ಮಂಗಳೂರು : ಪ್ರಯಾಣಿಕರ ಬೇಡಿಕೆಯ ಮೇರೆಗೆ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಕಾರವಾರ ನಿಲ್ದಾಣಗಳ ನಡುವೆ ಎರಡು ಟ್ರಿಪ್ ವಿಶೇಷ ರೈಲುಗಳನ್ನು ಓಡಿಸಲಾಗುತ್ತಿದೆ. ಈ ವಿಶೇಷ ರೈಲುಗಳು ಈ ಕೆಳಗಿನ ದಿನಾಂಕಗಳಲ್ಲಿ ಕಾರ್ಯನಿರ್ವಹಿಸುತ್ತವೆ:
1. ಜುಲೈ 26 ಮತ್ತು 28 ರಂದು ರೈಲು ಸಂಖ್ಯೆ 06567 ಎಸ್ಎಂವಿಟಿ ಬೆಂಗಳೂರು-ಕಾರವಾರ ವಿಶೇಷ ಎಕ್ಸ್ ಪ್ರೆಸ್ ರೈಲು ಎಸ್ಎಂವಿಟಿ ಬೆಂಗಳೂರಿನಿಂದ ಮಧ್ಯ ರಾತ್ರಿ 00:30 ಗಂಟೆಗೆ ಹೊರಟು, ಅದೇ ದಿನ ಸಂಜೆ 4 ಗಂಟೆಗೆ ಕಾರವಾರ ನಿಲ್ದಾಣ ತಲುಪಲಿದೆ.
2. ಪುನಃ ಇದೇ ರೈಲು (06568) ಜುಲೈ 26 ಮತ್ತು 28 ರಂದು ಕಾರವಾರ ನಿಲ್ದಾಣದಿಂದ ರಾತ್ರಿ 11:30 ಗಂಟೆಗೆ ಹೊರಟು, ಮರುದಿನ ಸಂಜೆ 3:30 ಗಂಟೆಗೆ ಎಸ್ಎಂವಿಟಿ ಬೆಂಗಳೂರು ನಿಲ್ದಾಣಕ್ಕೆ ಆಗಮಿಸಲಿದೆ.
ಈ ವಿಶೇಷ ರೈಲು ಬಾಣಸವಾಡಿ, ಚಿಕ್ಕಬಾಣಾವರ, ಕುಣಿಗಲ್, ಚನ್ನಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು, ಬಂಟ್ವಾಳ, ಸುರತ್ಕಲ್, ಮೂಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಮೂಕಾಂಬಿಕಾ ರೋಡ್ ಬೈಂದೂರು, ಭಟ್ಕಳ, ಮುರ್ಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್ ಮತ್ತು ಅಂಕೋಲಾ ನಿಲ್ದಾಣಗಳಲ್ಲಿ ನಿಲುಗಡೆ ಇರಲಿವೆ.
ಈ ವಿಶೇಷ ರೈಲು ಎಸಿ-ಟು ಟೈಯರ್-2, ಎಸಿ-ತ್ರಿ ಟೈಯರ್-2, ಸ್ಲೀಪರ್ ಕ್ಲಾಸ್-6, ಸಾಮಾನ್ಯ ದ್ವಿತೀಯ ದರ್ಜೆ-6 ಮತ್ತು ಎಸ್ಎಲ್ಆರ್/ಡಿ -2 ಸೇರಿದಂತೆ 18 ಬೋಗಿಗಳು ಒಳಗೊಂಡಿರುತ್ತವೆ
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…