Featured

ಉಕ್ರೇನ್‌ನಲ್ಲಿರುವ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲು ಸೂಕ್ತ ಕ್ರಮ – ಸಿಎಂ ಬೊಮ್ಮಾಯಿ – Vishwanews24

ಉಕ್ರೇನ್‌ನಲ್ಲಿರುವ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲು ಸೂಕ್ತ ಕ್ರಮ – ಸಿಎಂ ಬೊಮ್ಮಾಯಿ – Vishwanews24

ಬೆಂಗಳೂರು: ಉಕ್ರೇನ್‍ನಲ್ಲಿ ಸಿಲುಕಿರುವ ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದ ಅವರು, ರಷ್ಯಾ ಮತ್ತು ಉಕ್ರೇನ್ ಯುದ್ಧದ ಸಂದರ್ಭದಲ್ಲಿ ಸುಮಾರು ಭಾರತದ ವಿದ್ಯಾರ್ಥಿಗಳು ವಿಮಾನ ನಿಲ್ದಾಣಕ್ಕೆ ತಲುಪುವಾಗ ಯುದ್ಧ ಪ್ರಾರಂಭವಾಗಿದ್ದರಿಂದ 100 ವಿದ್ಯಾರ್ಥಿಗಳು ಎರಡು ಬಸ್‍ಗಳಲ್ಲಿ ಸಿಲುಕಿಕೊಂಡಿದ್ದಾರೆ. ಇವರಲ್ಲಿ 10 ಕ್ಕಿಂತ ಹೆಚ್ಚು ಕನ್ನಡಿಗರಿದ್ದು, ಅವರ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲಾಗುತ್ತಿದೆ. ಉಕ್ರೇನ್‍ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯೊಂದಿಗೂ ನಿರಂತರ ಸಂಪರ್ಕದಲ್ಲಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಉಕ್ರೇನ್‍ನಲ್ಲಿ ಭಾರತೀಯ ವಿದ್ಯಾರ್ಥಿಗಳ ಸುರಕ್ಷಿತವಾಗಿರಲು ಭಾರತೀಯ ರಾಯಭಾರ ಕಚೇರಿ ಸೂಕ್ತ ಮಾರ್ಗದರ್ಶನವನ್ನು ನೀಡಿದೆ. ವಿಮಾನಗಳು ಪುನ: ಪ್ರಾರಂಭವಾದಾಗ ವಿದ್ಯಾರ್ಥಿಗಳನ್ನು ಭಾರತಕ್ಕೆ ಸುರಕ್ಷಿತವಾಗಿ ಕರೆತರಲು ಕ್ರಮ ಕೈಗೊಳ್ಳಲಾಗುತ್ತಿದೆ. ಈ ನಿಟ್ಟಿನಲ್ಲಿ ಭಾರತ ಸರ್ಕಾರದ ವಿದೇಶಾಂಗ ಕಾರ್ಯದರ್ಶಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಕೇಂದ್ರ ವಿದೇಶಾಂಗ ಸಚಿವರೊಂದಿಗೂ ಈ ಬಗ್ಗೆ ಚರ್ಚಿಸಲಾಗುವುದು ಎಂದರು.

ಉಕ್ರೇನ್‍ನಲ್ಲಿ ಯುದ್ಧದ ಛಾಯೆಯಿಂದಾಗಿ ಕಳೆದ ವಾರವೇ 200 ಭಾರತೀಯರು ಮರಳಿದ್ದರು. ಆಗ ವಿದ್ಯಾರ್ಥಿಗಳಿಗೆ ಮಾಹಿತಿ ಇರಲಿಲ್ಲವೇ ಎಂಬುದಕ್ಕೆ ಪ್ರತಿಕ್ರಿಯಿಸಿ, ವಿದ್ಯಾರ್ಥಿಗಳು ಬ್ಯಾಚ್‍ಗಳಲ್ಲಿ ಭಾರತಕ್ಕೆ ಮರಳುತ್ತಿದ್ದು, ಈ ಬ್ಯಾಚ್ ಕಡೆಯದಾಗಿತ್ತು. ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಲಾಗುವುದು ಎಂದು ತಿಳಿಸಿದರು,

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago