Featured

ಈ ಮೂರು ಕ್ಷೇತ್ರಗಳ ಗೆಲುವು 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ : ಡಿಸಿಎಂ ಡಿಕೆ ಶಿವಕುಮಾರ್ – vishwanews24

ಈ ಮೂರು ಕ್ಷೇತ್ರಗಳ ಗೆಲುವು 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ..

ಗ್ಯಾರಂಟಿ ಹಾಗೂ ಅಭಿವೃದ್ಧಿ ಕೆಲಸಗಳನ್ನು ಮೆಚ್ಚಿ ಜನರು ಮತ ನೀಡಿದ್ದಾರೆ..

ದಾನ, ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಮಾತ್ರ ಚೆನ್ನಾಗಿರುತ್ತೆ..

ಬೆಂಗಳೂರು :  ರಾಜ್ಯದ ಮೂರು ಕ್ಷೇತ್ರಗಳ ವಿಧಾನಸಭೆಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ದಾಖಲಿಸಿದ್ದು, ಈ ಮೂಲಕ ಬಿಜೆಪಿ ಹಾಗೂ ಜೆಡಿಎಸ್ ಗೆ ಕೌಂಟರ್ ನೀಡಿದೆ. ಈ ಒಂದು ಗೆಲುವಿನ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಅವರು ಈ ಮೂರು ಕ್ಷೇತ್ರಗಳ ಗೆಲುವು 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಿದೆ ಎಂದು ತಿಳಿಸಿದರು.

ಬೆಂಗಳೂರಿನಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಮಾತನಾಡಿ, ಟೀಕೆ ಸಾಯುತ್ತದೆ ಕೆಲಸ ಉಳಿಯುತ್ತದೆ ಅಂತ ನಾನು ಈ ಮೊದಲೇ ಹೇಳಿದ್ದೆ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನ ಮನ್ನಣೆ ಕೊಟ್ಟಿದ್ದಾರೆ. ಜನರ ಭಾವನೆಯ ಮೇಲೆ ರಾಜಕಾರಣ ಮಾಡುವುದಿಲ್ಲ. ಬದುಕಿನ ಮೇಲೆ ರಾಜಕಾರಣ ಮಾಡಬೇಕು ಹಾಗಾಗಿ ಜನ ಆಶೀರ್ವದಿಸಿದ್ದಾರೆ.ಗ್ಯಾರಂಟಿ ಯೋಜನೆಗಳ ಕುರಿತಂತೆ ವಿಪಕ್ಷಗಳು ಅಪಪ್ರಚಾರ ಮಾಡಿದರು. ಗ್ಯಾರಂಟಿ ಯೋಜನೆ ಹಾಗೂ ಅಭಿವೃದ್ಧಿಗೆ ಹಣ ಇಲ್ಲ ಅಂತ ಆರೋಪಿಸಿದ್ದರು ಆದರೆ ಈಗ ಒಂದೇ ಕ್ಷೇತ್ರಕ್ಕೆ ಕೋಟಿ ಕೋಟಿ ಹಣ ಹೋಗುತ್ತಿದೆ ಎಂದರು.

ಈ ಒಂದು ಉಪಚುನಾವಣೆಯ ಗೆಲುವು 2028 ರ ಚುನಾವಣೆಗೆ ದಿಕ್ಸೂಚಿಯಾಗಿದೆ. 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗಳಿಗೆ ಜನರು ಮತ ನೀಡಿದ್ದಾರೆ. ಗ್ಯಾರಂಟಿ ಹಾಗೂ ಅಭಿವೃದ್ಧಿ ಕೆಲಸಗಳನ್ನು ಮೆಚ್ಚಿ ಜನರು ಮತ ನೀಡಿದ್ದಾರೆ. ಸಮೀಕ್ಷೆಗಳು ಸುಳ್ಳಾಗುತ್ತವೆ ಅಂತ ನಾನು ನಿನ್ನೆ ಸಂಜೆಯೇ ಹೇಳಿದ್ದೆ. ನಾವು ಮಾಡುವ ಸಮೀಕ್ಷೆಯೇ ಬೇರೆ ಅಂತ ಹೇಳಿದ್ದೆ. ಬಿಜೆಪಿ ಜೆಡಿಎಸ್ ಮೈತ್ರಿಯಾದರೂ ನಮಗೆ ಗೆಲುವು ಸಿಕ್ಕಿದೆ. ದಾನ, ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಮಾತ್ರ ಚೆನ್ನಾಗಿರುತ್ತೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಜನ ಮನ್ನಣೆ ಕೊಟ್ಟಿದ್ದಾರೆ ಎಂದರು.

2028ರ ವಿಧಾನಸಭೆ ಚುನಾವಣೆಗೆ ಜನ ಮುನ್ನುಡಿ ಬರೆಯುತ್ತಿದ್ದಾರೆ ಉಪಚುನಾವಣೆಯಲ್ಲಿ ಮೂರೂ ಕ್ಷೇತ್ರದ ಜನರು ಈಗ ಮುನ್ನುಡಿ ಬರೆದಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಸಚಿವರ ಮೇಲೆ ಆರೋಪ ಮಾಡಿದ್ದರು. ಸುಳ್ಳೇ ಕಾಂಗ್ರೆಸ್ ಪಕ್ಷದ ಮನೆ ದೇವರು ಎಂದು ಪ್ರಚಾರ ಮಾಡಿದ್ದರು ಅದಕ್ಕೆ ಮತದಾರರೇ ಈಗ ಉತ್ತರ ನೀಡಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ನಾಯಕರು ಅನೇಕ ಬಾರಿ ಟೀಕೆ ಮಾಡಿದ್ದಾರೆ ಎಂದರು.

Vishwa News 24

Recent Posts

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

1 hour ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

2 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

2 hours ago

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

5 hours ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

5 hours ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

18 hours ago