ಉಡುಪಿ: ಈ ಬಾರಿ ನಡೆಯುವ ಲೋಕಸಭಾ ಚುನಾವಣೆ ರಾಷ್ಟ್ರದ ಭವಿಷ್ಯವನ್ನು ನಿರ್ಧರಿಸುವ ಚುನಾವಣೆಯಾಗಿದ್ದು, ದೇಶವನ್ನು ಸಮೃದ್ಧ ಭಾರತ, ವಿಕಸಿತ ಭಾರತ, ವಿಶ್ವಗುರು ಭಾರತ ಮಾಡುವತ್ತ ದಾಪುಗಾಲಿಡುವ ಅತ್ಯಂತ ಮಹತ್ವದ ಚುನಾವಣೆಯಾಗಿದೆ. ದೇಶಭಕ್ತ ಪ್ರಜ್ಞಾವಂತ ದೇಶವಾಸಿಗಳು ನರೇಂದ್ರ ಮೋದಿಯವರನ್ನು ಮಗದೊಮ್ಮೆ ಪ್ರಧಾನಿಯನ್ನಾಗಿಸಿ ದೇಶದ ಏಕತೆ, ಭದ್ರತೆ ಮತ್ತು ಸಮಗ್ರತೆಗೆ ಒತ್ತು ನೀಡುವಲ್ಲಿ ಕೈಜೋಡಿಸಲಿದ್ದಾರೆ ಎಂಬ ವಿಶ್ವಾಸವಿದೆ.
ಈ ನಿಟ್ಟಿನಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರ ಪ್ರಚಂಡ ಗೆಲುವು ನಿಶ್ಚಿತ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಹೇಳಿದರು.
ಅವರು ಪಂದುಬೆಟ್ಟು ಪರಿಸರದಲ್ಲಿ ನಡೆದ ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದರು.
ದೇಶ ಮೊದಲು ಎನ್ನುವ ಉದಾತ್ತ ಚಿಂತನೆಯೊಂದಿಗೆ ಜನಪರ ಯೋಜನೆಗಳ ಜೊತೆಗೆ ಅದ್ಬುತ ಅಭಿವೃದ್ಧಿ ಕೆಲಸ ಕಾರ್ಯಗಳ ಮೂಲಕ ಭಾರತವನ್ನು ವಿಶ್ವದ ಮುಂದುವರಿದ ರಾಷ್ಟ್ರಗಳ ಮುಂಚೂಣಿಯಲ್ಲಿ ನಿಲ್ಲಿಸಲು ಶ್ರಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು ಬೆಂಬಲಿಸಲು ಸಾಧನೆಗಳ ಮೂಲಕವೇ ಜನಮಾನಸದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರನ್ನು ಗರಿಷ್ಠ ಮತಗಳಿಂದ ಅಂತರದಿಂದ ಗೆಲ್ಲಿಸಲು ಎಲ್ಲರೂ ಬದ್ಧತೆಯಿಂದ ಶ್ರಮಿಸಬೇಕು ಎಂದು ಅವರು ಕರೆ ನೀಡಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…