Featured

ಈ ಬಾರಿ ತುಳು ಪರೀಕ್ಷೆ ಬರೆಯಲಿರುವ 918 ವಿದ್ಯಾರ್ಥಿಗಳು-vishwanews24

ಈ ಬಾರಿ ತುಳು ಪರೀಕ್ಷೆ ಬರೆಯಲಿರುವ 918 ವಿದ್ಯಾರ್ಥಿಗಳು-
ಮಹಾನಗರ: ತುಳು ಭಾಷೆಯ ಬೆಳವಣಿಗೆಯ ದೃಷ್ಟಿಯಿಂದ ರಾಜ್ಯ ಸರಕಾರವು 2014-15ನೇ ಸಾಲಿನಿಂದ ಎಸೆಸೆಲ್ಸಿಯಲ್ಲಿ ತುಳು ಪಠ್ಯ ವನ್ನು ತೃತೀಯ ಭಾಷೆಯಾಗಿ ಆಯ್ಕೆ ಮಾಡಿಕೊಂಡು ಪರೀಕ್ಷೆ ಬರೆಯುವುದಕ್ಕೆ ಅವಕಾಶ ನೀಡಿದ್ದು, ದ.ಕ,ಹಾಗೂ ಉಡುಪಿ ಜಿಲ್ಲೆಯಲ್ಲಿ ಈ ಬಾರಿ 918 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಜು. 22ರಂದು ಎಸೆಸೆಲ್ಸಿ ಭಾಷಾ ವಿಷಯಗಳ ಪರೀಕ್ಷೆ ನಡೆಯಲಿದೆ. ಕಳೆದ ವರ್ಷ ಒಟ್ಟು 956 ವಿದ್ಯಾರ್ಥಿಗಳು ತುಳು ಪಠ್ಯದಲ್ಲಿ ಎಸೆಸೆಲ್ಸಿ ಪರೀಕ್ಷೆ ಬರೆದಿದ್ದರು. ಎರಡೂ ಜಿಲ್ಲೆಗಳ ತಾಲೂಕುಗಳ ಪೈಕಿ ಪುತ್ತೂರಿ ನಲ್ಲಿ ಈ ಬಾರಿ ಅತೀ ಹೆಚ್ಚು ವಿದ್ಯಾರ್ಥಿ ಗಳಿದ್ದು, ಬೆಳ್ತಂಗಡಿ 2ನೇ ಸ್ಥಾನದಲ್ಲಿದೆ. ವೇಣೂರು ಸರಕಾರಿ ಪ್ರೌಢಶಾಲೆಯಲ್ಲಿ ಈ ಬಾರಿ ಗರಿಷ್ಠ ಅಂದರೆ 70 (ಕಳೆದ ವರ್ಷ 197)ವಿದ್ಯಾರ್ಥಿಗಳು ಎಸೆಸೆಲ್ಸಿಯಲ್ಲಿ ತುಳು ಪರೀಕ್ಷೆ ಬರೆಯಲಿದ್ದಾರೆ. ತುಳು ಕಲಿಯು ತ್ತಿರುವ 2,270 ವಿದ್ಯಾರ್ಥಿಗಳುಈ ಬಾರಿ ದ.ಕ., ಉಡುಪಿ ಜಿಲ್ಲೆಯ 43 ಶಾಲೆಯಲ್ಲಿ ಒಟ್ಟು 2,270 ವಿದ್ಯಾರ್ಥಿಗಳು 2020-21ರ ಸಾಲಿನಲ್ಲಿ ತುಳುವನ್ನು ತೃತೀಯ ಭಾಷೆಯಾಗಿ ವ್ಯಾಸಂಗ ಮಾಡುತ್ತಿದ್ದಾರೆ. 6ನೇ ತರಗತಿಯಲ್ಲಿ 94, 7ನೇ ತರಗತಿಯಲ್ಲಿ 105, 8ನೇ ತರಗತಿಯಲ್ಲಿ 406, 9ನೇ ತರಗತಿಯಲ್ಲಿ 747 ಹಾಗೂ 10ನೇ ತರಗತಿಯಲ್ಲಿ 918 ವಿದ್ಯಾರ್ಥಿಗಳು ತುಳುವನ್ನು ತೃತೀಯ ಭಾಷೆಯಾಗಿ ಅಭ್ಯಸಿಸುತ್ತಿದ್ದಾರೆ. ಈ ಪೈಕಿ ಪುತ್ತೂರು ತಾಲೂಕಿನಲ್ಲಿ 1,114, ಸುಳ್ಯ ತಾಲೂಕಿನಲ್ಲಿ 144, ಬೆಳ್ತಂಗಡಿಯಲ್ಲಿ 573, ಬಂಟ್ವಾಳದಲ್ಲಿ 108, ಮಂಗಳೂರು ತಾಲೂಕಿನಲ್ಲಿ 136, ಉಡುಪಿ ತಾಲೂಕಿನಲ್ಲಿ 195 ವಿದ್ಯಾರ್ಥಿಗಳಿದ್ದಾರೆ. 2019-20ನೇ ಸಾಲಿನಲ್ಲಿ ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಯ ಒಟ್ಟು 42 ಶಾಲೆಗಳಲ್ಲಿ ಒಟ್ಟು 2,600 ವಿದ್ಯಾರ್ಥಿಗಳು 6ನೇ ತರಗತಿಯಿಂದ ಎಸೆಸೆಲ್ಸಿವರೆಗೆ ತುಳು ಭಾಷೆಯನ್ನು ತೃತೀಯ ಭಾಷೆಯನ್ನಾಗಿ ಆಯ್ಕೆ ಮಾಡಿಕೊಂಡಿದ್ದರು. ಹಿಂದಿನ ವರ್ಷಗಳಲ್ಲಿ ತುಳು ಭಾಷಾ ವಿಷಯದಲ್ಲಿ ವಿದ್ಯಾರ್ಥಿಗಳು ಉತ್ತಮ ಅಂಕ ಪಡೆದಿದ್ದು , ಅದೇ ಮಾದರಿಯಲ್ಲಿ ಈ ವರ್ಷವೂ ವಿದ್ಯಾ ರ್ಥಿಗಳಿಗೆ ಬೋಧನೆ ಮಾಡಲಾಗಿದೆ. ಈ ಬಾರಿ ಎಸೆಸೆಲ್ಸಿಯಲ್ಲಿ ಒಟ್ಟು 918 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. -ದಯಾನಂದ ಕತ್ತಲಸಾರ್, ಅಧ್ಯಕ್ಷರು, ತುಳು ಸಾಹಿತ್ಯ ಅಕಾಡೆಮಿ ಪ್ರಥಮ ಬ್ಯಾ ಚ್ನಲ್ಲಿ 18 ವಿದ್ಯಾರ್ಥಿಗಳು :2014-15ರಲ್ಲಿ ಮಂಗಳೂರಿನ ಪೊಂಪೈ ಶಾಲೆಯಲ್ಲಿ ಎಸೆಸೆಲ್ಸಿ ಯಲ್ಲಿ ತುಳು ಪ್ರಥಮ ಬ್ಯಾಚ್ ಆರಂಭಗೊಂಡಿದ್ದು, ಒಟ್ಟು 18 ವಿದ್ಯಾರ್ಥಿಗಳು ಮೊದಲಿಗೆ ತುಳು ಪಠ್ಯದಲ್ಲಿ ಪರೀಕ್ಷೆ ಬರೆದಿ ದಿದ್ದರು.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

14 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

14 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

15 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

15 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

2 days ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

2 days ago