Featured

ಈ ಸಲ ಗೆದ್ದರೆ ಇನ್ನಷ್ಟು ನಾಚಿಕೆ ಮಾನ, ಮರ್ಯಾದೆ ಕಳೆದುಕೊಳ್ಳುತ್ತಾನೆ : ಪ್ರಧಾನಿ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ ಪ್ರಕಾಶ್ ರಾಜ್ – Vishwanews24

ಧರ್ಮದ ಆದಾರದಲ್ಲಿ ರಾಜಕಾರಣ ಮಾಡುವ ಮೂಲಕ ಬಿಜೆಪಿ ದೇಶ ಹಾಳು ಮಾಡಿದೆ

ಹಿಂದೆ ಸ್ವಾತಂತ್ರ್ಯಕ್ಕಾಗಿ ಉಪವಾಸ ಮಾಡುವ ನಾಯಕರಿದ್ದರು, ಆದರೆ ಈಗ ದೇವಸ್ಥಾನದ ಉದ್ಘಾಟನೆಗೆ ಉಪವಾಸ ಮಾಡುವ ನಾಯಕನಿದ್ದಾನೆ..

ದಿನಕ್ಕೆ ಐದು ಕಾಸ್ಟ್ಯೂಮ್ ಚೇಂಜ್ ಮಾಡುತ್ತಾನೆ. ಕರ್ಕಶವಾದ ಲೌಡ್ ಸ್ಪೀಕರ್ ಅವನು..

ಈಗ ಕ್ಯಾಮರಾ ಹಿಡಿದುಕೊಂಡು ನೀರೊಳಗೆ ಸೇರಿದ್ದಾನೆ, ಮುಂದಿನ ಚುನಾವಣೆಗೆ ಚಂದ್ರನ ಮೇಲೆ ನಿಂತುಕೊಳ್ಳುತ್ತಾನೆ..

ಪ್ರಧಾನಿ ಮೋದಿ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ ಪ್ರಕಾಶ್ ರಾಜ್

ಮಂಗಳೂರು: “ಜನರನ್ನು ಮಂಗ ಮಾಡಲು ಅತ್ಯಂತ ಶ್ರೇಷ್ಠ ನಟ ದೇಶದ ನಾಯಕನಾಗಿದ್ದಾನೆ. 2019ರಲ್ಲಿ ಆತ ಗುಹೆ ಸೇರಿಕೊಂಡ. ಈಗ ಕ್ಯಾಮರಾ ಹಿಡಿದುಕೊಂಡು ನೀರೊಳಗೆ ಸೇರಿದ್ದಾನೆ.‌ ಮುಂದಿನ ಚುನಾವಣೆಗೆ ಚಂದ್ರನ ಮೇಲೆ ನಿಂತುಕೊಳ್ಳುತ್ತಾನೆ” ಎಂದು ಪ್ರಧಾನಿ‌ ನರೇಂದ್ರ ಮೋದಿ ವಿರುದ್ಧ ನಟ ಪ್ರಕಾಶ್ ರಾಜ್ ವಾಗ್ದಾಳಿ ನಡೆಸಿದ್ದಾರೆ.

ನಗರದ ತೊಕ್ಕೊಟ್ಟಿನ ಯುನಿಟಿ ಮೈದಾನದಲ್ಲಿ ಇಂದು ನಡೆದ ಡಿವೈಎಫ್ಐ 12ನೇ ರಾಜ್ಯ ಸಮ್ಮೇಳನದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

“ಈ ಹಿಂದೆ ಸ್ವಾತಂತ್ರ್ಯಕ್ಕಾಗಿ ಉಪವಾಸ ಮಾಡುವ ನಾಯಕರಿದ್ದರು. ಆದರೆ ಈಗ ದೇವಸ್ಥಾನದ ಉದ್ಘಾಟನೆಗೆ ಉಪವಾಸ ಮಾಡುವ ನಾಯಕನಿದ್ದಾನೆ. ದಿನಕ್ಕೆ ಐದು ಕಾಸ್ಟ್ಯೂಮ್ ಚೇಂಜ್ ಮಾಡುತ್ತಾನೆ. ಕರ್ಕಶವಾದ ಲೌಡ್ ಸ್ಪೀಕರ್ ಅವನು.‌ ಈತ ವಂದೇ ಭಾರತ್​ಗೆ ಬಾವುಟ ತೋರಿಸಿದಷ್ಟು ಬಾವುಟವನ್ನು ಸ್ಟೇಷನ್ ಮಾಸ್ಟರ್ ಸಹ ತೋರಿಸಿರಲಿಕ್ಕಿಲ್ಲ” ಎಂದರು.

“ಕಲಾವಿದನಾಗಿ ಮಾತನಾಡಬೇಕಾಗುವುದು ನನ್ನ ಜವಾಬ್ದಾರಿ. ಸಮಸ್ಯೆಗಳಾದಾಗ ಬಂದು ನಾನು ನಿಲ್ಲಬೇಕಿದೆ. ದೇಹಕ್ಕಾದ ಗಾಯಗಳು ಸುಮ್ಮನಿದ್ದರೂ ಶಮನವಾಗುತ್ತವೆ. ಆದರೆ ದೇಶಕ್ಕಾದ ಗಾಯ ನಾವು ಸುಮ್ಮನಿದ್ದಷ್ಟೂ ಹೆಚ್ಚಾಗುತ್ತದೆ.‌ ಒಬ್ಬ ಕಲಾವಿದ ಮೌನವಾದರೆ ಇಡೀ ಸಮಾಜ ಮೌನವಾದಂತೆ. ಪ್ರಜಾಪ್ರಭುತ್ವದಲ್ಲಿ ಸೂಕ್ಷ್ಮತೆ ಇರಬೇಕು” ಎಂದು ಹೇಳಿದರು.

