Featured

ಈ ಬಾರಿ ವಿಧಾನಸಭೆ ಚುನಾವಣೆ ಸಾರ್ವಕರ್ ಹಾಗೂ ಟಿಪ್ಪು ಸಿದ್ಧಾಂತಗಳ ನಡುವೆ : ನಳಿನ್‌ ಕುಮಾರ್‌ ಕಟೀಲ್ – Vishwanews24

ಈ ಬಾರಿ ವಿಧಾನಸಭೆ ಚುನಾವಣೆ ಸಾರ್ವಕರ್ ಹಾಗೂ ಟಿಪ್ಪು ಸಿದ್ಧಾಂತಗಳ ನಡುವೆ : ನಳಿನ್‌ ಕುಮಾರ್‌ ಕಟೀಲ್

ಭಟ್ಕಳ (ಉತ್ತರ ಕನ್ನಡ): ‘ಈ ಬಾರಿ ವಿಧಾನಸಭೆ ಚುನಾವಣೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಅಲ್ಲ. ಬದಲಿಗೆ, ಸಾರ್ವಕರ್ ಹಾಗೂ ಟಿಪ್ಪು ಸಿದ್ಧಾಂತಗಳ ನಡುವೆ ನಡೆಯಲಿದೆ. ದೇಶಭಕ್ತ ಸಾವರ್ಕರ್ ಬೇಕಾ ಅಥವಾ ಮತಾಂಧ ಟಿಪ್ಪು ಬೇಕಾ ಎಂದು ಜನ ತೀರ್ಮಾನಿಸುತ್ತಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್ ಹೇಳಿದರು.

ಮಂಗಳವಾರ ತಾಲ್ಲೂಕಿನ ಶಿರಾಲಿಯಲ್ಲಿ ನಡೆದ ವಿಧಾನಸಭಾ ಕ್ಷೇತ್ರದ ಪೇಜ್ ಪ್ರಮುಖರ ಸಮಾವೇಶದಲ್ಲಿ ಅವರು, ‘ಸಿದ್ದರಾಮಯ್ಯ ಅವರು ಟಿಪ್ಪು ಜಯಂತಿ ಹೆಸರಿನಲ್ಲಿ ಹಿಂದೂ, ಮುಸ್ಲಿಮರನ್ನು ಒಡೆದರು’ ಎಂದು ಹೇಳಿದರು.

‘ಇನ್ನೊಂದಡೆ, ಎಚ್.ಡಿ.ಕುಮಾರಸ್ವಾಮಿ ಈಗ ಅವಹೇಳನಕಾರಿ ಹೇಳಿಕೆ ನೀಡಿ ಬ್ರಾಹ್ಮಣ ಸಮಾಜ ಒಡೆಯುವ ಕೆಲಸ ಮಾಡಿದ್ದಾರೆ. ಈ ಪಾರ್ಟಿಯವರು ಅಂದು ರಾಮಕೃಷ್ಣ ಹೆಗಡೆಯವರಿಗೆ ಕಲ್ಲು ಹೊಡೆದಿದ್ದರು’ ಎಂದು ಟೀಕಿಸಿದರು.

‘ಎಚ್‌ಡಿಕೆ ಅವರಿಗೆ ಮೂರು ಜಿಲ್ಲೆಯಲ್ಲಷ್ಟೆ ಪ್ರಭಾವವಿದೆ. ಮತ್ತೆ ಸಿ.ಎಂ ಆಗುವ ಕನಸು ಹೊತ್ತು ತಿರುಗಾಡುತ್ತಿದ್ದಾರೆ. ಅಧಿಕಾರಕ್ಕೆ ಏರಲಾಗದು ಎಂಬುದು ಅರಿವಾಗುತ್ತಿದ್ದಂತೇ ಜಾತಿ ಹೇಳಿಕೆ ನೀಡುತ್ತಿದ್ದಾರೆ’ ಎಂದು ಆರೋಪಿಸಿದರು.

 

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

15 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

15 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

16 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

16 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

16 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

17 hours ago