Featured

ಈ ವರ್ಷ ಕಾಂಗ್ರೆಸ್ ಕಾರ್ಯಕರ್ತರಿಗೆ ಹೋರಾಟದ ವರ್ಷ : ಡಿಕೆ ಶಿವಕುಮಾರ್ -Vishwanews24

ಈ ವರ್ಷ ಕಾಂಗ್ರೆಸ್ ಕಾರ್ಯಕರ್ತರಿಗೆ ಹೋರಾಟದ ವರ್ಷ : ಡಿಕೆ ಶಿವಕುಮಾರ್

ಕೇಂದ್ರ, ರಾಜ್ಯ ಸರ್ಕಾರಗಳ ವೈಫಲ್ಯದಿಂದಲೇ ಕೊರೋನಾ ಹೆಚ್ಚಾಯ್ತು..

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಯಾವಾಗ ಇಳೀತಿರಿ ಅಂತ ನಾವು ಕೇಳಿಲ್ಲ. ಇನ್ನೂ ಎರಡು ವರ್ಷ ನಾನೇ ಸಿಎಂ ಎಂದು ಹೇಳಿ ಅವರೇ ಸೆಲ್ಫ್ ಸರ್ಟಿಫಿಕೇಟ್ ಪಡೆದುಕೊಂಡಿದ್ದಾರೆ. ಬಿಜೆಪಿ ಶಾಸಕರು ಸಹ ಮಾತನಾಡುತ್ತಿದ್ದಾರೆ. ಇದನ್ನು ನೋಡಿದರೆ ಬಿಜೆಪಿಯಲ್ಲಿ ಏನೋ ನಡೆಯುತ್ತಿದೆ ಎನ್ನುವುದು ಗೊತ್ತಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದರು.

ಹೊಸ ವರ್ಷದ ಹಿನ್ನಲೆಯಲ್ಲಿ ರಾಜ್ಯದ ಜನತೆಗೆ ಶುಭಾಶಯ ತಿಳಿಸಿ ಸದಾಶಿವನಗರದಲ್ಲಿ ಮಾತನಾಡಿದ ಅವರು, ಕಳೆದ ವರ್ಷ ನೆಮ್ಮದಿ ಮತ್ತು ಆರೋಗ್ಯಕ್ಕೆ ಸಂಕಟವಾಗಿತ್ತು. ಅವೆಲ್ಲಾ ನಿವಾರಣೆ ಆಗಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡಿದ್ದೇನೆ. ಶಾಲೆ ಮುಚ್ಚಬೇಕು ಅಂತ ನಾನು ಹೇಳುವುದಿಲ್ಲ. ಶಾಲೆಗೆ ಬಹಳ ದಿನ ಬ್ರೇಕ್ ಹಾಕಬಾರದು. ಇದರಿಂದ ಮಕ್ಕಳ ವರ್ತನೆ ಬದಲಾಗುತ್ತೆ. ಮಾತ್ರವಲ್ಲದೆ ಗುಣಮಟ್ಟದ ಶಿಕ್ಷಣದ ಮೇಲೆ ಸಮಸ್ಯೆ ಆಗುತ್ತದೆ ಎಂದರು.

http://ಕಾಪು ಕರಂದಾಡಿ ವಾದ್ಯ ಬ್ಯಾಂಡು ನಾಗಸ್ವರದೊಂದಿಗೆ ವಿದ್ಯಾರ್ಥಿಗಳಿಗೆ ಶಾಲೆಗೆ ಸ್ವಾಗತ.

ಕೋವಿಡ್ ನಿಯಮ ಪಾಲನೆ ಮಾಡಿಯೇ ಶಾಲಾ-ಕಾಲೇಜು ತೆರೆಯಲಿ. ಇಲ್ಲ ಅಂದ್ರೆ ವಿದ್ಯಾರ್ಥಿಗಳ ಪ್ರಗತಿ ಮೇಲೆ ದುಷ್ಪರಿಣಾಮ ಬೀರುತ್ತದೆ. ಬ್ರಿಟನ್ ರೂಪಾಂತರ ಹೊಂದಿದ ಕೋವಿಡ್ ವಿಚಾರದಲ್ಲಿ ಸರ್ಕಾರಕ್ಕೆ ಸಾಮಾನ್ಯ ಜ್ಞಾನ ಇರಬೇಕಿತ್ತು. ಅಲ್ಲಿಂದ ಬಂದವರನ್ನು ವಿಮಾನ ನಿಲ್ದಾಣದಲ್ಲಿಯೇ ಆರೋಗ್ಯ ತಪಾಸಣೆಗೊಳಪಡಿಸಬೇಕಿತ್ತು. ಇವತ್ತು ಜನರು ಆತಂಕಕ್ಕೆ ಒಳಗಾಗಿದ್ದಾರೆ. ಆಡಳಿತ ವಿಚಾರದಲ್ಲಿ ಸರ್ಕಾರ ವಿಫಲವಾಗಿದೆ. ನಮ್ಮ ರಾಜ್ಯದವರು ಕೋವಿಡ್ ಹರಡಲಿಲ್ಲ. ಮೊದಲೇ ಸರ್ಕಾರ ಮುನ್ನೆಚ್ಚರಿಕೆಯ ಕ್ರಮ ಕೈಗೊಂಡಿದ್ದರೇ ಈ ಸಮಸ್ಯೆ ಆಗುತ್ತಿರಲಿಲ್ಲ ಎಂದು ಕಿಡಿಕಾರಿದರು.

ಗ್ರಾಮ ಪಂಚಾಯತ್ ಚುನಾವಣೆ ಫಲಿತಾಂಶ ನನಗೆ ಸಂತೋಷ ತಂದಿದೆ. ನಮ್ಮ ಬೆಂಬಲಿತ ಸದಸ್ಯರನ್ನ ಸೆಳೆಯುವ ಕೆಲಸ ಆಗುತ್ತಿದೆ. ಇವರ ದುಡ್ಡಿನ ನಡುವೆ ನಮ್ಮ ಬೆಂಬಲಿತ ಅಭ್ಯರ್ಥಿಗಳು ಗೆದ್ದು ಬಂದಿದ್ದಾರೆ. ನಾನು ರಾಜ್ಯ ಪ್ರವಾಸ ಮಾಡುತ್ತೇನೆ. ಈ ವರ್ಷ ಸಂಘಟನೆಯ ವರ್ಷ – ಹೋರಾಟದ ವರ್ಷ ಎಂದರು.

 

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

3 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

4 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

4 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

5 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

5 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

5 hours ago