Featured

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಂಗಳೂರಿನ ಜನ ಬದಲಾವಣೆಯನ್ನು ತರಲಿದ್ದಾರೆ : ಡಿ.ಕೆ.ಶಿವಕುಮಾರ್ – Vishwanews24

ರಾಜಕೀಯ ತಂತ್ರಗಾರಿಕೆಯನ್ನು ಸಾಧಿಸಲು ಮಂಗಳೂರಿನಲ್ಲಿ ಕಾರ್ಯಕರ್ತರ ಸಮಾವೇಶವನ್ನು ಆಯೋಜಿಸಿದ್ದೇವೆ

ಮಂಗಳೂರಿನಲ್ಲಿ ಬಿಜೆಪಿಗೆ  ಪರೋಕ್ಷ ಎಚ್ಚರಿಕೆ ನೀಡಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಮಂಗಳೂರು : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ  ಮಂಗಳೂರು ಹೊರವಲಯದ ಬಿ.ಸಿ.ರೋಡ್ ನಲ್ಲಿರುವ ಆಡ್ಯಾರ್ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜ್ ಮೈದಾನದಲ್ಲಿ ಬೃಹತ್ ಕಾರ್ಯಕರ್ತರ ಸಮಾವೇಶವನ್ನು ಶನಿವಾರ (ಫೆ 17) ಮಧ್ಯಾಹ್ನ ಎರಡು ಗಂಟೆಗೆ ಆಯೋಜಿಸಿದೆ.

ಈ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ ಸೇರಿದಂತೆ ಹಲವು ಪ್ರಮುಖ ನಾಯಕರು ಈ ಭಾಗಿಯಾಗಲಿದ್ದಾರೆ. ಬಿಜೆಪಿಯ ಭದ್ರಕೋಟೆಯೆಂದೇ ಗುರುತಿಸಲ್ಪಡುವ ಈ ಭಾಗದಲ್ಲಿ ಕಾರ್ಯಕರ್ತರ ಸಮಾವೇಶ ಆಯೋಜಿಸಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಾರಣವನ್ನು ವಿವರಿಸಿದ್ದಾರೆ.

” ರಾಜಕಾರಣದಲ್ಲಿ ಯಾವುದೂ ಶಾಸ್ವತವಲ್ಲ, ಯಾವುದೂ ಅಸಾಧ್ಯವೂ ಅಲ್ಲ. ಅಸಾಧ್ಯ ಎಂದು ಭಾವಿಸಲಾಗಿರುವ ರಾಜಕೀಯ ತಂತ್ರಗಾರಿಕೆಯನ್ನು ಸಾಧಿಸಲು ಮಂಗಳೂರಿನಲ್ಲಿ ಕಾರ್ಯಕರ್ತರ ಸಮಾವೇಶವನ್ನು ಆಯೋಜಿಸಿದ್ದೇವೆ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಬಿಜೆಪಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

” ರಾಜಕಾರಣ ಎನ್ನುವುದು ವಿಶ್ವಾಸದ ಕಲೆ, ನನಗೆ ಖಚಿತ ಭರವಸೆಯಿದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಇಲ್ಲಿನ ಜನ ಬದಲಾವಣೆಯನ್ನು ತರಲಿದ್ದಾರೆ. ಯಾಕೆಂದರೆ ಈ ಭಾಗದಲ್ಲಿರುವ ಪ್ರಮುಖ ಸಮಸ್ಯೆ ನಿರುದ್ಯೋಗ. ಯುವಕರು /ವಿದ್ಯಾರ್ಥಿಗಳು ಕೆಲಸವನ್ನು ಅರಸಿ ಮುಂಬೈ, ದುಬೈ, ಸೌದಿ, ಬೆಂಗಳೂರಿಗೆ ಹೋಗುತ್ತಿದ್ದಾರೆ. ಆಡಳಿತ ಮಂಡಳಿಯವರು, ಇಲ್ಲಿನ ಅಶಾಂತಿಯಿಂದಾಗಿ ವಿದ್ಯಾರ್ಥಿಗಳ ದಾಖಲಾತಿ ಕಮ್ಮಿಯಾಗುತ್ತಿದೆ ಎಂದು ಸಮಸ್ಯೆ ತೋಡಿಕೊಂಡಿದ್ದಾರೆ” ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

13 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

13 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

1 day ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago