Featured

ಈ ಬಾರಿಯೂ ಮೋದಿ ಹೆಸರಿನಲ್ಲಿ ವೋಟ್ ಹಾಕಿ ಎಂದು ಬರುವ ನಾಲಾಯಕರಿಗೆ ಚಪ್ಪಲಿಯಲ್ಲಿ ಹೊಡಿರಿ : ಪ್ರಮೋದ್‌ ಮುತಾಲಿಕ್‌ – Vishwanews24

ನಾಚಿಕೆ, ಮಾನ ಮರ್ಯಾದೆ ಇಲ್ಲದೆ ಮೋದಿ ಹೆಸರಿನಲ್ಲಿ ಗೆದ್ದವರು..

ಮೋದಿ ಹೆಸರಿಲ್ಲದೆ ಹಿಂದುತ್ವದ ಕೆಲಸ ಮಾಡಿದ್ದೇನೆ ಎಂದು ಮತ ಕೇಳಿ .. : ಪ್ರಮೋದ್‌ ಮುತಾಲಿಕ್‌

ಕಾರವಾರ, : ಈ ಬಾರಿಯೂ ಮೋದಿಗೆ ವೋಟ್ ಹಾಕಿ ಎಂದು ಬರುವ ನಾಲಾಯಕರಿಗೆ ಚಪ್ಪಲಿಯಲ್ಲಿ ಹೊಡಿರಿ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಕರೆಕೊಟ್ಟಿದ್ದಾರೆ.

ಶಿರಸಿಯ ಸೈಹಾದ್ರಿ ರಂಗಮಂದಿರದಲ್ಲಿ ಅಖಿಲ ಭಾರತ ಹಿಂದೂ ಮಹಾಸಭಾದಿಂದ ಏರ್ಪಡಿಸಲಾಗಿದ್ದ ಬೃಹತ್ ಹಿಂದೂ ಸಮಾಜೋತ್ಸವದಲ್ಲಿ ದಿಕ್ಸೂಚಿ ಭಾಷಣ ಮಾಡಿರುವ ಅವರು, ಆರೇಳು ಬಾರಿ ಗೆದ್ದವರು ಇಲ್ಲಿದ್ದಾರೆ. ಕರ್ನಾಟಕವನ್ನು ಲೂಟಿ ಮಾಡಿದವರು ಇದ್ದಾರೆ. ಮೊದಲು ಇದ್ದಾಗ ಇವರ ಆಸ್ತಿ ಎಷ್ಟಿತ್ತು, ಈಗ ಎಷ್ಟಿದೆ ಎಂಬುದನ್ನು ಅಳೆಯಲೂ ಆಗದಷ್ಟು ಗಳಿಸಿ ಇಟ್ಟಿದ್ದಾರೆ ಎಂದು ರಾಜ್ಯ ರಾಜಕೀಯ ನಾಯಕರ ವಿರುದ್ಧ ಕಿಡಿಕಾರಿದರು.

ಮಾತು ಮುಂದುವರಿಸಿದ ಅವರು ಯಾರಿಗಾಗಿ ಗಳಿಸಿದ್ದೀರಿ? ಯಾರಿಗಾಗಿ ಬಂದಿದ್ದು ಎಂಬುದು ನೆನಪಿದೆಯಾ? ಜನಸಂಘ ಹುಟ್ಟಿದ್ದು ಯಾಕೆ ಎನ್ನುವುದು ನೆನಪಿದೆಯಾ? ತಿನ್ನುವುದಿಲ್ಲ, ತಿನ್ನಲೂ ಬಿಡುವುದಿಲ್ಲ ಎಂದು ಮೋದಿ ಹೇಳಿದ್ದು ನೆನಪಿದೆಯಾ? ಎಂದು ಕಿಡಿಕಾರಿದರು.

ಸಾವಿರಾರು ವರ್ಷಗಳಿಂದಲೂ ಗೋಮಾತೆಯನ್ನು ಉಳಿಸಿ ಎಂದು ಋಷಿಮುನಿಗಳು ಹೇಳುತ್ತಿದ್ದಾರೆ. ಗ್ರಾಮದಿಂದ ಕೇಂದ್ರದವರೆಗೂ ನಮ್ಮದೇ ಸರ್ಕಾರವಿದ್ದರೂ ಒಂದು ಆಕಳು ಉಳಿಸಲು ಆಗುತ್ತಿಲ್ಲ. ಕಾನೂನಿದೆ, ಪೊಲೀಸರಿದ್ದಾರೆ, ಅಧಿಕಾರವಿದೆ. ಆದರೆ ಇಚ್ಛಾಶಕ್ತಿ ಎನ್ನುವುದಿಲ್ಲ. ಆರೇಳು ಬಾರಿ ಸಂಸದರು, ಶಾಸಕರಾದವರು ಇದ್ದಾರೆ. ಆದರೆ ಅವರಿಗೆ ಆಕಳ ರೋಧನೆ ಕೇಳಿಸುತ್ತಿಲ್ಲ, ಅದರ ನೆತ್ತರ ಕಾಣುತ್ತಿಲ್ಲವೇ? ಅದರ ಶಾಪ ತಟ್ಟುತ್ತೆ ಎಂದಿದ್ದಾರೆ.

