ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2026ರ ಸಂಭ್ರಮ ಮನೆ ಮಾಡಿದೆ. ಜಂಬೂ ಸವಾರಿ ಕಣ್ತುಂಬಿಕೊಳ್ಳಲು ಜನರು ಕಾಯುತ್ತಿದ್ದಾರೆ. ಈ ಭಾರಿ ಅಂಬಾರಿ ಹೊರುವ ಆನೆ ಯಾವುದಾಗಬಹುದು ಎನ್ನುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿತ್ತು. ಇದೀಗ ಈ ಕುತೂಹಲಕ್ಕೆ ತೆರೆಬಿದ್ದಿದೆ.
54 ವರ್ಷದ ಪ್ರಶಾಂತ ಈ ಭಾರಿ ಅಂಬಾರಿ ಹೊತ್ತು ಸಾಗಲಿದ್ದಾನೆ. ಈ ಕುರಿತಾಗಿ ಮೈಸೂರು ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಅಧಿಕೃತ ಘೋಷಣೆ ಮಾಡಿದ್ದಾರೆ. ಆ ಮೂಲಕ ದುಬಾರೆ ವೀರ ಪ್ರಶಾಂತ ಆನೆ ಮೊದಲ ಬಾರಿಗೆ 750 ಕೆ.ಜೆ ಚಿನ್ನದ ಅಂಬಾರಿ ಹೊತ್ತು ಸಹಸ್ರಾರು ಜನಗಳ ಮಧ್ಯೆ ಹೆಜ್ಜೆ ಹಾಕಲಿದ್ದಾನೆ.
ಪ್ರಶಾಂತ ಕೊಡಗು ಜಿಲ್ಲೆಯ ಕುಶಾಲನಗರ ಬಳಿಯ ದುಬಾರೆ ಶಿಬಿರದ ಆನೆ. 1993ರಲ್ಲಿ ಕಾರೆಕೊಪ್ಪ ಅರಣ್ಯ ಪ್ರದೇಶದಲ್ಲಿ ಸೆರೆಹಿಡಿಯಲಾಗಿತ್ತು. ಪ್ರಶಾಂತ ಆನೆಯ ಎತ್ತರ 2.61 ಮೀಟರ್, ಉದ್ದ 3.46 ಮೀಟರ್. ಅತ್ಯಂತ ಬಲಿಷ್ಠವಾಗಿರುವ ಪ್ರಶಾಂತ ಅಂದಾಜು 5100 ತೂಕ ಹೊಂದಿದ್ದಾನೆ.
ಜೆ.ಎ.ಚಿನ್ನಪ್ಪ ಪ್ರಶಾಂತ ಆನೆಯ ಮಾವುತ, ಚಂದ್ರ ಎನ್ನುವವರು ಕಾವಾಡಿಗರಾಗಿದ್ದಾರೆ. ದುಬಾರೆಯ ಈ ಪ್ರಶಾಂತ ಆನೆ ಕಳೆದ 18 ವರ್ಷಗಳಿಂದಲೂ ದಸರಾ ಮಹೋತ್ಸವದಲ್ಲಿ ಭಾಗಿಯಾಗುತ್ತಿದೆ. ಅದರಂತೆ ಈ ಭಾರಿ ಕೂಡ ಭಾಗಿಯಾಗಿತ್ತು. ಆದರೆ ಇದೇ ಮೊದಲ ಬಾರಿಗೆ ಚಿನ್ನದ ಅಂಬಾರಿ ಹೊರುವ ಅದೃಷ್ಟ ಪ್ರಶಾಂತನಿಗೆ ಒಲಿದು ಬಂದಿದೆ.
ಇತ್ತೀಚೆಗೆ ಚಿನ್ನದ ಅಂಬಾರಿ ಹೊರುವ ಕಾಯಕದಿಂದ ಗಜಪಡೆಯ ಕ್ಯಾಪ್ಟನ್ ಅಭಿಮನ್ಯುಗೆ ನಿವೃತ್ತಿ ನೀಡಲಾಗಿತ್ತು. ಆ ಬಳಿಕ ದಸರಾ ಜಂಬೂಸವಾರಿಯ ಕ್ಯಾಪ್ಟನ್ ಯಾರಾಗಲಿದ್ದಾರೆ ಎಂಬ ಕುತೂಹಲ ಹೆಚ್ಚಿತ್ತು.
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…
ಉಡುಪಿ: ಅ. 17 ರಂದು ನೇರ ಸಂದರ್ಶನ ಉಡುಪಿ: ನಗರದ ಗ್ರೋಸ್ಪೆöÊರ್ ಗ್ರೂಪ್, ಎರಡನೇ ಮಹಡಿ, ಕೈಗಾರಿಕಾ ಸಹಕಾರ ಸಂಘ,…