Featured

ಉಕ್ರೇನ್‌ನಲ್ಲಿ ಸಿಲುಕಿದ್ದ ಕರ್ನಾಟಕದ  86 ಮಂದಿ ವಿದ್ಯಾರ್ಥಿಗಳು ವಾಪಸ್ – Vishwanews24

ಉಕ್ರೇನ್‌ನಲ್ಲಿ ಸಿಲುಕಿದ್ದ ಕರ್ನಾಟಕದ  86 ಮಂದಿ ವಿದ್ಯಾರ್ಥಿಗಳು ವಾಪಸ್ – Vishwanews24

ಬೆಂಗಳೂರು : ಉಕ್ರೇನ್‌ನಲ್ಲಿ ಸಿಲುಕಿದ್ದ ಕರ್ನಾಟಕದ 694 ವಿದ್ಯಾರ್ಥಿಗಳ ಪೈಕಿ 86 ಮಂದಿ ಇದುವರೆಗೂ ವಾಪಸ್ ಆಗಿದ್ದಾರೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ನೋಡಲ್‌ ಅಧಿಕಾರಿ ಮನೋಜ್‌ ರಂಜನ್‌ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಮನೋಜ್‌ ರಂಜನ್‌, ಕರ್ನಾಟಕದ 694 ಜನರು ಉಕ್ರೇನ್‌ನಲ್ಲಿ ಸಿಲುಕಿದ್ದು, ಫೆಬ್ರವರಿ 27 ರಿಂದ ಬುಧವಾರದ ತನಕ 86 ಜನರು ರಾಜ್ಯಕ್ಕೆ ವಾಪಸ್ ಆಗಿದ್ದಾರೆ ಎಂದರು.

ಉಕ್ರೇನ್‌ನಲ್ಲಿರುವ ವಿದ್ಯಾರ್ಥಿಗಳ ಕುಟುಂಬಸ್ಥರನ್ನು ಸರ್ಕಾರದ ಅಧಿಕಾರಿಗಳು ಭೇಟಿ ಮಾಡಿ ಧೈರ್ಯ ತುಂಬುತ್ತಿದ್ದು, 314 ಜನರ ಮನೆಗಳಿಗೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. 425 ಪೋಷಕರನ್ನು ದೂರವಾಣಿ ಮೂಲಕ ಸಂಪರ್ಕಿಸಲಾಗಿದೆ ಎಂದಿದ್ದಾರೆ.

ಇನ್ನು ಯಾವ ಯಾವ ಜಿಲ್ಲೆಗಳ ವಿದ್ಯಾರ್ಥಿಗಳು ಉಕ್ರೇನ್‌ನಲ್ಲಿ ಸಿಲುಕಿದ್ದಾರೆ ಎಂಬ ಮಾಹಿತಿಯನ್ನು ಜಿಲ್ಲಾಡಳಿತಕ್ಕೆ ಕಳುಹಿಸಿಕೊಡಲಾಗಿದ್ದು, ಜಿಲ್ಲಾ ಮಟ್ಟದ ಅಧಿಕಾರಿಗಳ ತಂಡ ಪೋಷಕರನ್ನು ಭೇಟಿ ಮಾಡಿ ರಕ್ಷಣಾ ಕಾರ್ಯಾಚರಣೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಣೆ ನೀಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.

 

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

2 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

2 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

2 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

3 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

5 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

6 hours ago