Featured

ಈ ಬಾರಿ ಏನೇ ಪ್ರಯತ್ನ ಮಾಡಿದರೂ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ, ಸೋಲುವ ಭಯ ಉಂಟಾಗಿದೆ : ಸಿದ್ದರಾಮಯ್ಯ – Vishwanews24

ರಾಜ್ಯದಲ್ಲಿ ಭ್ರಷ್ಟಾಚಾರ, ದುರಾಡಳಿತದಿಂದಾಗಿ ಬಿಜೆಪಿಗೆ ಈ ಬಾರಿ ಚುನಾವಣೆಯಲ್ಲಿ ಸೋಲುವ ಭಯ ಉಂಟಾಗಿದೆ : ಸಿದ್ದರಾಮಯ್ಯ

ಕಲಬುರಗಿ: ರಾಜ್ಯದಲ್ಲಿ ಭ್ರಷ್ಟಾಚಾರ, ದುರಾಡಳಿತದಿಂದಾಗಿ ಬಿಜೆಪಿಗೆ ಈ ಬಾರಿ ಚುನಾವಣೆಯಲ್ಲಿ ಸೋಲುವ ಭಯ ಉಂಟಾಗಿದೆ. ಅದ್ದರಿಂದಲೇ ರಾಜ್ಯದ ನರೇಂದ್ರ ಮೋದಿ, ಅಮಿತ್ ಶಾ, ಜೆ.ಪಿ. ನಡ್ಡಾ ಬರುತ್ತಿದ್ದಾರೆ‌ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದರು.

ಈ ಬಾರಿ ಏನೇ ಪ್ರಯತ್ನ ಮಾಡಿದರೂ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ. ಸೋಲಿನ ಭಯ ಕಾಡುತ್ತಿರುವುದು ಕಾಂಗ್ರೆಸ್ಸಿಗಲ್ಲ, ಬಿಜೆಪಿಗೆ ಎಂದರು.

ಐದು ವರ್ಷಗಳಲ್ಲಿ ಬಡವರಿಗೆ ಒಂದಾದರೂ ಮನೆ ಕೊಟ್ಟಿದ್ದಾರೆ ಎಂದು ಪ್ರಶ್ನಿಸಿದರು.

224 ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚರಿಸಬೇಕಿರುವುದರಿಂದ ನಾನು ಉತ್ತರ ಕರ್ನಾಟಕದಲ್ಲಿ, ಪಕ್ಷದ ಅಧ್ಯಕ್ಷ ‌ಡಿ.ಕೆ. ಶಿವಕುಮಾರ್ ಅವರು ದಕ್ಷಿಣ ಕರ್ನಾಟಕದಲ್ಲಿ ಸಂಚರಿಸಿ ಪಕ್ಷವನ್ನು ಸಂಘಟಿಸಲಿದ್ದೇವೆ.‌ ಸಾಮೂಹಿಕವಾಗಿ ಎಲ್ಲ ಮುಖಂಡರನ್ನು ಒಳಗೊಂಡು ಸಂಚಾರ ನಡೆಸಲಿದ್ದೇವೆ ಎಂದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.‌ ಶಿವಕುಮಾರ್ ಮಾತನಾಡಿ, ಬಿಜೆಪಿ ರಾಜ್ಯದಲ್ಲಿ ಈ ಬಾರಿ ಸೋಲುವುದು ಖಚಿತ. ಜನ ಚುನಾವಣೆ ಬರುವುದನ್ನೇ ಕಾಯುತ್ತಿದ್ದಾರೆ. ಈ ಬಾರಿ ತಕ್ಕ ಪಾಠ ಕಲಿಸಲಿದ್ದಾರೆ.

ಬಿಜೆಪಿಯವರು ಪಿಎಸ್ಐ ಹಗರಣದಲ್ಲಿ ಅಕ್ರಮವಾಗಿ ಎಷ್ಟು ಲೂಟಿ ಮಾಡಿದ್ದಾರೆ. ಅಂಕಗಳನ್ನು ಹೇಗೆ ತಿದ್ದಿದ್ದಾರೆ ಎಂಬುದನ್ನು ‘ಪ್ರಜಾವಾಣಿ’ ಎಳೆ ಎಳೆಯಾಗಿ ಬಿಚ್ಚಿಟ್ಟಿದೆ ಎಂದರು.

ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಉಪಾಧ್ಯಕ್ಷ ಡಾ.ಶರಣಪ್ರಕಾಶ ಪಾಟೀಲ, ವಕ್ತಾರ ಪ್ರಿಯಾಂಕ್ ಖರ್ಗೆ ಇದ್ದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

14 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

14 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago