Featured

ಈ ವರ್ಷದ ಕನ್ನಡದ ಹಬ್ಬ ಪುನೀತ್‌‌ ರಾಜಕುಮಾರ್‌‌ಗೆ ಅರ್ಪಣೆ : ಹೆಚ್‌‌ಡಿಕೆ – Vishwanews24

ಈ ವರ್ಷದ ಕನ್ನಡದ ಹಬ್ಬ ಪುನೀತ್‌‌ ರಾಜಕುಮಾರ್‌‌ಗೆ ಅರ್ಪಣೆ : ಹೆಚ್‌‌ಡಿಕೆ -Vishwanews24

ಬೆಂಗಳೂರು: ಭೂಮಂಡಲ ಇರುವಷ್ಟು ದಿನ ಕನ್ನಡವಿರುತ್ತದೆ. ಕನ್ನಡ ಇರುವಷ್ಟು ದಿನ ಅಪ್ಪು ಇರುತ್ತಾರೆ. ಈ ವರ್ಷ ಕನ್ನಡದ ಹಬ್ಬವನ್ನು ಪುನೀತ್‌ ರಾಜಕುಮಾರ್‌ ಅವರಿಗೆ ಅರ್ಪಿಸುತ್ತಾ ಎಲ್ಲರಿಗೂ ರಾಜ್ಯೋತ್ಸವದ ಶುಭಾಶಯಗಳು ಎಂದು ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಕನ್ನಡ ರಾಜ್ಯೋತ್ಸವದ ಅಂಗವಾಗಿ ಟ್ವೀಟ್ ಮಾಡಿರುವ ಅವರು, 1500 ವರ್ಷಗಳಿಗೂ ಹೆಚ್ಚು ಘನ ಇತಿಹಾಸವುಳ್ಳ ಕನ್ನಡ, ಶಾಸ್ತ್ರೀಯ ಸ್ಥಾನ ಅಲಂಕರಿಸಿದ ಅಭಿಜಾತ ಕನ್ನಡ, ಅಷ್ಟ ಜ್ಞಾನಪೀಠಗಳ ಮೇರುಗನ್ನಡ, ನಮ್ಮ ಬದುಕು-ಬಾಳ್ವೆಯ ತಾಯ್ಗನ್ನಡ. ಕನ್ನಡವೆಂದರೆ ಬರೀ ಭಾಷೆಯಲ್ಲ, ನಮ್ಮ ಪಾಲಿನ ದೇವಭಾಷೆ. ನಮ್ಮ ಮನಸು-ಕನಸುಗಳನ್ನು ಅರಳಿಸಿ ಭವಿಷ್ಯದ ರೆಕ್ಕೆಕೊಟ್ಟು ಹಾರಲು ಶಕ್ತಿ ತುಂಬುವ ಜೀವಭಾಷೆ” ಎಂದರು.

“ಕನ್ನಡಿಗರ ಮನೆ-ಮನದಲ್ಲೂ ಕನ್ನಡ ಬೆಳಗುತ್ತಿದೆ, ನಿಜ. ಆದರೆ, ನಮ್ಮ ಕಣ್ಮಣಿಯಾಗಿದ್ದ ಅಕ್ಕರೆಯ ಅಪ್ಪು, ಅಣ್ಣಾವ್ರ ಮುದ್ದಿನ ಕುಡಿ ಪುನೀತ್‌ ರಾಜಕುಮಾರ್‌ ಅವರು ಕನ್ನಡ ಹಬ್ಬಕ್ಕೆ ಮುನ್ನ ನಮನ್ನಗಲಿದ್ದಾರೆ. ನಮ್ಮೊಳಗೆ ಕನ್ನಡ ದೀಪವನ್ನು ಬೆಳಗುತ್ತಲೇ ಕಳೆದುಹೋದ ಯುವರತ್ನನ ಆದರ್ಶಗಳಿಗೆ ಅಗ್ರಪೀಠ ಹಾಕಿ ನಮಿಸೋಣ. ಆ ಮೂಲಕ ಪುನೀತರಾಗೋಣ” ಎಂದಿದ್ದಾರೆ.