ಗೋವಾಕ್ಕೆ ಗೋಮಾಂಸ ರಫ್ತಾಗುತ್ತಿರುವುದು ಗೊತ್ತಾಗುತ್ತಿಲ್ಲವೇ? ಹಿಂದೂ ಸಂಘಟನೆಗಳೇ ಹಿಡಿದು ನಾವೇ ಕೇಸು ಹಾಕಿಕೊಂಡು ಜೈಲಿಗೆ ಹೋಗಬೇಕಾ? ಹಾಗಾದರೆ ನೀವ್ಯಾಕಿರೋದು? ಸಗಣಿ ತಿನ್ನೋದಕ್ಕಾ? ಗೋಮಾತೆಯನ್ನ ರಕ್ಷಣೆ ಮಾಡಲು, ಅದರ ನೆತ್ತರ ಹರಿಯುವುದನ್ನು ತಡೆಯಲು ಆಗದಿದ್ದರೆ ದಯವಿಟ್ಟು ಬೇರೆಯವರಿಗೆ ಅವಕಾಶ ನೀಡಿ ಎಂದು ಮನವಿ ಮಾಡಿದ್ದಾರೆ.

ನಾಚಿಕೆ, ಮಾನ ಮರ್ಯಾದೆ ಇಲ್ಲದೆ ಮೋದಿ ಹೆಸರಿನಲ್ಲಿ ಗೆದ್ದವರು, ಈ ಬಾರಿ ಮೋದಿ ಹೆಸರಿಲ್ಲದೆ, ಬ್ಯಾನರ್- ಪಾಂಪ್ಲೆಟ್‌ನಲ್ಲಿ ಮೋದಿ ಫೋಟೋ ಇಲ್ಲದೆ, ತಾಕತ್ತಿದ್ದರೆ, ಎದೆ ತಟ್ಟಿ ಅಭಿವೃದ್ಧಿ ಮಾಡಿದ್ದೇನೆ, ಗೋಮಾತೆ ಉಳಿಸಿದ್ದೇನೆ, ಹಿಂದುತ್ವದ ಕೆಲಸ ಮಾಡಿದ್ದೇನೆ ಎಂದು ಮತ ಕೇಳಿ ಎಂದು ಸವಾಲು ಹಾಕಿದ್ದಾರೆ.

ಮೋದಿ ಹೆಸರಿನಲ್ಲಿ ಮತ ಪಡೆದವರಿಗೆ ಕಾರ್ಯಕರ್ತರ ಕಷ್ಟ ಗೊತ್ತಾಗಲಿಲ್ಲ. ಕೇಸು ಹಾಕಿಕೊಂಡಿದ್ದು ಗೊತ್ತಾಗಲಿಲ್ಲ. ಪರೇಶ್ ಮೇಸ್ತಾ ಅನಾಥವಾಗಿ ಹೋದ. ರಕ್ತ ಬಲಿದಾನವಾದರೂ ಏನೂ ಆಗಲಿಲ್ಲ. ಅವನ ಹೆಣದ ಮೇಲೆ ರಾಜಕೀಯ ಮಾಡಿದರು. ಅವನ ಆತ್ಮ ನ್ಯಾಯ ಕೊಡಿಸಿ ಎಂದು ಹೇಳುತ್ತಿದೆ. ನನ್ನ ತಂದೆ- ತಾಯಿಯನ್ನ ವೇದಿಕೆ ಮೇಲೆ ಕೂರಿಸಿ ಹಿಂದೂಗಳ ಆಕ್ರೋಶದ ಲಾಭ ಪಡೆದ ನಾಲಾಯಕ, ನಿರ್ಲಜ್ಜರು ನೀವು, ನ್ಯಾಯ ಕೊಡಿ ಎಂದು ಅವನ ಆತ್ಮ ಹೇಳುತ್ತಿದೆ. ಛತ್ರಪತಿ ಶಿವಾಜಿಯಂತೆ ಹೋರಾಡಬೇಕಾದ ಅನಿವಾರ್ಯತೆ ಇಂದಿದೆ ಎಂದಿದ್ದಾರೆ.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

8 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

8 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

9 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

9 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

10 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

10 hours ago