ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಯಾವಾಗ ಇಳೀತಿರಿ ಅಂತ ನಾವು ಕೇಳಿಲ್ಲ. ಇನ್ನೂ ಎರಡು ವರ್ಷ ನಾನೇ ಸಿಎಂ ಎಂದು ಹೇಳಿ ಅವರೇ ಸೆಲ್ಫ್ ಸರ್ಟಿಫಿಕೇಟ್ ಪಡೆದುಕೊಂಡಿದ್ದಾರೆ. ಬಿಜೆಪಿ ಶಾಸಕರು ಸಹ ಮಾತನಾಡುತ್ತಿದ್ದಾರೆ. ಇದನ್ನು ನೋಡಿದರೆ ಬಿಜೆಪಿಯಲ್ಲಿ ಏನೋ ನಡೆಯುತ್ತಿದೆ ಎನ್ನುವುದು ಗೊತ್ತಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದರು.
ಹೊಸ ವರ್ಷದ ಹಿನ್ನಲೆಯಲ್ಲಿ ರಾಜ್ಯದ ಜನತೆಗೆ ಶುಭಾಶಯ ತಿಳಿಸಿ ಸದಾಶಿವನಗರದಲ್ಲಿ ಮಾತನಾಡಿದ ಅವರು, ಕಳೆದ ವರ್ಷ ನೆಮ್ಮದಿ ಮತ್ತು ಆರೋಗ್ಯಕ್ಕೆ ಸಂಕಟವಾಗಿತ್ತು. ಅವೆಲ್ಲಾ ನಿವಾರಣೆ ಆಗಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡಿದ್ದೇನೆ. ಶಾಲೆ ಮುಚ್ಚಬೇಕು ಅಂತ ನಾನು ಹೇಳುವುದಿಲ್ಲ. ಶಾಲೆಗೆ ಬಹಳ ದಿನ ಬ್ರೇಕ್ ಹಾಕಬಾರದು. ಇದರಿಂದ ಮಕ್ಕಳ ವರ್ತನೆ ಬದಲಾಗುತ್ತೆ. ಮಾತ್ರವಲ್ಲದೆ ಗುಣಮಟ್ಟದ ಶಿಕ್ಷಣದ ಮೇಲೆ ಸಮಸ್ಯೆ ಆಗುತ್ತದೆ ಎಂದರು.
ಕೋವಿಡ್ ನಿಯಮ ಪಾಲನೆ ಮಾಡಿಯೇ ಶಾಲಾ-ಕಾಲೇಜು ತೆರೆಯಲಿ. ಇಲ್ಲ ಅಂದ್ರೆ ವಿದ್ಯಾರ್ಥಿಗಳ ಪ್ರಗತಿ ಮೇಲೆ ದುಷ್ಪರಿಣಾಮ ಬೀರುತ್ತದೆ. ಬ್ರಿಟನ್ ರೂಪಾಂತರ ಹೊಂದಿದ ಕೋವಿಡ್ ವಿಚಾರದಲ್ಲಿ ಸರ್ಕಾರಕ್ಕೆ ಸಾಮಾನ್ಯ ಜ್ಞಾನ ಇರಬೇಕಿತ್ತು. ಅಲ್ಲಿಂದ ಬಂದವರನ್ನು ವಿಮಾನ ನಿಲ್ದಾಣದಲ್ಲಿಯೇ ಆರೋಗ್ಯ ತಪಾಸಣೆಗೊಳಪಡಿಸಬೇಕಿತ್ತು. ಇವತ್ತು ಜನರು ಆತಂಕಕ್ಕೆ ಒಳಗಾಗಿದ್ದಾರೆ. ಆಡಳಿತ ವಿಚಾರದಲ್ಲಿ ಸರ್ಕಾರ ವಿಫಲವಾಗಿದೆ. ನಮ್ಮ ರಾಜ್ಯದವರು ಕೋವಿಡ್ ಹರಡಲಿಲ್ಲ. ಮೊದಲೇ ಸರ್ಕಾರ ಮುನ್ನೆಚ್ಚರಿಕೆಯ ಕ್ರಮ ಕೈಗೊಂಡಿದ್ದರೇ ಈ ಸಮಸ್ಯೆ ಆಗುತ್ತಿರಲಿಲ್ಲ ಎಂದು ಕಿಡಿಕಾರಿದರು.
ಗ್ರಾಮ ಪಂಚಾಯತ್ ಚುನಾವಣೆ ಫಲಿತಾಂಶ ನನಗೆ ಸಂತೋಷ ತಂದಿದೆ. ನಮ್ಮ ಬೆಂಬಲಿತ ಸದಸ್ಯರನ್ನ ಸೆಳೆಯುವ ಕೆಲಸ ಆಗುತ್ತಿದೆ. ಇವರ ದುಡ್ಡಿನ ನಡುವೆ ನಮ್ಮ ಬೆಂಬಲಿತ ಅಭ್ಯರ್ಥಿಗಳು ಗೆದ್ದು ಬಂದಿದ್ದಾರೆ. ನಾನು ರಾಜ್ಯ ಪ್ರವಾಸ ಮಾಡುತ್ತೇನೆ. ಈ ವರ್ಷ ಸಂಘಟನೆಯ ವರ್ಷ – ಹೋರಾಟದ ವರ್ಷ ಎಂದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…