿ, ಉಡುಪಿ, ಬಾರಕೂರು, ಕುಂದಾಪುರ, ಮೂಕಾಂಬಿಕಾ ರೋಡ್ ಬೈಂದೂರು, ಭಟ್ಕಳ, ಮುರ್ಡೇಶ್ವರ, ಹೊನ್ನಾವರ, ಕುಮಟ, ಗೋಕರ್ಣ ರೋಡ್, ಅಂಕೋಲ, ಕಾರವಾರ ಹಾಗೂ ಕಾಣಕೋಣ ನಿಲ್ದಾಣಗಳಲ್ಲಿ ನಿಲುಗಡೆ ಇರುತ್ತದೆ.

ರೈಲು ನಂ. 06272 ಮಡಗಾಂವ್ ಜಂಕ್ಷನ್-ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್‌ಪ್ರೆಸ್ ರೈಲು ಎಪ್ರಿಲ್ 5ರ ರವಿವಾರ ಬೆಳಗ್ಗೆ 11:00ಗಂಟೆಗೆ ಮಡಗಾಂವ್ ಜಂಕ್ಷನ್‌ನಿಂದ ಹೊರಡಲಿದ್ದು, ಮರುದಿನ ಮುಂಜಾನೆ 5:20ಕ್ಕೆ ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣ ತಲುಪಲಿದೆ.

ಇದನ್ನೂ ಓದಿ : ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ – vishwanews24 

ಈ ರೈಲಿಗೆ ಕಾಣಕೋಣ, ಕಾರವಾರ, ಅಂಕೋಲ, ಗೋಕರ್ಣ ರೋಡ್, ಕುಮಟ, ಹೊನ್ನಾವರ, ಮುರ್ಡೇಶ್ವರ, ಭಟ್ಕಳ, ಮೂಕಾಂಬಿಕಾ ರೋಡ್ ಬೈಂದೂರು, ಕುಂದಾಪುರ, ಬಾರಕೂರು, ಉಡುಪಿ, ಮೂಲ್ಕಿ, ಸುರತ್ಕಲ್, ಬಂಟ್ವಾಳ, ಕಬಕಪುತ್ತೂರು, ಸುಬ್ರಹ್ಮಣ್ಯ ರೋಡ್, ಸಕಲೇಶಪುರ, ಹಾಸನ, ಚೆನ್ನರಾಯಪಟ್ಟಣ, ಕುಣಿಗಲ್ ಹಾಗೂ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಿಲ್ದಾಣಗಳಲ್ಲಿ ನಿಲುಗಡೆ ಇರುತ್ತದೆ.

ಈ ರೈಲು ಒಟ್ಟು 19 ಬೋಗಿಗಳನ್ನು ಹೊಂದಿರುತ್ತದೆ. ಇವುಗಳಲ್ಲಿ 2 ಟಯರ್ ಎಸಿ-2 ಕೋಚ್, 3ಟಯರ್‌ಎಸಿ- 2ಕೋಚ್, ಸ್ಲೀಪರ್- 9 ಕೋಚ್, ಸಾಮಾನ್ಯ-4 ಕೋಚ್ ಹಾಗೂ ಎಸ್‌ಎಲ್‌ಆರ್-2 ಕೋಚ್ ಇರುತ್ತದೆ.

ರೈಲು ನಂ.06272ಕ್ಕೆ ಟಿಕೆಟ್ ಬುಕ್ಕಿಂಗ್ ಎಲ್ಲಾ ಪಿಆರ್‌ಎಸ್‌ನಲ್ಲಿ ಎಪ್ರಿಲ್ ಒಂದರಿಂದ ಪ್ರಾರಂಭ ಗೊಳ್ಳಲಿದೆ. ಇಂಟರ್‌ನೆಟ್ ಹಾಗೂ ಐಆರ್‌ಸಿಟಿಸಿ ವೆಬ್‌ಸೈಟ್‌ಗಳಲ್ಲೂ ಸಹ ಟಿಕೆಟ್‌ಗಳನ್ನು ಕಾದಿರಿಸಬಹುದು ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

31 minutes ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

43 minutes ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

1 hour ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

2 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

2 hours ago

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ – vishwanews24

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ ಮಂಗಳೂರು: ಮಂಗಳೂರಿನಲ್ಲಿ ಹಜ್ ಭವನ…

3 hours ago