ಈ ಬಾರಿ ಸರಳವಾಗಿ ಮೈಸೂರು ದಸರಾ ಆಚರಣೆ : ಸಿ.ಟಿ.ರವಿ -Vishwanews24
ಈ ಬಾರಿ ಸರಳವಾಗಿ ಮೈಸೂರು ದಸರಾ ಆಚರಣೆ : ಸಿ.ಟಿ.ರವಿ -Vishwanews24
ಬೆಂಗಳೂರು: ಈ ಬಾರಿ ಸರಳವಾಗಿ ಮೈಸೂರು ದಸರಾ ಆಚರಣೆ ಮಾಡಲಿದ್ದೇವೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಸರಳ ಮತ್ತು ಸಂಪ್ರದಾಯ ಬದ್ಧ ದಸರಾ ಆಚರಣೆಗೆ ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದರು. ಈ ಕುರಿತು ಸಿಎಂ ಯಡಿಯೂರಪ್ಪ ಜತೆ ಚರ್ಚಿಸಿ ಮೈಸೂರಿಗೆ ತೆರಳಿ ಜಿಲ್ಲಾಡಳಿತದ ಜತೆ ಸಭೆ ನಡೆಸಿ ತೀರ್ಮಾನಿಸಲಿದ್ದೇವೆ ಎಂದು ಹೇಳಿದರು.
ಅಣ್ಣಾಮಲೈ ಬಿಜೆಪಿ ಸೇರ್ಪಡೆ ಬಗ್ಗೆ ಪ್ರತಿಕ್ರಿಯಿಸಿ, ಅವರು ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಯಾಗಿ ಕೆಲಸ ಮಾಡಿ ದ್ದರು. ಅತ್ಯಂತ ಹತ್ತಿರದಿಂದ ಅವರನ್ನು ನೋಡಿದ್ದೇನೆ. ಉತ್ತಮ ತೀರ್ಮಾನ ಕೈಗೊಂಡಿದ್ದಾರೆ ಎಂದು ಹೇಳಿದರು.