ಇನ್ನು “ಭೂಮಂಡಲ ಇರುವಷ್ಟು ದಿನ ಕನ್ನಡವಿರುತ್ತದೆ. ಕನ್ನಡ ಇರುವಷ್ಟು ದಿನ ಅಪ್ಪು ಇರುತ್ತಾರೆ. ಈ ವರ್ಷ ಕನ್ನಡದ ಹಬ್ಬವನ್ನು ಪುನೀತ್‌ ರಾಜಕುಮಾರ್‌ ಅವರಿಗೆ ಅರ್ಪಿಸುತ್ತಾ, ಮತ್ತೊಮ್ಮೆ ಎಲ್ಲರಿಗೂ ರಾಜ್ಯೋತ್ಸವದ ಶುಭಾಶಯಗಳನ್ನು ಕೋರುತ್ತೇನೆ” ಎಂದು ಹೇಳಿದ್ದಾರೆ.

Vishwa News 24

Recent Posts

ಗವಿಸಿದ್ದೇಶ್ವರ ಶ್ರೀಗಳಿಂದ ಈ ಬಾರಿಯ ಮೈಸೂರು ದಸರಾ ಉದ್ಘಾಟನೆ : ಸಿಎಂ ಡಿ.ಕೆ.ಶಿವಕುಮಾರ್ – vishwanews24

ಕೊಪ್ಪಳ ಗವಿಮಠದ ಗವಿಸಿದ್ದೇಶ್ವರ ಶ್ರೀಗಳಿಂದ ಈ ಬಾರಿಯ ಮೈಸೂರು ದಸರಾ ಉದ್ಘಾಟನೆ : ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು : "ಈ…

21 minutes ago

ಕೇಂದ್ರ ಸರಕಾರ ರೈತರ ಸಾಲ ಮನ್ನಾ ಮಾಡಿದರೆ, ರಾಜ್ಯದ ಪಾಲು ನೀಡಲು ಸಿದ್ಧ : ಸಿಎಂ  – vishwanews24

ಕೇಂದ್ರ ಸರಕಾರ ರೈತರ ಸಾಲ ಮನ್ನಾ ಮಾಡಿದರೆ, ರಾಜ್ಯದ ಪಾಲು ನೀಡಲು ಸಿದ್ಧ : ಸಿಎಂ  ಬೆಂಗಳೂರು: "ಬರಗಾಲದ ಪರಿಸ್ಥಿತಿಯಲ್ಲಿ…

30 minutes ago

ಉಡುಪಿ: ಪೆಟ್ರೋಲ್ ಪಂಪ್ ಬಳಿ ನಿಂತಿದ್ದ ಬಸ್ಸಿನಲ್ಲಿ ಬೆಂಕಿ ಅವಘಡ ; ತಪ್ಪಿದ ಭಾರೀ ಅನಾಹುತ – vishwanews24

ಉಡುಪಿ: ಪೆಟ್ರೋಲ್ ಪಂಪ್ ಬಳಿ ನಿಂತಿದ್ದ ಬಸ್ಸಿನಲ್ಲಿ ಬೆಂಕಿ ಅವಘಡ ; ತಪ್ಪಿದ ಭಾರೀ ಅನಾಹುತ ಉಡುಪಿ: ಉಡುಪಿ ಸಮೀಪದ…

44 minutes ago

ಸೌಜನ್ಯ ಪ್ರಕರಣದ ಮರುತನಿಖೆಗೆ ಐಜಿಪಿ ಶಶಿಕುಮಾರ್ ನೇತೃತ್ವದಲ್ಲಿ SIT ರಚನೆ – vishwanews24

ಸೌಜನ್ಯ ಪ್ರಕರಣದ ಮರುತನಿಖೆಗೆ ಐಜಿಪಿ ಶಶಿಕುಮಾರ್ ನೇತೃತ್ವದಲ್ಲಿ SIT ರಚನೆ ಬೆಂಗಳೂರು: ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಬಹುಚರ್ಚಿತ ಧರ್ಮಸ್ಥಳದ…

51 minutes ago

ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ: ಕೇಂದ್ರ ಸರ್ಕಾರ ಆದೇಶ – vishwanews24

ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ: ಕೇಂದ್ರ ಸರ್ಕಾರ ಆದೇಶ ಬೆಂಗಳೂರು: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ…

18 hours ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಸೆ.28 ರಂದು ಪ್ರದೋಷ್ ಮಾಫಿ ಸಾಕ್ಷಿ ದಾಖಲಿಸಲು ಕೋರ್ಟ್‌ ಆದೇಶ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಸೆ.28 ರಂದು ಪ್ರದೋಷ್ ಮಾಫಿ ಸಾಕ್ಷಿ ದಾಖಲಿಸಲು ಕೋರ್ಟ್‌ ಆದೇಶ ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ…

19 hours ago