ಈ ಬಾರಿಯ ಚುನಾವಣೆಯಲ್ಲಿಯೂ ಜನ ಆಶೀರ್ವಾದ ಮಾಡುತ್ತಾರೆ : ಸಿದ್ದರಾಮಯ್ಯ ವಿಶ್ವಾಸ – Vishwanews24
ಈ ಬಾರಿಯ ಚುನಾವಣೆಯಲ್ಲಿಯೂ ಜನ ಆಶೀರ್ವಾದ ಮಾಡುತ್ತಾರೆ : ಸಿದ್ದರಾಮಯ್ಯ ವಿಶ್ವಾಸ
ಮೈಸೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜನ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿದ್ದಾರೆ. ಹಾಗೆಯೇ ಈ ಬಾರಿಯ ಚುನಾವಣೆಯಲ್ಲಿಯೂ ಜನ ಆಶೀರ್ವಾದ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿ ಮತದಾನ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಹಾಗೂ ಮೊನ್ನೆ 2ನೇ ಹಂತದ ಚುನಾವಣೆ ಇರುವ ಕ್ಷೇತ್ರಗಳಲ್ಲಿ ಪ್ರಚಾರ ಮಾಡಿದೆ. ಈ ವೇಳೆ ಜನರಿಂದ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ. ಬೀದರ್ ಹಾಗೂ ಕಲಬುರಗಿ ಎರಡು ಕ್ಷೇತ್ರವನ್ನು ಗೆಲ್ಲುತ್ತೇವೆ ಎಂದರು.
14 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಎಷ್ಟು ಸ್ಥಾನ ಗೆಲ್ಲುತ್ತೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಗುಪ್ತ ಮತದಾನವಾಗಿದ್ದರಿಂದ ಎಷ್ಟು ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂಬುದನ್ನು ಹೇಳೋಕೆ ಆಗಲ್ಲ. ಆದರೆ ಹೆಚ್ಚು ಸ್ಥಾನದಲ್ಲಿ ಗೆಲ್ಲುತ್ತೇವೆ. ಚಾಮರಾಜನಗರ ಹಾಗೂ ಮೈಸೂರಿನಲ್ಲಿಯೂ ಗೆಲುವು ಸಾಧಿಸುತ್ತಾರೆ ಎಂದು ಸಿಎಂ ಹೇಳಿದರು.
ದೇಶವನ್ನು ಚೆನ್ನಾಗಿ ನಡೆಸಿಕೊಂಡು ಹೋಗುವ ನಾಯಕ ಅಧಿಕಾರಕ್ಕೆ ಬರಬೇಕು : ರಕ್ಷಿತ್ ಶೆಟ್ಟಿ – Vishwanews24
