ಈ ಬಾರಿಯ ಗಣರಾಜ್ಯೋತ್ಸವ ಪರೇಡ್‌ಗೆ ಕರ್ನಾಟಕದ ಸ್ತಬ್ಧಚಿತ್ರ ಆಯ್ಕೆ : CM ಬೊಮ್ಮಾಯಿ – Vishwanews24

Featured, ರಾಜ್ಯ ನ್ಯೂಸ್

ಈ ಬಾರಿಯ ಗಣರಾಜ್ಯೋತ್ಸವ ಪರೇಡ್‌ಗೆ ಕರ್ನಾಟಕದ ಸ್ತಬ್ಧಚಿತ್ರ ಆಯ್ಕೆ..

12 ರಾಜ್ಯಗಳ ಪೈಕಿ ದಕ್ಷಿಣ ಭಾರತದಿಂದ ಆಯ್ಕೆಯಾದ ಏಕೈಕ ಸ್ತಬ್ಧಚಿತ್ರ ..

ಬೆಂಗಳೂರು: ಈ ಬಾರಿಯ ಗಣರಾಜ್ಯೋತ್ಸವ ಪರೇಡ್‌ಗೆ ಕರ್ನಾಟಕದ ಸ್ತಬ್ಧಚಿತ್ರ ಆಯ್ಕೆಯಾಗಿದ್ದು, ಇದು 12 ರಾಜ್ಯಗಳ ಪೈಕಿ ದಕ್ಷಿಣ ಭಾರತದಿಂದ ಆಯ್ಕೆಯಾದ ಏಕೈಕ ಸ್ತಬ್ಧಚಿತ್ರವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿ ಮಾಹಿತಿ ನೀಡಿರುವ ಅವರು, “ಕರ್ನಾಟಕ ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು ಎಂಬ ವಿಷಯಾಧಾರಿತ ರಾಜ್ಯದ ಸ್ತಬ್ಧಚಿತ್ರ ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಗೆ ಆಯ್ಕೆಯಾಗಿರುವುದು ಸಂತಸದ ಸಂಗತಿ” ಎಂದರು.

ಇನ್ನು “ಸತತವಾಗಿ 13ನೇ ಬಾರಿ ರಾಜ್ಯದ ಸ್ತಬ್ಧಚಿತ್ರ ಆಯ್ಕೆಯಾಗಿದ್ದು, 12 ರಾಜ್ಯಗಳ ಪೈಕಿ ದಕ್ಷಿಣ ಭಾರತದಿಂದ ಆಯ್ಕೆಯಾದ ಏಕೈಕ ಸ್ತಬ್ಧಚಿತ್ರ ಕರ್ನಾಟಕದ್ದಾಗಿದೆ” ಎಂದು ತಿಳಿಸಿದ್ದಾರೆ.

Leave a Reply