ಶಿವಮೊಗ್ಗ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಿನ್ನೆ ರಾಜ್ಯದ 14 ಕ್ಷೇತ್ರಗಳಲ್ಲಿ ಎರಡನೇ ಹಂತದ ಮತದಾನ ನಡೆದಿದೆ. ಈ ಒಂದು ಹಂತದಲ್ಲಿ ಶೇಕಡ 66 ರಷ್ಟು ಮತದಾನ ನಡೆದಿದೆ. ಈ ಮಧ್ಯ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಗೀತಾ ಶಿವರಾಜ್ ಕುಮಾರ್ ಈ ಬಾರಿ ಗ್ಯಾರಂಟಿ ಯೋಜನೆಗಳೇ ನನ್ನ ಕೈ ಹಿಡಿಯಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಶಿವಮೊಗ್ಗ ಜಿಲ್ಲೆಯ ಆನವಟ್ಟಿ ಎಂಬಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಜಾರಿ ಮಾಡಿರುವ ಐದು ಗ್ಯಾರಂಟಿಗಳು, ಪ್ರತಿ ಕುಟುಂಬಕ್ಕೂ ತಲುಪಿದೆ. ಮತ್ತೆ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಪ್ರಕಟಿಸಿರುವ ಐದು ಗ್ಯಾರಂಟಿಗಳನ್ನು ಈಡೇರಿಸುತ್ತದೆ ಎಂಬ ನಂಬಿಕೆ, ವಿಶ್ವಾಸ ಕ್ಷೇತ್ರದ ಮತದಾರರಲ್ಲಿ ಇರುವುದರಿಂದ ನನಗೆ ಗೆಲುವು ಸಿಗುತ್ತದೆ ಎಂದು ತಿಳಿಸಿದರು.
ನಮ್ಮ ತಂದೆ ಬಂಗಾರಪ್ಪನವರು ಬಡವರಿಗಾಗಿ ಅನೇಕ ಯೋಜನೆಗಳನ್ನು ತಂದಿದ್ದರು, ಕಳೆದ ಚುನಾವಣೆಯಲ್ಲಿ ಬಿಜೆಪಿ ಭಾವನಾತ್ಮಕ ಹೇಳಿಕೆಗಳಿಂದ ಗೆದ್ದಿರಬಹುದು.ಆದರೆ ಈಗ ಜನರಿಗೆ ಅರ್ಥವಾಗಿದೆ. ಕಾಂಗ್ರೆಸ್ ಎಲ್ಲಾ ಧರ್ಮ ಹಾಗೂ ಜಾತಿಗಳನ್ನು ಸಮಾನವಾಗಿ ಕಾಣುತ್ತಾ ಸರ್ವಧರ್ಮಗಳ ಪರವಾಗಿದೆ.ಹಾಗಾಗಿ ಕ್ಷೇತ್ರದ ಜನ ನನ್ನ ಕೈ ಹಿಡಿಯುತ್ತಾರೆ ಎಂದು ಭರವಸೆ ವ್ಯಕ್ತಪಡಿಸಿದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…