ಚಿಕ್ಕಮಗಳೂರು: ಬಡಜನರ ಬದುಕು ಗಟ್ಟಿಗೊಳಿಸಲು ಗ್ಯಾರಂಟಿ ಯೋಜನೆಗಳನ್ನು ನೀಡಿದರೆ ಬಿಜೆಪಿ ನಾಯಕರು ಅದರ ಬಗ್ಗೆ ಚರ್ಚೆ ಮಾಡುತ್ತಾರೆ. ಜೊತೆಗೆ ರಾಜ್ಯ ದಿವಾಳಿಯಾಗುತ್ತದೆ ಎನ್ನುತ್ತಾರೆ ಆದರೆ ದೊಡ್ಡ ದೊಡ್ಡ ಉದ್ಯಮಿಗಳಿಗೆ ಲಕ್ಷಾಂತರ ಕೋಟಿ ಸಾಲ ಮನ್ನಾ ಮಾಡಿದಾಗ ಇದೆ ನಾಯಕರು ಚರ್ಚೆ ಮಾಡಲ್ಲ. ಹೀಗೆ ಲಕ್ಷ ಲಕ್ಷ ಕೋಟಿ ಸಾಲ ಮನ್ನಾ ಮಾಡಿದರೆ ದೇಶ ದಿವಾಳಿಯಾಗುವುದಿಲ್ಲವೇ ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಪ್ರಶ್ನಿಸಿದರು.
ನಗರದ ಒಕ್ಕಲಿಗರ ಭವನದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು ಈ ಬಾರಿ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಿದರೆ ತಮ್ಮ ಕೈಯನ್ನು ತಾವು ಬಲಪಡಿಸಿಕೊಂಡತ್ತಾಗುತ್ತದೆ. ನಾನು ಜನರ ಧ್ವನಿಯಾಗಿ ಕೆಲಸ ಮಾಡುವ ಜೊತೆಗೆ ಕ್ಷೇತ್ರದ ಅಭಿವೃದ್ಧಿಗೆ ಏನೇನು ಬೇಕು ಆ ಕೆಲಸ ಮಾಡುತ್ತೇನೆ. ಜನರ ಮಧ್ಯೆ ಇದ್ದು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ನನ್ನದು. ಇದರೊಂದಿಗೆ ಅಭಿವೃದ್ಧಿಗೂ ಒತ್ತು ನೀಡುತ್ತೇನೆ ಎಂದರು.
ಜನರಿಂದ ಅಧಿಕಾರಕ್ಕೆ ಬಂದ ಮೇಲೆ ಕೆಲಸ ಮಾಡದೆ ಬೆಂಗಳೂರಿನಲ್ಲಿ ಕೂರಬಾರದು. ಹೀಗೆ ಮಾಡಿದರೆ ಅದು ಜನರಿಗೆ ಮೋಸ ಮಾಡಿದಂತೆ. ನಾನು 2 ವರ್ಷ ಸಂಸದನಾಗಿದ್ದಾಗ ಉಡುಪಿ-ಚಿಕ್ಕಮಗಳೂರು ಜಿಲ್ಲೆಗಳ ಪ್ರತಿ ಗ್ರಾಪಂ ಮಟ್ಟದಲ್ಲೂ ಕೆಲಸ ಮಾಡಿದ್ದೇನೆ. ಈ ಬಾರಿ ಜನ ನನ್ನನ್ನು ಆಶೀರ್ವದಿಸುವ ವಿಶ್ವಾಸವಿದೆ ಎಂದರು. ಕ್ಷೇತ್ರದ ಅಭಿವೃದ್ಧಿ ಹಾಗೂ ಜನರ ಸಮಸ್ಯೆಗಳಿಗೆ ಯಾರು ಸ್ಪಂದಿಸುತ್ತಾರೆ ಎಂಬುದನ್ನು ಜನ ನಿರ್ಧಾರ ಮಾಡಬೇಕು. ಬಿಜೆಪಿಗರಿಗೆ ನನ್ನ ಮೇಲೆ ಆರೋಪ ಮಾಡಲು ಯಾವುದೇ ವಿಷಯಗಳಿಲ್ಲ ಹೀಗಾಗಿ ನನ್ನ ಹೇಳಿಕೆ ತಿರುಚಿ ಆರೋಪ ಮಾಡುತ್ತಿದ್ದಾರೆ ಇದು ಫಲ ನೀಡಲ್ಲ ಎಂದರು
ಸಭೆಯ ಅಧ್ಯಕ್ಷತೆಯನ್ನು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ. ಅಂಶುಮಂತ್ ವಹಿಸಿದ್ದರು. ಶಾಸಕರಾದ ರಾಜೇಗೌಡ, ಜಿ ಎಚ್ ಶ್ರೀನಿವಾಸ್, ತಮ್ಮಯ್ಯ, ನಯನಾ ಮೋಟಮ್ಮ, ಮಾಜಿ ಸಚಿವರಾದ ಮೋಟಮ್ಮ, ಬಿಬಿ ನಿಂಗಯ್ಯ, ಡಾ. ಬಿ ಎಲ್ ಶಂಕರ್, ವಿಪ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ, ಎಐಸಿಸಿ ಕಾರ್ಯದರ್ಶಿ ಬಿಎಂ ಸಂದೀಪ್, ಮಾಜಿ ಶಾಸಕ ಎಂ ಪಿ ಕುಮಾರಸ್ವಾಮಿ, ಬಿಪಿ ಹರೀಶ್, ಡಾ, ಡಿ ಎಲ್ ವಿಜಯಕುಮಾರ್ ಮಂಜೇಗೌಡ, ಶಿವಾನಂದ ಸ್ವಾಮಿ ಉಪಸ್ಥಿತರಿದ್ದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…