ಬೆಂಗಳೂರು: ಈ ಬಾರಿಯ ಬಜೆಟ್ ದೇಶಕ್ಕೆ ಮಾದರಿ. ನಮ್ಮ ಬಜೆಟ್ ಅನ್ನು ಬೇರೆಬೇರೆ ರಾಜ್ಯಗಳು ಗಮನಿಸುತ್ತಾರೆ. ಇದು ಉತ್ತಮವಾದ ಬಜೆಟ್. ಕರ್ನಾಟಕದ ಜನತೆಗೆ ಅನುಕೂಲ ಆಗಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಬಜೆಟ್ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಟನಲ್ ಆಗೇ ಆಗುತ್ತೆ. ಹೊಸ ಮೆಟ್ರೋ ಏನೇ ಮಾಡಿದರೂ ಅದರ ಜೊತೆಗೆ ಎಲಿವೇಟೇಡ್ ಕಾರಿಡಾರ್ ಕೂಡ ನಾವು ಮಾಡುತ್ತೇವೆ. 50% ಕಾರ್ಪೋರೇಷನ್, 50% ಬಿಎಂಆರ್‌ಸಿಎಲ್ ಕೊಡುತ್ತದೆ. ನಾವು ಕಾರಿಡಾರ್ ಮಾಡುತ್ತೇವೆ ಎಂದರು.
ನಾವು ಹೇಳಿದಂತೆ 300 ಕಿಮೀ ರಸ್ತೆ ನಿರ್ಮಾಣ ಮಡುತ್ತೇವೆ. ಕಾಲುವೆ ಪಕ್ಕದಲ್ಲಿ 50 ಅಡಿ ಬಿಟ್ಟು ರಸ್ತೆ ನಿರ್ಮಾಣ ಮಾಡುತ್ತೇವೆ. ಅದರ ಬದಲಾಗಿ ಅವರಿಗೆ ಟಿಡಿಆರ್ ಕೊಟ್ಟು ಅಲ್ಲಿ ರೋಡ್ ಮಾಡುತ್ತೇವೆ. ಹೀಗಾಗಿ 3000 ಕೋಟಿ ವೆಚ್ಚದಲ್ಲಿ 300 ಕಿ.ಮೀ ರಸ್ತೆ ನಿರ್ಮಾಣ ಆಗಲಿದೆ ಎಂದು ತಿಳಿಸಿದರು.
ಬಿಜೆಪಿ ಹಲಾಲ್ ಬಜೆಟ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು ಏನು ಬೇಕಾದರೂ ಮಾತಾಡಲಿ. ಪಾಪ ಅವರು ಇನ್ನೇನು ಮಾಡುತ್ತಾರೆ? ಇನ್ನೇನು ಹೇಳೋಕೆ ಸಾಧ್ಯ? ಸತ್ಯನಾ ಮುಚ್ಚಿಡೋಕೆ ಆಗುತ್ತಾ? ಬಿಜೆಪಿಯವರು ಬಜೆಟ್‌ನ ಕಣ್ಣಲ್ಲಿ ಓದಿದ್ದಾರೆ, ಕಿವಿಯಲ್ಲಿ ಕೇಳಿಸಿಕೊಡಿದ್ದಾರೆ. ಬಾಯಲ್ಲಿ ಇನ್ನೇನು ಮಾತಾಡಬಹುದು. ಬಾಯಲ್ಲಿ ಸುಳ್ಳು ಹೇಳಬಹುದು ಅಲ್ವಾ, ಹಾಗಾಗಿ ಅದನ್ನ ಮಾಡುತ್ತಿದ್ದಾರೆ ಎಂದು ತಿರುಗೇಟು ಕೊಟ್ಟರು.
ನೀರಾವರಿಗೆ ಕಳೆದ ಬಾರಿಗಿಂತ ಈ ಬಾರಿ 2,000 ಕೋಟಿ ಅನುದಾನ ಹೆಚ್ಚು ಕೊಟ್ಟಿದ್ದೇವೆ. ಮಧ್ಯದಲ್ಲಿ ಬೇರೆಬೇರೆ ಯೋಜನೆಗಳನ್ನು ಘೋಷಣೆ ಮಾಡುತ್ತೇವೆ. ಬೋರ್ಡ್‌ನಲ್ಲಿ ಅನೇಕ ತೀರ್ಮಾನಗಳನ್ನ ಮಾಡಿದ್ದೇವೆ. ಅದನ್ನು ಸಭೆಯಲ್ಲಿ ಹೇಳುತ್ತೇನೆ ಎಂದರು.
ಬೆಂಗಳೂರು ವಿವಿಗೆ ಮನಮೋಹನ್ ಸಿಂಗ್ ಹೆಸರು ಇಟ್ಟಿರುವ ವಿಚಾರದ ಕುರಿತು ಮಾತನಾಡಿ, ಅವರು ಯಾವ್ಯಾವುದೋ ಹೆಸರು ಇಡುತ್ತಾರೆ. ಮನಮೋಹನ್ ಸಿಂಗ್ ಹೆಸರು ಇಡಬಾರದ? ಇಂಟರ್‌ನ್ಯಾಷನಲ್ ಏರ್‌ಪೋರ್ಟ್‌ಗೆ ಫ್ಲೈಓವರ್ ಮಾಡಿದ್ದು ಯಾರು? ಎಲೆಕ್ಟ್ರಾನಿಕ್ ಸಿಟಿಗೆ ಫ್ಲೈಓವರ್ ಮಾಡಿದ್ದು ಯಾರು?ನೆಲಮಂಗಲ ಫ್ಲೈಓವರ್ ಮಾಡಿದ್ದು ಯಾರು? ನರೇಗಾ ತಂದಿದ್ದು ಯಾರು? ಬಿಜೆಪಿಯವರು ಏನಾದರೂ ಮಾಡಿದ್ದಾರ ಎಂದು ಪ್ರಶ್ನಿಸಿದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…