“ಆರ್​ಎಸ್‌ಎಸ್, ಬಿಜೆಪಿಯಂತಹ ಕಿಡ್ನ್ಯಾಪ್‌ ಟೀಮ್ ದೇಶದಲ್ಲಿ ಬೇರೆ ಇಲ್ಲ. ಮಾತೆತ್ತಿದ್ರೆ ರಾಮಮಂದಿರ, ಮಸೀದಿ, ಹಿಂದೂ ಧರ್ಮ ಅಂತಾರೆ. ಎಷ್ಟು ಅಂತಾ ಅಗೀತಾ ಹೋಗ್ತೀರಾ?. ಮುಂದೆ ಹರಪ್ಪ, ಮೊಹೆಂಜದಾರೋ ಸಿಗಬಹುದು. ಹಾಗಾದರೆ ಮತ್ತೆ‌ ಶಿಲಾಯುಗಕ್ಕೆ ಹೋಗ್ತೀರಾ ಎಂದು ಪ್ರಶ್ನಿಸಿದರು.

“ಪೆಟ್ರೋಲ್ ಮುಸ್ಲಿಂ ರಾಷ್ಟ್ರದಲ್ಲಿ ಸಿಗುತ್ತೆ. ಹಾಗಾದ್ರೆ ಪೆಟ್ರೋಲ್ ಬೇಡ ಅಂತಾ ಎತ್ತಿನಗಾಡಿಯಲ್ಲಿ ಹೋಗ್ತೀರಾ?. ಈ ಸಲ ಗೆದ್ದರೆ ಇನ್ನಷ್ಟು ನಾಚಿಕೆ ಮಾನ, ಮರ್ಯಾದೆ ಕಳೆದುಕೊಳ್ಳುತ್ತಾನೆ. ಹಿಂದೂ ರಾಷ್ಟ್ರ ಮಾಡಲು ಈ ಮಂಗಗಳು ತಿರುಗಾಡ್ತಿವೆ. ಹಿಂದೂ ರಾಷ್ಟ್ರ ಆದ ಮೇಲೆ ಮತ್ತೆ ಜಾತಿ ಪದ್ಧತಿ ಶುರು ಮಾಡುತ್ತಾರೆ” ಎಂದರು.

“ಫೇಕ್ ಡಿಗ್ರಿಯಲ್ಲಿ ಓಡಾಡುತ್ತಿರುವವನಿಗೆ ಇದೆಲ್ಲಾ ಹೇಗೆ ಗೊತ್ತಾಗುತ್ತೆ?. ಪಾರ್ಲಿಮೆಂಟ್ ಮೇಲೆ ನಾಲ್ಕೈದು ಯುವಕ-ಯುವತಿಯರು ದಾಳಿ ಮಾಡಿದರು. ಯುವಕರು ಏಕೆ ಹಾಗೆ ಮಾಡಿದರು ಎಂದು ನಾವು ಯೋಚನೆ ಮಾಡಬೇಕು. ನಿರುದ್ಯೋಗ ಸಮಸ್ಯೆ ಇದೆ ಎಂದು ಯುವಕರು ಹೇಳ್ತಿದ್ದಾರೆ. ಬಾಲ್ಯದಲ್ಲಿದ್ದಾಗ ಮಂಗಳೂರು ಹೀಗಾಗುತ್ತೆ ಎಂದು ಗೊತ್ತಿರಲಿಲ್ಲ. ಎಷ್ಟು ಜನ ಯುವಕರು ಜೈಲಿನಲ್ಲಿ ಕೊಳೀತಾ ಇದ್ದಾರೆ. ಗಲಾಟೆ ಮಾಡಿಸುವ ಒಬ್ಬ ಜನಪ್ರತಿನಿಧಿಯ ಮಕ್ಕಳು ಜೈಲಿನಲ್ಲಿದ್ದಾರಾ?” ಎಂದರು.

Vishwa News 24

Recent Posts

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

28 seconds ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

34 minutes ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

50 minutes ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

57 minutes ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

1 hour ago

ಉಡುಪಿ ನಗರಸಭೆ ವ್ಯಾಪ್ತಿಯ ಮೂಲ ಸೌಕರ್ಯ ಅಭಿವೃದ್ಧಿಗೆ ರೂ. 30 ಕೋಟಿ ಅನುದಾನ ಮಂಜೂರು ಮಾಡುವಂತೆ  ಶಾಸಕ ಯಶ್ ಪಾಲ್ ಮನವಿ – vishwanews24

ಉಡುಪಿ ನಗರಸಭೆ ಮೂಲ ಸೌಕರ್ಯ ಅಭಿವೃದ್ಧಿಗೆ ರೂ. 30 ಕೋಟಿ ವಿಶೇಷ ಅನುದಾನ ಮಂಜೂರು ಮಾಡುವಂತೆ ನಗರಾಭಿವೃದ್ಧಿ ಸಚಿವ ಯತೀಂದ್ರ…

3 hours ago